Featured

ರಾಜ್ಯದಲ್ಲಿರುವ ಭ್ರಷ್ಟ, ಕೆಟ್ಟ ಸರ್ಕಾರವನ್ನು ತೆಗೆಯೋದು ನನ್ನ ಅಜೆಂಡಾ : ಹೆಚ್.ಡಿ ಕುಮಾರಸ್ವಾಮಿ – vishwanews24

ರಾಜ್ಯದಲ್ಲಿರುವ ಭ್ರಷ್ಟ, ಕೆಟ್ಟ ಸರ್ಕಾರವನ್ನು ತೆಗೆಯೋದು ನನ್ನ ಅಜೆಂಡಾ : ಹೆಚ್.ಡಿ ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿರುವ ಭ್ರಷ್ಟ, ಕೆಟ್ಟ ಸರ್ಕಾರವನ್ನು ತೆಗೆಯೋದು ನನ್ನ ಅಜೆಂಡಾ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರವಾಗಿ 113 ಸ್ಥಾನ ಪಡೆದು ಕುಮಾರಸ್ವಾಮಿ ಬೇಕಾದ್ರೆ ಸಿಎಂ ಆಗಲಿ ಎಂಬ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿಕೆಗೆ ತಿರುಗೇಟು ಕೊಟ್ಟ ಅವರು, ನಾನು ಇಲ್ಲಿವರೆಗೂ ನಿಮ್ಮ ಮುಂದೆ ನೂರು ಬಾರಿ ಹೇಳಿದ್ದೇನೆ. ರಾಜ್ಯದಲ್ಲಿ ಇರೋ ಇಂತಹ ಭ್ರಷ್ಟ, ಕೆಟ್ಟ ಸರ್ಕಾರ ತೆಗೆಯಬೇಕು ಅನ್ನೋದು ನನ್ನ ಅಭಿಪ್ರಾಯ. ಮುಖ್ಯಮಂತ್ರಿ ಆಗೋದೆಲ್ಲ ಮುಂದೆ ಆಮೇಲೆ ಅದು. ಈ ರಾಜ್ಯದಲ್ಲಿ ಉತ್ತಮವಾದ ಸರ್ಕಾರ, ಜನಪರವಾದ ಸರ್ಕಾರ, ಜನತಾ ಸರ್ಕಾರ ಬರಬೇಕು ಅನ್ನೋದು ನನ್ನ ಅಭಿಪ್ರಾಯ ಎಂದಿದ್ದಾರೆ.

ಜನರ ಭಾವನೆಗೆ ಸ್ಪಂದಿಸುವ ಸರ್ಕಾರ ಬೇಕು. ಇಂತಹ ಭ್ರಷ್ಟ ಸರ್ಕಾರ ತೆಗೆಯಬೇಕು ಎಂಬುದು ನನ್ನ ಅಜೆಂಡಾ. ಇಲ್ಲಿ ಮುಖ್ಯಮಂತ್ರಿ ಯಾರು ಆಗ್ತಾರೆ ಅನ್ನೋದು ಇಲ್ಲ. ಕೂಸು ಹುಟ್ಟೋಕು ಮುನ್ನ ಕುಲಾವಿ ಹೊಲಸಿದ್ರು ಅಂತ ಯಾಕೆ ಬೇಕು. ಇನ್ನೂ ಎರಡು ವರ್ಷ ಇದೆ. ಬಹಳ ಶ್ರಮ ಹಾಕೋದಿದೆ. ಯಾರೋ ನಾಲ್ಕು ಜನ ಮಾತಾಡಿದ್ದಕ್ಕೆ ಉತ್ತರ ಕೊಟ್ಟರೆ ಅದಕ್ಕೆ ಪ್ರಬುದ್ಧತೆ ಇಲ್ಲ ಅಂತಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:

