ರಾಜೀನಾಮೆ ಅಂಗೀಕಾರ ನಿರ್ಧರಿಸುವ ಸಂಪೂರ್ಣ ಅಧಿಕಾರ ಸ್ಪೀಕರ್​ಗೆ ಇದೆ : ಸುಪ್ರೀಂಕೋರ್ಟ್​ ಮಹತ್ವದ ತೀರ್ಪು -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ರಾಜೀನಾಮೆ ಅಂಗೀಕಾರ ಅಥವಾ ಅನರ್ಹತೆ ವಿಷಯದಲ್ಲಿ ತೀರ್ಮಾನ ಕೈಗೊಳ್ಳಲು ಯಾವುದೇ ಕಾಲಮಿತಿ ಇಲ್ಲ. ಅದನ್ನು ನಿರ್ಧರಿಸುವ ಸಂಪೂರ್ಣ ಅಧಿಕಾರ ಸ್ಪೀಕರ್​ಗೆ ಇದೆ ಎಂದು ಸುಪ್ರೀಂಕೋರ್ಟ್​ ಮಹತ್ವದ ತೀರ್ಪು ನೀಡಿದೆ.

ಆದರೆ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ರಾಜೀನಾಮೆ ನೀಡಿದ 15 ಶಾಸಕರು ಸದನದಲ್ಲಿ ಪಾಲ್ಗೊಳ್ಳುವಂತೆ ಬಲವಂತ ಮಾಡುವಂತಿಲ್ಲ ಎಂದು ಕೋರ್ಟ್​ ಹೇಳಿದೆ.

ರಾಜೀನಾಮೆ ಅಂಗೀಕರಿಸಲು ಸ್ಪೀಕರ್ ವಿಳಂಬ ಧೋರಣೆ ಅನುಸರಿಸುತ್ತಿದ್ದಾರೆ. ಇದು ಸಾಂವಿಧಾನಿಕ ವಿರೋಧಿ ಧೋರಣೆ ಎಂದು ಅತೃಪ್ತ ಶಾಸಕರು ವಾರದ ಹಿಂದೆಯೇ ಸುಪ್ರೀಂಕೋರ್ಟ್​ ಮೆಟ್ಟಿಲು ಏರಿದ್ದರು. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಶಾಸಕರ ರಾಜೀನಾಮೆಯನ್ನು ಸ್ಪೀಕರಿಸಬೇಕು ಎಂದು ಆದೇಶಿಸಿ ಕ್ರಮಕೈಗೊಳ್ಳಲು ಸೂಚಿಸಿತ್ತು. ಅದಕ್ಕೂ ಮೊದಲು ರಾಜೀನಾಮೆ ಪತ್ರ ಪರಿಶೀಲಿಸಿದ್ದ ಸ್ಪೀಕರ್ ಕೆಲ ರಾಜೀನಾಮೆ ಪತ್ರಗಳು ಕ್ರಮಬದ್ಧವಾಗಿಲ್ಲ ಎಂದು ತಿಳಿಸಿದ್ದರು.