ಜೈಪುರ: ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, ಸಿಎಂ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದೆ.
4,371 ಪಂಚಾಯತ್ ಸಮಿತಿ ಸ್ಥಾನಗಳ ಪೈಕಿ ಬಿಜೆಪಿ 1,835, ಕಾಂಗ್ರೆಸ್ 1,718 ಸ್ಥಾನಗಳನ್ನು ಗೆದ್ದುಕೊಂಡಿದೆ. ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷದ 56 ಮಂದಿ, 420 ಪಕ್ಷೇತರ ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಜಿಲ್ಲಾ ಪರಿಷತ್ ಒಟ್ಟು 636 ಸ್ಥಾನಗಳ ಪೈಕಿ ಬಿಜೆಪಿ 266, ಕಾಂಗ್ರೆಸ್ 204 ಸ್ಥಾನಗಳನ್ನು ಗೆದ್ದುಕೊಂಡಿದೆ.
ಸಚಿನ್ ಪೈಲಟ್ ಪ್ರತಿನಿಧಿಸುತ್ತಿರುವ ಟೋಂಕ್ ಕ್ಷೇತ್ರದ ಒಟ್ಟು 25 ಸ್ಥಾನಗಳ ಪೈಕಿ ಬಿಜೆಪಿ 15 ಕಾಂಗ್ರೆಸ್ 10 ಸ್ಥಾನಗಳನ್ನು ಗೆದ್ದುಕೊಂಡಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಸತೀಶ್ ಪೂನಿಯಾ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಬಿಜೆಪಿ ಮತ್ತೆ ಜನ ಬೆಂಬಲ ವ್ಯಕ್ತವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ರೈತರು ಮತ್ತು ಗ್ರಾಮೀಣ ಭಾಗಕ್ಕೆ ನೀಡಿದ ಅಭಿವೃದ್ಧಿ ಕೆಲಸಗಳಿಂದ ಜನ ನಮಗೆ ಮತ ಹಾಕಿದ್ದಾರೆ. ಇದೊಂದು ಐತಿಹಾಸಿಕ ಜಯ ಎಂದು ಬಣ್ಣಿಸಿದ್ದಾರೆ.
ಕೇಂದ್ರ ಸರ್ಕಾರ ರೈತರ ಅಭಿವೃದ್ಧಿಗೆ ತಂದಿರುವ ನೀತಿಯನ್ನು ವಿರೋಧಿಸಿ ಕಾಂಗ್ರೆಸ್ ಪ್ರಾಯೋಜಕತ್ವದ ಭಾರತ್ ಬಂದ್ ನಡೆಯುತ್ತಿರುವಾಗಲೇ ರಾಜ್ಯದಲ್ಲಿ ಈ ಫಲಿತಾಂಶ ಬಂದಿರುವುದು ನಮಗೆ ಸಂತಸ ತಂದಿದೆ ಎಂದು ಸತೀಶ್ ಪೂನಿಯಾ ಹೇಳಿದರು.
ನ. 23, ನ.27, ಡಿ.1, ಡಿ.5 ರಂದು ಒಟ್ಟು 4 ಹಂತದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆದಿತ್ತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…