ಜಿಬಿಎ ಚುನಾವಣೆ ಮೈತ್ರಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಜಿಬಿಎ ಚುನಾವಣೆ ಮೈತ್ರಿ ಆಗೋ ಬಗ್ಗೆ ಈವರೆಗೂ ಯಾವುದೇ ಚರ್ಚೆ ಆಗಿಲ್ಲ. ಎಲ್ಲಾ ಪಕ್ಷಗಳು ಜಿಬಿಎ, ಸ್ಥಳೀಯ ಸಂಸ್ಥೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಚುನಾವಣೆ ಆಗ್ತಿದೆ. ನಮ್ಮ ಪಕ್ಷ ಜಿಬಿಎ ವಿಷಯದಲ್ಲಿ ಏನೇನು ನಿರ್ಧಾರ ಮಾಡಬೇಕು ಅಂತ ಇವತ್ತು ಸಭೆಯಲ್ಲಿ ಚರ್ಚೆ ಮಾಡ್ತೀವಿ. ಮೈತ್ರಿ ವಿಷಯದ ಬಗ್ಗೆ ಈ ಕ್ಷಣದವರೆಗೆ ನಾವೇನು ಚರ್ಚೆ ಮಾಡಿಲ್ಲ. ಚರ್ಚೆ ಸಮಯ ಬಂದಾಗ ಅದರ ಬಗ್ಗೆ ಚರ್ಚೆ ಮಾಡ್ತೀವಿ. ಮೈತ್ರಿ ವಿಷಯದಲ್ಲಿ ನಾವು ಸಂಪೂರ್ಣವಾಗಿ ಮುಕ್ತವಾಗಿ ಇದ್ದೇವೆ. ಯಾವುದೇ ರೀತಿಯಲ್ಲಿ ನಮ್ಮಿಂದ ಜನರಲ್ಲಿ ಬೇರೆ ರೀತಿ ಗೊಂದಲಗಳಿಗೆ ಅವಕಾಶ ಕೊಡಬಾರದು ಎನ್ನೋದು ನಮ್ಮ ನಿಲುವು. ಸಮಯ ಬಂದಾಗ ಈ ಬಗ್ಗೆ ಚರ್ಚೆ ಮಾಡ್ತೀವಿ ಎಂದಿದ್ದಾರೆ.

ಜೆಡಿಎಸ್ ಜೊತೆ ಮೈತ್ರಿಗೆ ಮಂಡ್ಯ, ಹಾಸನ ಬಿಜೆಪಿ ನಾಯಕರ ವಿರೋಧ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ವ್ಯಕ್ತಿಗಳ ಹೇಳಿಕೆ ಬಗ್ಗೆ ನಾನು ಚರ್ಚೆ ಮಾಡೋಕೆ ಹೋಗೊಲ್ಲ. ಒಂದೊಂದು ಪಕ್ಷದಲ್ಲಿ ಒಂದೊಂದು ರೀತಿ ಚರ್ಚೆ ಮಾಡ್ತಾರೆ. ಕೆಲವರು ಅದರ ಬಗ್ಗೆ ಮಾತಾಡ್ತಾರೆ. ಕೆಲವರು ಮಾತಾಡೋದೇ ಅಂತಿಮ ಅಲ್ಲ. ವಿಧಾನಸಭೆ ಚುನಾವಣೆಗೆ ಎರಡು ವರ್ಷ ಇದೆ. ಸ್ಥಳೀಯ ಸಂಸ್ಥೆ ಚುನಾವಣೆಗೆ 4-5 ತಿಂಗಳು ಇದೆ. ಆ ಸಮಯ ಬಂದಾಗ ಚರ್ಚೆ ಮಾಡೋಣ. ವೈಯಕ್ತಿಕವಾಗಿ ಮಾತಾಡೋರಿಗೆ ನಾನು ಉತ್ತರ ಕೊಡೋದು ಅನಾವಶ್ಯಕ ಅಂತ ಮಾಜಿ ಶಾಸಕ ಪ್ರೀತಂಗೌಡ, ನಾರಾಯಣಗೌಡ ಹೇಳಿಕೆಗೆ ಕುಮಾರಸ್ವಾಮಿ ತಿರುಗೇಟು ಕೊಟ್ಟಿದ್ದಾರೆ.

ಇದನ್ನೂ ಓದಿ:

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago