ರಾಜ್ಯದಲ್ಲಿರೋದು ಮಾನವೀಯತೆ, ಕರುಣೆ ಇಲ್ಲದ ಸರ್ಕಾರ : ಯು.ಟಿ.ಖಾದರ್ -Vishwanews24

ಕೊಪ್ಪಳ: ನಿತ್ಯ ಕೊರೋನಾ ಕೇಸ್‌ಗಳ ಸಂಖ್ಯೆ ಹೆಚ್ಚುತ್ತಿವೆ. ಸಾವಿನ ಪ್ರಕರಣಗಳು ಹೆಚ್ಚುತ್ತಲೇ ಇವೆ. ಅಂತ್ಯಸಂಸ್ಕಾರದಲ್ಲೂ ಸರ್ಕಾರ ಸಂಸ್ಕಾರ ಮರೆತು ವರ್ತಿಸುತ್ತಿದೆ. ಹಾಗಾಗಿ ರಾಜ್ಯದಲ್ಲಿರೋದು ಮಾನವೀಯತೆ, ಕರುಣೆ ಇಲ್ಲದ ಸರ್ಕಾರ ಎಂದು ಮಾಜಿ ಸಚಿವ, ಶಾಸಕ ಯು.ಟಿ.ಖಾದರ್ ಬಿಜೆಪಿ ಸರಕಾರದ ವಿರುದ್ಧ ಹರಿಹಾಯ್ದರು.

ಕೊಪ್ಪಳದ ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿಯ ಕೊರೋನಾದಲ್ಲೂ ಭ್ರಷ್ಟಾಚಾರ, ಬಿಜೆಪಿ ಸರಕಾರದ ಸಂಸ್ಕಾರ ಪುಸ್ತಕ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ರಾಜ್ಯದಲ್ಲಿರುವ ಬಿಜೆಪಿ ಸರಕಾರ ಕೊರೊನಾ ನಿಯಂತ್ರಣದಲ್ಲಿ ವಿಫಲವಾಗಿದೆ. ಸಂಶಯಾಸ್ಪದ ನಡೆಯಿಂದ ಹಗರಣ ಆಗಿರುವುದು ಬಹುತೇಕ ಸ್ಪಷ್ಟವಾಗಿದೆ. ಈ ಬಗ್ಗೆ ತನಿಖೆ ನಡೆಸಲು ಒಪ್ಪದ ರಾಜ್ಯ ಸರಕಾರದ ನಾಲ್ಕೈದು ಮಂತ್ರಿಗಳು ಡೈಲಾಗ್ ಹೊಡೆದದ್ದೇ ಸಾಧನೆ ಎಂಬಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

ಈ ವಿಚಾರದಲ್ಲಿ ಸ್ವಚ್ಛ, ಪಾರದರ್ಶಕ ಸರಕಾರ ನಡೆಸಬೇಕಾದರೆ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಜನರಿಗೆ ಕೊರೊನಾ ನಿಯಂತ್ರಣ, ನಿರ್ವಹಣೆಯ ಲೆಕ್ಕಾಚಾರ ಜನರಿಗೆ ತಿಳಿಸಬೇಕು. ಕ್ವಾಲಿಟಿ ಇಲ್ಲದ ಪಿಪಿಇ ಕಿಟ್, ಮಾಸ್ಕ್‌ಗಳನ್ನು ಡಾಕ್ಟರ್, ವೈದ್ಯಕೀಯ ಸಿಬ್ಬಂದಿಗೆ ನೀಡಿದ ಸರಕಾರದ ವಿರುದ್ಧ ಡಾಕ್ಟರ್ಸ್, ನರ್ಸ್‌ಗಳು, ಆಶಾ‌ ಕಾರ್ಯಕರ್ತೆಯರು ಪ್ರತಿಭಟನೆ ನಡೆಸಿದ್ದಾರೆ. ಆದರೂ ಸರಕಾರಕ್ಕೆ ಕಿಂಚಿತ್ತೂ ನಾಚಿಕೆ ಇಲ್ಲ ಎಂದು ದೂರಿದರು.

