ಬೆಂಗಳೂರು : ಕೇಂದ್ರ ಸರ್ಕಾರದ ರೈತ ವಿರೋಧಿ ಕೃಷಿ ಮಸೂದೆ ವಿರೋಧಿಸಿ ಕಾಂಗ್ರೆಸ್ ನಿಂದ ರಾಜಭವನ ಮುತ್ತಿಗೆಗೆ ತೆರಳುತ್ತಿದ್ದಂತ ಕಾಂಗ್ರೆಸ್ ಮುಖಂಡರಾದಂತ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಡಾ.ಜಿ.ಪರಮೇಶ್ವರ್, ತನ್ವೀರ್ ಸೇಠ್ ಸೇರಿದಂತೆ ವಿವಿಧ ಕಾಂಗ್ರೆಸ್ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂದು ಕಾಂಗ್ರೆಸ್ ಹಾಗೂ ಕಿಸಾನ್ ಘಟಕದಿಂದ ರೈತ ವಿರೋಧಿ ಕೃಷಿ ಮಸೂದೆಗಳ ವಿರುದ್ಧ ರಾಜಭವನ ಮುತ್ತಿಗೆಗೆ ಕರೆ ನೀಡಲಾಗಿತ್ತು. ಮೆಜೆಸ್ಟಿಕ್ ನ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯಿಂದ ಹೊರಟಂತ ಪ್ರತಿಭಟನಾ ಮೆರವಣಿಗೆ ಫ್ರೀಡಂ ಪಾರ್ಕ್ ನಲ್ಲಿ ಸಭೆ ನಡೆಸಿ, ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಮುಖಂಡರು ವಾಗ್ದಾಳಿ ನಡೆಸಿದ್ದರು.
ಈ ಬಳಿಕ ರಾಜಭವನಕ್ಕೆ ಮುತ್ತಿಗೆ ಹಾಕಲು ತೆರಳಿದಂತ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರನ್ನು ಪೊಲೀಸರು ಮನವೊಲಿಸೋದಕ್ಕೆ ಮುಂದಾಗಿದ್ದರು. ಆದ್ರೇ ಪೊಲೀಸರ ಮನವೊಲಿಕೆಗೆ ಒಪ್ಪದೇ ರಾಜಭವನಕ್ಕೆ ಮುತ್ತಿಗೆ ಹಾಕಲು ಯತ್ನಿಸಿದಂತ ಕಾಂಗ್ರೆಸ್ ಮುಖಂಡರಾದಂತ ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಡಾ.ಜಿ.ಪರಮೇಶ್ವರ್ ಸೇರಿದಂತೆ ಅನೇಕ ಕಾರ್ಯಕರ್ತರು, ರೈತರನ್ನು ಪೊಲೀಸರು ಮಹಾರಾಣಿ ಕಾಲೇಜಿನ ಬಳಿಯಲ್ಲೇ ವಶಕ್ಕೆ ಪಡೆದಿದ್ದಾರೆ.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…