ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಅಕ್ಟೋಬರ್ ಒಳಗೆ ನಡೆಯಲಿವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಕ್ಷೇತ್ರ ಪುನರ್ವಿಂಗಡಣೆ ಹಾಗೂ ಮೀಸಲಾತಿ ನಿಗದಿ ಪ್ರಕ್ರಿಯೆ ಆರಂಭವಾಗಿದ್ದು, ಶೀಘ್ರದಲ್ಲೇ ಚುನಾವಣಾ ವೇಳಾಪಟ್ಟಿ ಪ್ರಕಟಿಸುವ ದಿಸೆಯಲ್ಲಿ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಅವರು ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರಾವಧಿ ಈಗಾಗಲೇ ಮುಕ್ತಾಯಗೊಂಡಿದ್ದು, ಸದ್ಯ ಆಡಳಿತಾಧಿಕಾರಿಗಳ ಮೂಲಕ ಸ್ಥಳೀಯ ಸಂಸ್ಥೆಗಳ ಆಡಳಿತ ನಡೆಸಲಾಗುತ್ತಿದೆ ಎಂದು ಹೇಳಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಗತ್ಯವಾದ ಕ್ಷೇತ್ರ ಪುನರ್ವಿಂಗಡಣೆ ಹಾಗೂ ಮೀಸಲಾತಿ ನಿಗದಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಈ ಎಲ್ಲಾ ಪ್ರಕ್ರಿಯೆಗಳನ್ನು ಶೀಘ್ರ ಪೂರ್ಣಗೊಳಿಸಿ ಚುನಾವಣೆ ನಡೆಸಲು ಸರ್ಕಾರ ಆಸಕ್ತಿ ಹೊಂದಿದೆ ಎಂದು ಸಚಿವರು ತಿಳಿಸಿದರು.ಅಕ್ಟೋಬರ್ ಒಳಗೆ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಗುರಿ ಸರ್ಕಾರದ ಮುಂದಿದ್ದು, ಅಗತ್ಯ ಸಿದ್ಧತೆಗಳನ್ನು ಸಂಬಂಧಿತ ಇಲಾಖೆಗಳು ಕೈಗೊಂಡಿವೆ ಎಂದು ಈಶ್ವರ್ ಖಂಡ್ರೆ ಸ್ಪಷ್ಟಪಡಿಸಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆ ಘೋಷಣೆಯಾಗುವ ನಿರೀಕ್ಷೆಯಿಂದ ಗ್ರಾಮೀಣ ಭಾಗಗಳಲ್ಲಿ ರಾಜಕೀಯ ಚಟುವಟಿಕೆಗಳು ಚುರುಕುಗೊಂಡಿದ್ದು, ವಿವಿಧ ರಾಜಕೀಯ ಪಕ್ಷಗಳು ಹಾಗೂ ಆಕಾಂಕ್ಷಿಗಳು ಚುನಾವಣಾ ಸಿದ್ಧತೆಯಲ್ಲಿ ತೊಡಗಿದ್ದಾರೆ. ಅಧಿಕೃತ ಚುನಾವಣಾ ವೇಳಾಪಟ್ಟಿಯನ್ನು ರಾಜ್ಯ ಚುನಾವಣಾ ಆಯೋಗ ಶೀಘ್ರದಲ್ಲೇ ಪ್ರಕಟಿಸುವ ಸಾಧ್ಯತೆ ಇದೆ.
ವಿಟ್ಲ: ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…
ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…