ಶಿವಮೊಗ್ಗ: ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆಯಲ್ಲಿ ಬಿಜೆಪಿಯ ಹಲವು ಕಾರ್ಯಕರ್ತರು ರಾಜೀನಾಮೆ ನೀಡುತ್ತಿದ್ದು ಈ ವಿಚಾರವಾಗಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ಕೊಟ್ಟಿದ್ದಾರೆ. ನಮ್ಮ ಹುಡುಗರಿಗೆ ಪ್ರಬುದ್ಧತೆ ಕಮ್ಮಿ. ಹಾಗಾಗಿ ರಾಜೀನಾಮೆ ನೀಡ್ತಿದ್ದಾರೆ. ಅವರು ರಾಜೀನಾಮೆ ಕೊಟ್ರೆ ಹೊಸಬರು ಬರ್ತಾರೆ, ಬಿಜೆಪಿಗೇನು ಕಾರ್ಯಕರ್ತರು ಸಿಗುವುದಿಲ್ಲವೇ ಎಂದು ಈಶ್ವರಪ್ಪ ಹೇಳಿದ್ದಾರೆ.
ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಬಳಿಕ ಬಿಜೆಪಿಯ ಅನೇಕ ಪದಾಧಿಕಾರಿಗಳು ರಾಜೀನಾಮೆ ನೀಡುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಈಶ್ವರಪ್ಪ, ನಮ್ಮ ಹುಡುಗರಿಗೆ ಪ್ರಬುದ್ಧತೆ ಕಡಿಮೆ ಹಾಗಾಗಿ ಹಿರಿಯರ ಬಗ್ಗೆ ಮಾತನಾಡುತ್ತಾರೆ. ಹಿರಿಯರಾಗಿ ಅವರು ಬೈದರು ಎಂದು ನಾವು ಅವರಿಗೆ ವಾಪಸ್ ಬೈಯುವುದೇ ಸರಿಯೇ. ನಾವು ಅವರನ್ನು ಸಮಾಧಾನ ಮಾಡುತ್ತೇವೆ ಎಂದಿದ್ದಾರೆ.
ಯುವ ಕಾರ್ಯಕರ್ತರು ರಾಜೀನಾಮೆ ಕೊಟ್ಟರು ಎಂದಾಕ್ಷಣ ಅವರ ರಾಜೀನಾಮೆ ಅಂಗೀಕಾರ ಮಾಡಿ ಮನೆಗೆ ಕಳುಹಿಸುವುದು ಕೇವಲ ಐದು ನಿಮಿಷದ ಕೆಲಸ. ಆದರೆ ಅವರಿಗೆ ಸಮಾಧಾನ ಮಾಡುತ್ತೇವೆ. ಬದಲಾಗುತ್ತಾರೆ ಎಂಬ ನಂಬಿಕೆ ನಮಗಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…