Featured

ರಾಜ್ಯದಲ್ಲಿರುವ ವಿದ್ಯುತ್ ಆಧುನೀಕರಣ, ವಿದ್ಯುತ್ ಲೈನ್‍ಗಳ ಸುಧಾರಣೆಗೆ 8300 ಕೋಟಿ ಅನುದಾನ : ಸುನೀಲ್‍ಕುಮಾರ್ – Vishwanewws24

ರಾಜ್ಯದಲ್ಲಿರುವ ವಿದ್ಯುತ್ ಆಧುನೀಕರಣ, ವಿದ್ಯುತ್ ಲೈನ್‍ಗಳ ಸುಧಾರಣೆಗೆ 8300 ಕೋಟಿ ಅನುದಾನ : ಸುನೀಲ್‍ಕುಮಾರ್ – Vishwanewws24

ಬೆಳಗಾವಿ : ರಾಜ್ಯದಲ್ಲಿರುವ ವಿದ್ಯುತ್ ಆಧುನೀಕರಣ, ವಿದ್ಯುತ್ ಲೈನ್‍ಗಳ ಸುಧಾರಣೆ, ಉಪಕೇಂದ್ರಗಳ ನಿರ್ಮಾಣ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸಲು ಕೇಂದ್ರ ಸರ್ಕಾರವು ಆರ್‍ಡಿಎಸ್‍ಎಸ್ ಯೋಜನೆಯಡಿ ರಾಜ್ಯಕ್ಕೆ 8300 ಕೋಟಿ ವಿಶೇಷ ಅನುದಾನವನ್ನು ನೀಡಲಿದೆ ಎಂದು ಇಂಧನ ಸಚಿವ ಸುನೀಲ್‍ಕುಮಾರ್ ವಿಧಾನಸಭೆಗೆ ಹೇಳಿದರು.

ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಶಾಸಕ ಅವಿನಾಶ್ ಉಮೇಶ್ ಜಾಧವ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಸರ್ಕಾರ ಆರ್‍ಡಿಎಸ್‍ಎಸ್ ಯೋಜನೆಯಡಿ ಅನುದಾನ ನೀಡಲು ತಾತ್ವಿಕ ಒಪ್ಪಿಗೆ ನೀಡಿದೆ. ಇದರಿಂದ ಕಲ್ಯಾಣ ಕರ್ನಾಟಕ, ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಬಹುತೇಕ ವಿದ್ಯುತ್ ಸಮಸ್ಯೆ ನಿವಾರಣೆಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ಕೇಂದ್ರ ಸರ್ಕಾರವು ಆರ್‍ಡಿಎಸ್‍ಎಸ್ ಯೋಜನೆಯಡಿ ಇಷ್ಟು ದೊಡ್ಡ ಮಟ್ಟದಲ್ಲಿ ಅನುದಾನ ಬಿಡುಗಡೆ ಮಾಡುತ್ತಿರುವುದರಿಂದ ಕಿತ್ತೂರು ಮತ್ತು ಕಲ್ಯಾಣ ಕರ್ನಾಟಕ ಭಾಗದಲ್ಲಿ 3,999 ಕೋಟಿ ಮೊತ್ತದಲ್ಲಿ ವಿದ್ಯುತ್ ಆಧುನೀಕರಣಗೊಳಿಸಬಹುದು.

ಕಲ್ಯಾಣ ಕರ್ನಾಟಕದ 21 ಕೇಂದ್ರಗಳ 63 ಸಬ್ ಸ್ಟೇಷನ್ ಹಾಗೂ ಕಿತ್ತೂರು ಕರ್ನಾಟಕದ ಅನೇಕ ಕಡೆ ಹೊಸ ಸಬ್‍ಸ್ಟೇಷನ್‍ಗಳು, ವಿದ್ಯುತ್ ಲೈನ್‍ಗಳು ಬರಲಿವೆ ಎಂದರು. ನಮ್ಮ ಇಲಾಖೆಯ ಅಧಿಕಾರಿಗಳು ಇಂದು ದೆಹಲಿಗೆ ತೆರಳಿದ್ದು, ನಾಳೆ ಉನ್ನತ ಮಟ್ಟದ ಸಭೆ ನಡೆಯಲಿದೆ ಎಂದು ಹೇಳಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago