ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಜೆಸಿ ಮಾಧುಸ್ವಾಮಿ -Vishwanews24
ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದ ಜೆಸಿ ಮಾಧುಸ್ವಾಮಿ -Vishwanews24
ತುಮಕೂರು : ಪದೇ ಪದೇ ಖಾತೆ ಬದಲಾವಣೆಯಿಂದ ಬೇಸರಗೊಂಡಿದ್ದಂತ ಸಚಿವ ಜೆಸಿ ಮಾಧುಸ್ವಾಮಿ ಇಂದು ಗಣರಾಜ್ಯೋತ್ಸವ ಧ್ವಜಾರೋಹಣದ ನಂತ್ರ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದರು. ಆದ್ರೇ ಇದೀಗ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
ಈ ಕುರಿತಂತೆ ಪ್ರತಿಕ್ರಿಯಿಸಿರುವಂತ ಅವರು, ಪದೇ ಪದೇ ಖಾತೆ ಬದಲಾವಣೆಯಿಂದ ಮನಸ್ಸಿಗೆ ಬೇಜಾರು ಆಗಿತ್ತು. ಇದರಿಂದಾಗಿ ರಾಜೀನಾಮೆ ನೀಡಲು ನಿರ್ಧರಿಸಿದ್ದೆ. ಇದೇ ಕಾರಣಕ್ಕಾಗಿ ನನಗೆ ಸಹಿಸಲು ಸಾಧ್ಯವಿಲ್ಲ ಎಂಬುದಾಗಿಯೂ ಸಿಎಂಗೆ ಹೇಳಿದ್ದೆ. ಧ್ವಜಾರೋಹಣದ ಬಳಿಕ ರಾಜೀನಾಮೆ ನೀಡಬೇಕು ಎಂದುಕೊಂಡಿದ್ದೆ. ಆದ್ರೇ ಹಿರಿಯರ ಮಧ್ಯಪ್ರವೇಶದಿಂದ ಖಾತೆ ಬಂದಿದೆ. ಹೀಗಾಗಿ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ : ಮಿಸಸ್ ಗ್ಲ್ಯಾಮರ್ ಇಂಡಿಯಾ 2020′ ಪ್ರಶಸ್ತಿ ಪಡೆದ ಮಂಗಳೂರಿನ ಶ್ರದ್ಧಾ ಜಾವಲ್ಕರ್ -Vishwanews24
