ಮುಂಬೈ: ಮುಂಬೈನಲ್ಲಿರುವ ಅತೃಪ್ತ ಶಾಸಕರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದು, ನಮ್ಮ ರಾಜೀನಾಮೆ ಅಂಗೀಕರಿಸಲು ಸ್ಪೀಕರ್ ಅವರಿಗೆ ನಿರ್ದೇಶನ ನೀಡುವಂತೆ ಮನವಿ ಸಲ್ಲಿಸಿದ್ದಾರೆ.
ಇಂದು ಬೆಳಗ್ಗೆ ಮುಂಬೈನಲ್ಲಿರುವ 10 ಶಾಸಕರು ಅರ್ಜಿಯನ್ನು ಸಲ್ಲಿಸಿದ್ದಾರೆ. ಶನಿವಾರ ನಾವು ಸ್ಪೀಕರ್ ಕಚೇರಿಗೆ ತೆರಳಿ ರಾಜೀನಾಮೆ ಸಲ್ಲಿಸಿದ್ದೇವೆ. ಆದರೆ ಇಲ್ಲಿಯವರೆಗೂ ರಾಜೀನಾಮೆ ಅಂಗೀಕಾರವಾಗಿಲ್ಲ. ಹೀಗಾಗಿ ರಾಜೀನಾಮೆಯನ್ನು ಅಂಗೀಕಾರ ಮಾಡುವಂತೆ ಸ್ಪೀಕರ್ ಅವರಿಗೆ ಸೂಚನೆ ನೀಡಬೇಕೆಂದು 10 ಶಾಸಕರು ಮನವಿ ಮಾಡಿದ್ದಾರೆ.
ರಾಜೀನಾಮೆ ಅಂಗೀಕಾರಕ್ಕೆ ವಿಧಾನಸಭಾ ಸ್ಪೀಕರ್ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಅತೃಪ್ತ ಶಾಸಕರ ಬಣ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದೆ.
ಕ್ರಮಬದ್ಧವಾದ ರಾಜೀನಾಮೆಗಳನ್ನು ಕೂಡಾ ಸ್ಪೀಕರ್ ರಮೇಶ್ ಕುಮಾರ್ ಅವರು ಅಂಗೀಕರಿಸಿಲ್ಲ, ಉಳಿದ ರಾಜೀನಾಮೆಗಳನ್ನು ತಿರಸ್ಕರಿಸಲು ಸೂಕ್ತ ಕಾರಣ ಕೂಡಾ ನೀಡದೆ ವಿಳಂಬ ನೀತಿ ಅನುಸರಿಸುತ್ತಿರುವುದು ಸರಿಯಲ್ಲ ಎಂದು ಆರೋಪಿಸಿ ರಮೇಶ್ ಕುಮಾರ್ ವಿರುದ್ಧ ಅತೃಪ್ತ ಶಾಸಕರು, ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಸುಪ್ರೀಂಕೋರ್ಟ್ ನಲ್ಲಿ ಗುರುವಾರ(ಜುಲೈ 11) ಅರ್ಜಿ ವಿಚಾರಣೆಗೆ ಬರಲಿದೆ. ಅತೃಪ್ತರ ಪರ ಮುಕುಲ್ ರೋಹ್ಟಗಿ ಅವರು ವಾದಿಸಲಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…