Featured

ರಾಜ್ಯಕ್ಕೆ ಮೊದಲ ಹಂತದಲ್ಲಿ ಕೊರೊನಾ ಲಸಿಕೆಯ 7.95 ಲಕ್ಷ ವೈಲ್ ಗಳು ಬರಲಿವೆ : ಡಾ.ಕೆ.ಸುಧಾಕರ್ -Vishwanews24

ರಾಜ್ಯಕ್ಕೆ ಮೊದಲ ಹಂತದಲ್ಲಿ ಕೊರೊನಾ ಲಸಿಕೆಯ 7.95 ಲಕ್ಷ ವೈಲ್ ಗಳು ಬರಲಿವೆ : ಡಾ.ಕೆ.ಸುಧಾಕರ್ –Vishwanews24

ಬೆಂಗಳೂರು : ರಾಜ್ಯಕ್ಕೆ ಮೊದಲ ಹಂತದಲ್ಲಿ ಕೊರೊನಾ ಲಸಿಕೆಯ 7.95 ಲಕ್ಷ ವೈಲ್ ಗಳು ಬರಲಿವೆ. ಇದನ್ನು ಆನಂದರಾವ್ ವೃತ್ತದಲ್ಲಿರುವ ಸಂಗ್ರಹಾಗಾರದಲ್ಲಿ ಶೇಖರಣೆ ಮಾಡಿ ಇಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಡ್ರಗ್ಸ್ ಕಂಟ್ರೋಲ್ ಜನರಲ್ ಆಫ್ ಇಂಡಿಯಾ ಕೋವಿಶೀಲ್ಡ್ ಲಸಿಕೆಗೆ ಈಗಾಗಲೇ ಪರವಾನಗಿ ನೀಡಿದೆ. ಕೇಂದ್ರ ಸರ್ಕಾರ 1.1 ಕೋಟಿ ಡೋಸ್ ಲಸಿಕೆ ಖರೀದಿ ಮಾಡಿದೆ. ಒಂದು ಡೋಸ್ ಗೆ 210 ರೂ. ನಿಗದಿ ಮಾಡಿದ್ದು, ಬೇರೆ ಯಾವ ದೇಶವೂ ಇಷ್ಟು ಕಡಿಮೆ ದರ ನಿಗದಿ ಮಾಡಿಲ್ಲ. ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಲಸಿಕೆ ಖರೀದಿಸಲಾಗಿದೆ. ಲಸಿಕೆ ಖರೀದಿಗೆ ಒಟ್ಟು 231 ಕೋಟಿ ರೂ. ಖರ್ಚು ಮಾಡಲಾಗಿದೆ. ರಾಜ್ಯಕ್ಕೆ ಮೊದಲ ಹಂತದಲ್ಲಿ 7.95 ಲಕ್ಷ ಕೋವಿಶೀಲ್ಡ್ ಲಸಿಕೆಯ ವೈಲ್ ಪೂರೈಕೆಯಾಗಲಿದೆ ಎಂದರು.

ಪ್ರತಿ ಡೋಸ್ ನಲ್ಲಿ 0.5 ಎಂಎಲ್ ಪ್ರಮಾಣವಿರುತ್ತದೆ. ಒಂದು ವೈಲ್ ನಲ್ಲಿ 10 ಮಂದಿಗೆ ಲಸಿಕೆ ನೀಡಬಹುದು. ಮೊದಲ ಡೋಸ್ ಪಡೆದ 28 ದಿನಗಳ ಬಳಿಕ ಎರಡನೇ ಡೋಸ್ ಪಡೆಯಬೇಕು. ಲಸಿಕೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಉತ್ಪತ್ತಿಯಾಗುತ್ತದೆ. ಇದು ಸಂಪೂರ್ಣ ಸುರಕ್ಷಿತ ಎಂದರು.

ಇದು ಮಾರಾಟಕ್ಕಲ್ಲ ಎಂದು ಲಸಿಕೆಯ ವೈಲ್ ನಲ್ಲಿ ಬರೆಯಲಾಗಿದೆ. ಆರೋಗ್ಯ ಕ್ಷೇತ್ರದ ಸಿಬ್ಬಂದಿ, ಕೊರೊನಾ ನಿಯಂತ್ರಣ ಮಾಡುವ ಅಧಿಕಾರಿ, ಸಿಬ್ಬಂದಿಗೆ ಲಸಿಕೆ ನೀಡಲಾಗುತ್ತದೆ. ಈ ಎಲ್ಲ ಪ್ರಕ್ರಿಯೆ ಮಾರ್ಗಸೂಚಿ ಪ್ರಕಾರ ನಡೆಯಲಿದೆ. ಲಸಿಕೆ ಪಡೆದ ಬಳಿಕ ಅವರ ಮೇಲೆ ಕೆಲ ಸಮಯದವರೆಗೆ ಸೂಕ್ಷ್ಮವಾಗಿ ನಿಗಾ ಇರಿಸಲಾಗುತ್ತದೆ ಎಂದರು.

http://ಉಡುಪಿ : ಎಲ್ಲಾ ಮುಸಲ್ಮಾನರು ದೇಶದ್ರೋಹಿಗಳಲ್ಲ, ದೇಶಭಕ್ತರೂ ಕೂಡಾ ಇದ್ದಾರೆ,ಆದರೆ ರಾಷ್ಟ್ರ ಭಕ್ತರೆಲ್ಲರೂ ಬಿಜೆಪಿಯವರೇ : ಈಶ್ವರಪ್ಪ -Vishwanews24

 

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

13 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

13 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

13 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

13 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

17 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

17 hours ago