ಈ ಸರಕಾರ ಆರೋಪಗಳನ್ನು ಸಹಿಸುತ್ತಿಲ್ಲ, ಸಹಕಾರವನ್ನು ನೀಡುತ್ತಿಲ್ಲ. ಸರಿಯಾದ ಆಡಳಿತ ನಡೆಸಲು ಪ್ರತಿಪಕ್ಷದವರು ನೀಡುತ್ತಿರುವ ಇಂಜೆಕ್ಷನ್ ಇದು. ಅಂದಾಗ ಆರೋಗ್ಯಯುತ ಸರಕಾರ ಇರುತ್ತದೆ. ಕಾಯಿಲೆ‌ ಹೆಚ್ಚುತ್ತಿರುವುದಕ್ಕೆ, ಸಾವು ಹೆಚ್ಚುತ್ತಿರುವುದಕ್ಕೆ, ಅಮಾನವೀಯ ಶವಸಂಸ್ಕಾರಕ್ಕೆ ಸರಕಾರದ ನಿರ್ವಹಣೆ ಕೊರತೆ ಕಾರಣ.ಮಂತ್ರಿಗಳ ನಡುವೆ ಇರುವ ಆಂತರಿಕ ರಾಜಕೀಯ ಗೊಂದಲದಿಂದ ಜನರು‌ ಯಾಕೆ ಶಿಕ್ಷೆ ಅನುಭವಿಸಬೇಕು? ಎಂದು ಅವರು ಪ್ರಶ್ನಿಸಿದರು.

ಕಳೆದ ಮೂರು ತಿಂಗಳಲ್ಲಿ ಕೊರೋನಾಗೆ ಸಂಬಂಧಿಸಿದಂತೆ ಎಷ್ಟು ಆದೇಶಗಳನ್ನು ಸರಕಾರ ಹೊರಡಿಸಿದೆ ಎಂಬುದನ್ನು ಸ್ಪಷ್ಟಪಡಿಸಲಿ. ಕಾಂಗ್ರೆಸ್ ಪಕ್ಷ, ರಾಜ್ಯ ಸರಕಾರದ ಈ ಧೋರಣೆಯನ್ನು ಖಂಡಿಸುತ್ತದೆ. ಜನರ ಕಷ್ಟ ಅರಿಯಲು ಪ್ರತಿ ಜಿಲ್ಲೆಯಲ್ಲೂ ಕೆಎಎಸ್ ಅಧಿಕಾರಿಗಳ ಸಮೇತ ಸಮಿತಿ‌ ಮಾಡಲಿ. ಐಎಎಸ್ ಅಧಿಕಾರಿ ಕಮಿಟಿಯ ನೇತೃತ್ವ ವಹಿಸಲಿ. ವೆಂಟಿಲೇಟರ್ ಸಂಜೀವಿನಿ ಅಲ್ಲ. ಸಾವು-ಬದುಕು ದೇವರ ಕೈಯಲ್ಲಿದೆ ಎಂದು ಖಾದರ್ ಪ್ರತಿಪಾದಿಸಿದರು.

ಮಾಜಿ ಸಚಿವೆ ಉಮಾಶ್ರೀ, ಕಾಂಗ್ರೆಸ್ ಕೊಪ್ಪಳ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ, ಕಾಂಗ್ರೆಸ್ ಮುಖಂಡರಾದ ರಾಜಶೇಖರ ಹಿಟ್ನಾಳ, ರಡ್ಡಿ ಶ್ರೀನಿವಾಸ, ಮಾಲತಿ ನಾಯಕ್, ಆಸೀಫ್ ಅಲಿ, ಹಸನಸಾಬ ದೋಟಿಹಾಳ, ಕಾಟನ್ ಪಾಷಾ, ರವಿ‌ ಕುರಗೋಡ, ಸೇರಿದಂತೆ ಮುಖಂಡರು, ಕಾರ್ಯಕರ್ತರು ಭಾಗಿಯಾಗಿದ್ದರು.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

11 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

12 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

12 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

12 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

12 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

12 hours ago