ನವದೆಹಲಿ, : ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿ ಕುರಿತು ಹೇಳಿಕೆ ನೀಡಿದ್ದ ಪ್ರಧಾನಿ ಮೋದಿಗೆ ಚುನಾವಣಾ ಆಯೋಗ ಕ್ಲೀನ್ ಚಿಟ್ ನೀಡಿದೆ.
ರಾಜೀವ್ ಸಾಯುವ ಮುನ್ನ ಅವರು ನಂ 1 ಭ್ರಷ್ಟರಾಗಿದ್ದರು ಎಂದಿದ್ದ ಪ್ರಧಾನಿ ನರೇಂದ್ರ ಮೋದಿ ಟೀಕೆ ಸಂಬಂಧ ಚುನಾವಣಾ ಆಯೋಗ (ಇಸಿ) ಪ್ರಧಾನಿಗೆ ಕ್ಲೀನ್ ಚಿಟ್ ನೀಡಿದೆ.
ಈಗಾಗಲೇ ಪ್ರಕರಣ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಮೋದಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ನಾಯಕಿ ಸುಶ್ಮಿತಾ ದೇವ್ ಅರ್ಜಿ ಸಲ್ಲಿಸಿದ್ದಾರೆ. ಭ್ರಷ್ಟಾಚಾರಿ ನಂಬರ್ ಒನ್ ಹೇಳಿಕೆಯನ್ನು ಬಿಜೆಪಿ ಸಮರ್ಥಿಸಿಕೊಂಡಿದೆ, ಹಾಲಿ ಪ್ರಧಾನಿಯನ್ನು ಚೋರ್ ಎಂದು ಕಾಂಗ್ರೆಸ್ ಸಂಬೋಧಿಸುತ್ತದೆ. ಆದರೆ ರಾಜೀವ್ ಗಾಂಧಿಯನ್ನು ಭ್ರಷ್ಟಾಚಾರಿ ಎಂದರೆ ಅವರಿಗೆ ಸಮಸ್ಯೆ ಏನು ಎಂದು ಬಿಜೆಪಿ ಪ್ರಶ್ನಿಸಿದೆ.
ಪ್ರಧಾನಿ ಮೋದಿ ವಿರುದ್ಧ ಮಾದರಿ ನೀತಿ ಸಂಹಿತೆ ಆರೋಪ ಮಾಡಿದ್ದ ಕಾಂಗ್ರೆಸ್ ಆಯೋಗಕ್ಕೆ ದೂರು ಸಲ್ಲಿಸಿತ್ತು. ರಾಜೀವ್ ಅವರ ವಿರುದ್ಧ ಮೋದಿ ಟೀಕಿಸಿರುವುದು ಖಂಡನಾರ್ಹ ಎಂದಿದ್ದ ಕಾಂಗ್ರೆಸ್ ಮೋದಿ ಭಾರತ ರತ್ನ ಪುರಸ್ಕೃತರಿಗೆ ಅವಮಾನಿಸಿದ್ದಾರೆ ಎಂದು ಹೇಳಿತ್ತು.
ಇದೀಗ ಇದಕ್ಕೆ ಪ್ರತಿಕ್ರಿಯಿಸಿರುವ ಆಯೋಗ ಪ್ರಧಾನಿಯವರ ಹೇಳಿಕೆಗಳಲ್ಲಿ ಭಾರತ ಚುನಾವಣಾ ಆಯೋಗದ ಸೂಚನೆಯಲ್ಲಿರುವಂತೆ ಎಂಸಿಸಿಯ ಯಾವುದೇ ಉಲ್ಲಂಘನೆಯನ್ನು ನಾವು ಗಮನಿಸಲಿಲ್ಲ. ಹೀಗಾಗಿ ಈ ಪ್ರಕರಣವನ್ನು ಇಲ್ಲಿಗೇ ಇತ್ಯರ್ಥಗೊಳಿಸಲಾಗಿದೆ ಎಂದು ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…