Featured

ರಾಜೀನಾಮೆ ನನ್ನ ಸ್ವಯಂ ನಿರ್ಧಾರ ; ಯಾವುದೇ ಒತ್ತಡ ಇಲ್ಲ : ಬಿ.ಎಸ್. ವೈ -Vishwanews24

ರಾಜೀನಾಮೆ ನನ್ನ ಸ್ವಯಂ ನಿರ್ಧಾರ ; ಯಾವುದೇ ಒತ್ತಡ ಇಲ್ಲ : ಬಿ.ಎಸ್. ವೈ -Vishwanews24

ಯಾವುದೇ ಸ್ಥಾನಮಾನ ಪಡೆಯದೇ ಪಕ್ಷ ಸಂಘಟಿಸುವ ಕೆಲಸ ಮಾಡುತ್ತೇನೆ..

ಕರ್ನಾಟಕದಲ್ಲಿ ಪಕ್ಷವನ್ನು ಬಲಪಡಿಸಲು ಕೆಲಸ ಮಾಡುತ್ತೇನೆ..

ಮುಂದೆ ಬರುವ ಮುಖ್ಯಮಂತ್ರಿಗಳು ಎಲ್ಲಾ ರೀತಿಯ ಸಹಕಾರ ಕೊಡಲಿದ್ದಾರೆ..

ಬೆಂಗಳೂರು: ರಾಜೀನಾಮೆ ನೀಡುವಂತೆ ದೆಹಲಿಯಿಂದ ನನಗೆ ಯಾವುದೇ ಒತ್ತಡ ಇಲ್ಲ ನಾನೇ ಸ್ವಯಂ ನಿರ್ಧಾರ ಮಾಡಿ ರಾಜೀನಾಮೆ ನೀಡಿದ್ದೇನೆ, ರಾಜ್ಯಪಾಲು ಹುದ್ದೆ ಸೇರಿ ಯಾವುದೇ ಸ್ಥಾನಮಾನ ಪಡೆಯದೇ ಪಕ್ಷ ಸಂಘಟಿಸುವ ಕೆಲಸ ಮಾಡುತ್ತೇನೆ ಎಂದು ಉಸ್ತುವಾರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ರಾಜಭವನದಲ್ಲಿ ಮಾತನಾಡಿದ ಅವರು, ಸರ್ಕಾರಕ್ಕೆ ಎರಡು ವರ್ಷ ತುಂಬಿದ ಈ ಸಂದರ್ಭದಲ್ಲಿ ರಾಜೀನಾಮೆ ಕೊಟ್ಟು ಬೇರೆಯವರಿಗೆ ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ಅವಕಾಶ ಸಿಗಬೇಕು ಎಂದು ನಾನು ಸ್ವಯಂ ಪ್ರೇರಿತವಾಗಿ ರಾಜೀನಾಮೆ ಕೊಟ್ಟಿದ್ದೇನೆ. ಪ್ರಧಾನಿಯಾಗಲಿ ಆಗಲಿ, ವರಿಷ್ಠರಾಗಲಿ ನನ್ನ ಮೇಲೆ ಯಾವುದೇ ಒತ್ತಡ ಹೇರಿಲ್ಲ ಇದು ನನ್ನ ಸ್ವಂತ ನಿರ್ಧಾರ ಎಂದರು.

ಮುಂದೆ ಮುಖ್ಯಮಂತ್ರಿ ಯಾರಾಗಬೇಕು? ಎಂದು ನಾನು ಯಾವುದೇ ಹೆಸರನ್ನು ಪ್ರಸ್ತಾಪ ಮಾಡುವುದಿಲ್ಲ, ಅದು ಹೈಕಮಾಂಡಿಗೆ ಬಿಟ್ಟಿದ್ದು. ಅವರು ಯಾರನ್ನು ಮುಖ್ಯಮಂತ್ರಿ ಮಾಡುತ್ತಾರೋ ಅವರಿಗೆ ಎಲ್ಲ ರೀತಿಯ ಸಹಕಾರ ಕೊಡುತ್ತೇne. ಒಟ್ಟಾಗಿ ಸೇರಿ ಕರ್ನಾಟಕದಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ಕೆಲಸ ಮಾಡುತ್ತೇವೆ ಎಂದರು.

ಪಕ್ಷ ನನಗೆ ಎಲ್ಲ ರೀತಿಯ ಸ್ಥಾನಮಾನ ಕೊಟ್ಟಿದೆ. ನಾಲ್ಕು ಬಾರಿ ಮುಖ್ಯಮಂತ್ರಿ ಮಾಡಿದೆ. ಪಕ್ಷದ ಅಧ್ಯಕ್ಷ ಸ್ಥಾನ ಕೊಟ್ಟಿದೆ‌ ಹಾಗಾಗಿ ಪಕ್ಷದ ಕೆಲಸವನ್ನು ಮಾಡುತ್ತೇನೆ. ನಾನು ಯಾವುದೇ ಕಾರಣಕ್ಕೂ ಯಾವುದೇ ಸ್ಥಾನಮಾನ ಪಡೆಯುವುದಿಲ್ಲ. ವಾಜಪೇಯಿ ಕಾಲದಲ್ಲಿ ಕೇಂದ್ರಕ್ಕೆ ಸಚಿವನಾಗಲು ಆಹ್ವಾನಿಸಿದ್ದರು ನಾನು ಒಪ್ಪಿರಲಿಲ್ಲ. ಈಗಲೂ ರಾಜ್ಯಪಾಲನಾಗುವುದಿಲ್ಲ. ಪಕ್ಷದ ಸಂಘಟನೆ ಬಲಪಡಿಸುವ ಕೆಲಸ ಮಾಡುತ್ತೇನೆ ಯಾವುದೇ ಸ್ಥಾನಮಾನ ಕೇಳಿಲ್ಲ ಯಾವುದೇ ಸ್ಥಾನಮಾನ ತೆಗೆದುಕೊಳ್ಳುವುದಿಲ್ಲ ಕರ್ನಾಟಕದಲ್ಲಿ ಪಕ್ಷವನ್ನು ಬಲಪಡಿಸಲು ಕೆಲಸ ಮಾಡುತ್ತೇನೆ ಎಂದು ನಿರ್ಗಮಿತ ಸಿಎಂ ತಿಳಿಸಿದರು.

ಮುಂದೆ ಬರುವ ಮುಖ್ಯಮಂತ್ರಿಗಳು ಸಹ ಯಾರು ಸರ್ಕಾರ ಬರಲು ಅವಕಾಶ ಕೊಟ್ಟಿದ್ದರೋ ಅವರೆಲ್ಲರಿಗೂ ಸಹಕಾರ ಕೊಡುತ್ತಾರೆ ಎನ್ನುವ ವಿಶ್ವಾಸವಿದೆ. ವಲಸಿಗರಿ ಭಯಪಡಬೇಕಿಲ್ಲ ಎಂದು ಯಡಿಯೂರಪ್ಪ ಅಭಯ ನೀಡಿದರು. ಎಲ್ಲರೂ ಜವಾಬ್ದಾರಿ ಹೊತ್ತು ಕೆಲಸ ಮಾಡಲಿದ್ದಾರೆ ಮುಂದೆ ಬರುವ ಮುಖ್ಯಮಂತ್ರಿಗಳು ಎಲ್ಲಾ ರೀತಿಯ ಸಹಕಾರ ಕೊಡಲಿದ್ದಾರೆ ಎಂದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

18 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

18 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

18 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

19 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

19 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

19 hours ago