ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ – vishwanews24

Featured, ರಾಜ್ಯ ನ್ಯೂಸ್

ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ: ಸಿಎಂ ಡಿ.ಕೆ.ಶಿವಕುಮಾರ್ ಮನವಿ

ಕೇಂದ್ರ ಬರ ಅಧ್ಯಯನ ತಂಡದೊಂದಿಗೆ ಸಿಎಂ ಸಮಾಲೋಚನೆ

ಬೆಂಗಳೂರು: “ಕರ್ನಾಟಕ ರಾಜ್ಯವು ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು, ಜನಸಾಮಾನ್ಯ ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ. NDRF ಮಾನದಂಡಗಳನ್ವಯ ರಾಜ್ಯಕ್ಕೆ 3705.30 ಕೋಟಿ ರೂ. ಬರ ಪರಿಹಾರ ನೀಡಿ” ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕೇಂದ್ರ ಬರ ಅಧ್ಯಯನ ತಂಡಕ್ಕೆ ಮನವಿ ಮಾಡಿದ್ದಾರೆ.

ಬರ ಅಧ್ಯಯನಕ್ಕೆ ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ನೇತೃತ್ವದ ಕೇಂದ್ರದ ಅಂತರ್ಸಚಿವಾಲಯ ತಂಡದೊಂದಿಗೆ ಅವರು ಶನಿವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸಮಾಲೋಚನೆ ನಡೆಸಿದರು.

“ರಾಜ್ಯದಲ್ಲಿ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಯಾವುದೇ ಒತ್ತಡಗಳಿಗೆ ಜಗ್ಗದೆ, ಕೇಂದ್ರ ಸರ್ಕಾರದ ವಿಪತ್ತು ನಿರ್ವಹಣೆಯ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಅತ್ಯಂತ ವೈಜ್ಞಾನಿಕವಾಗಿ ಮೌಲ್ಯಮಾಪನ ನಡೆಸಿ ಬರಪೀಡಿತ ತಾಲೂಕುಗಳನ್ನು ಘೋಷಿಸಲಾಗಿದೆ” ಎಂದು ತಿಳಿಸಿದರು.

ಇದನ್ನೂ ಓದಿ :

ಮಣಿಪಾಲ: ಕ್ಯು ಆರ್ ಕೋಡ್ ಬದಲಿಸಿ 12 ಲಕ್ಷ ರೂಪಾಯಿ ವಂಚನೆ – vishwanews24

“ರೈತರು ಕಂಗಾಲಾದರೆ ಎಲ್ಲವೂ ಸ್ಥಗಿತವಾಗುತ್ತದೆ. ಆದ್ದರಿಂದ ಕೇಂದ್ರ ಸರ್ಕಾರವು ರಾಜ್ಯದ ರೈತರ ನೆರವಿಗೆ ಧಾವಿಸಬೇಕು” ಎಂದು ಮನವಿ ಮಾಡಿದರು.

“ರಾಜ್ಯದ ಕೃಷ್ಣಾ ಜಲಾನಯನ ಪ್ರದೇಶ ಹೊರತು ಪಡಿಸಿ ಎಲ್ಲ ಜಲಾಶಯಗಳಲ್ಲಿ ನೀರಿನ ಹರಿವು ಕಡಿಮೆ ಇದೆ. ಮಲೆನಾಡು, ಕರಾವಳಿ ಪ್ರದೇಶಗಳಲ್ಲಿಯೂ ಮಳೆಯ ತೀವ್ರ ಕೊರತೆಯಾಗಿದೆ. ಅದಾಗ್ಯೂ ಕಾವೇರಿ ನದಿಗೆ ನೀರು ಬಿಡುಗಡೆ ಮಾಡುವಂತೆ ಸಿಡಬ್ಲ್ಯುಸಿ ಆದೇಶ ನೀಡುತ್ತಿದೆ. ನಗರ ಪ್ರದೇಶಗಳಲ್ಲಿಯೂ ನೀರಿನ ಸಮಸ್ಯೆ ಎದುರಾಗಿದೆ. ರೈತರಿಗೆ ರಾಜ್ಯ ಸರ್ಕಾರದ ಹಂತದಲ್ಲಿ 2500 ರೂ. ಪರಿಹಾರ ಮೊತ್ತ ಘೋಷಿಸಲಾಗಿದೆ. ಆದರೆ ಕೇಂದ್ರದಿಂದ ಹೆಚ್ಚಿನ ಸಹಕಾರವನ್ನು ನಿರೀಕ್ಷಿಸುತ್ತಿದ್ದೇವೆ” ಎಂದರು.

ಇದನ್ನೂ ಓದಿ :

ಉಚ್ಚಿಲ ದಸರಾ : ಅ.13ರಂದು ಕುಸ್ತಿ ಸ್ಪರ್ಧೆ – vishwanews24

ಈ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ, ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಎಲ್.ಕೆ.ಅತೀಕ್, ಸರಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತ ಡಾ.ಉಮಾ ಮಹಾದೇವನ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಪ್ರಧಾನ ಕಾರ್ಯದರ್ಶಿ ಮನೋಜ್ ಕುಮಾರ್ ಮೀನಾ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

 

Leave a Reply