Featured

ರಾಜ್ಯದಲ್ಲಿಯೇ ಮಾದರಿಯಾದ ಶ್ರೇಷ್ಠ ದೇವಸ್ಥಾನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನ : ಕೋಟ ಶ್ರೀನಿವಾಸ ಪೂಜಾರಿ -Vishwanews24

ಮಂಗಳೂರು: ಅತ್ಯಂತ ಯೋಜನಾಬದ್ಧವಾಗಿ ಮುಂದಿನ ಜನಾಂಗಕ್ಕೆ ಬೆಳಕಾಗಬಲ್ಲ ಹಾಗೂ ಭಾವುಕನೊಬ್ಬ ಪ್ರೀತಿ, ಹೆಮ್ಮೆಯಿಂದ ಆರಾಧನೆ ಮಾಡಬಹುದಾದ ಶ್ರೇಷ್ಠ ದೇವಸ್ಥಾನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ವತಿಯಿಂದ ನಡೆಯುತ್ತಿರುವ ಮಂಗಳೂರು ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಭಾನುವಾರ ಅವರು ಮಾತನಾಡಿದರು.

‘ರಾಜ್ಯದಲ್ಲಿ ಸುಮಾರು 34,500 ದೇವಾಲಯಗಳಿವೆ. ಇವುಗಳನ್ನೆಲ್ಲ ಸಮೀಕ್ಷೆ ಮಾಡಿದಾಗ ರಾಜ್ಯದಲ್ಲಿಯೇ ಮಾದರಿಯಾದ ದೇವಸ್ಥಾನ ಇದಾಗಿದೆ ಎಂಬುದು ನನ್ನ ಅನಿಸಿಕೆ’ ಎಂದರು.

ಭಕ್ತರೇ ಸ್ವಯಂಪ್ರೇರಿತರಾಗಿ ದಸರಾ ಸಂಭ್ರಮವನ್ನು ಅಚ್ಚುಕಟ್ಟಾಗಿ ನಡೆಸುತ್ತಿರುವುದು ನಿಜಕ್ಕೂ ಶ್ಲಾಘನೀಯ. ಹಿರಿಯರಾದ ಜನಾರ್ದನ ಪೂಜಾರಿ ಅವರ ನೇತೃತ್ವದಲ್ಲಿ ಕುದ್ರೋಳಿ ಕ್ಷೇತ್ರದಲ್ಲಿ ನಡೆಯುವ ಮಂಗಳೂರು ದಸರಾ ವರ್ಷದಿಂದ ವರ್ಷಕ್ಕೆ ವೈಭವಯುತವಾಗಿ ನಡೆಯುತ್ತಿದೆ ಎಂದು ಹೇಳಿದರು.

ಮಂಗಳೂರು ದಸರಾ ಉದ್ಘಾಟಿಸಿದ ಕುದ್ರೋಳಿ ಕ್ಷೇತ್ರದ ಅಭಿವೃದ್ಧಿಯ ರೂವಾರಿ ಬಿ. ಜನಾರ್ದನ ಪೂಜಾರಿ, ದಸರಾ ಮಹೋತ್ಸವದಲ್ಲಿ ಭಾಗಿಯಾಗಿರುವ ಎಲ್ಲರಿಗೂ ಆ ದೇವರು ಸುಖ, ಶಾಂತಿ, ಸಮೃದ್ಧಿಯನ್ನು ನೀಡಲಿ ಎಂದು ಹಾರೈಸಿದರು.

ನಾಳೆ ಶೋಭಾಯಾತ್ರೆಯೊಂದಿಗೆ ಮಂಗಳೂರು ದಸರಾ ಉತ್ಸವಕ್ಕೆ ತೆರೆ:

ಕುದ್ರೋಳಿಯ ನವರಾತ್ರಿಯ ಉತ್ಸವದ ನಡುವೆ ವಿವಿಧ ಕಾರ್ಯಕ್ರಮಗಳೊಂದಿಗೆ ಹಮ್ಮಿಕೊಳ್ಳಲಾಗಿರುವ ಮಂಗಳೂರು ದಸರಾ ಮಹೋತ್ಸವ ನಾಳೆ ವೈಭವದ ಶೋಭಾಯಾತ್ರೆಯೊಂದಿಗೆ ಮಂಗಳೂರು ದಸರಾ ಉತ್ಸವಕ್ಕೆ ನಾಳೆ ತೆರೆ ಬೀಳಲ್ಲಿದೆ.

ಮಂಗಳೂರು ದಸರಾ’ ಮೆರವಣಿಗೆ ಅ. 8ರಂದು ಸಂಜೆ 4ಕ್ಕೆ ಶ್ರೀ ಕ್ಷೇತ್ರ ಕುದ್ರೋಳಿಯಿಂದ ಆರಂಭವಾಗಲಿದೆ. ಈ ಬಾರಿಯ ವಿಶೇಷವೆಂಬಂತೆ ನವದುರ್ಗೆಯರ ಸಹಿತ ಶಾರದಾ ಮಾತೆಯ ಶೋಭಾಯಾತ್ರೆ ಮೊದಲು ಸಾಗಲಿದ್ದು, ವಿವಿಧ ಸ್ತಬ್ಧಚಿತ್ರಗಳು ಹಿಂಬಾಲಿಸಲಿವೆ.75ಕ್ಕೂ ಅಧಿಕ ಅತ್ಯಾಕರ್ಷಕ ಸ್ತಬ್ಧಚಿತ್ರಗಳು, 100ಕ್ಕೂ ಅಧಿಕ ವೇಷಭೂಷಣಗಳು, ವಾದ್ಯಮೇಳ ತಂಡಗಳು ಭಾಗವಹಿಸಲಿವೆ.

ಕುದ್ರೋಳಿಯಿಂದ ಹೊರಡುವ ಮೆರವಣಿಗೆ ಮಣ್ಣಗುಡ್ಡ ಮಾರ್ಗವಾಗಿ ಲೇಡಿಹಿಲ್‌ ಸರ್ಕಲ್‌, ಲಾಲ್‌ಬಾಗ್‌, ಬಲ್ಲಾಳ್‌ಬಾಗ್‌, ಪಿ.ವಿ.ಎಸ್‌. ವೃತ್ತ, ಕೆ.ಎಸ್‌. ರಾವ್‌ ರಸ್ತೆ, ಹಂಪನಕಟ್ಟ, ವಿ.ವಿ. ಕಾಲೇಜು ವೃತ್ತದಿಂದ ಬಲಕ್ಕೆ ತಿರುಗಿ ಗಣಪತಿ ಹೈಸ್ಕೂಲ್‌ ಮಾರ್ಗವಾಗಿ ಶ್ರೀ ವೆಂಕಟಮಣ ದೇವಸ್ಥಾನದ ಮುಂಭಾಗದಿಂದ ಕಾರ್‌ಸ್ಟ್ರೀಟ್‌ ಅಳಕೆ ಮೂಲಕ ಮರಳಿ ಬರಲಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

10 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago