ರಾಜ್ಯದಲ್ಲಿ ಅತಿವಿವೃಷ್ಟಿಯಿಂದ ಜನತೆ ಕಂಗಾಲು ; ಸರ್ಕಾರ ಕೈಗೊಳ್ಳುವ ಪರಿಹಾರ ಕಾರ್ಯಕ್ಕೆ ನಾವೆಲ್ಲ ಜೊತೆ ನಿಲ್ಲುತ್ತೇವೆ. :ಹೆಚ್ ಡಿ ದೇವೇಗೌಡ -Vishwanews24

ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೋನಾ ಒಂದು ಕಡೆ ವ್ಯಾಪಕವಾಗಿ ಹರಡುತ್ತಿದೆ ಇದರ ಜೊತೆಗೆ ದುರದೃಷ್ಟವಷಾತ್ ರಾಜ್ಯದಲ್ಲಿ ಅತಿವಿವೃಷ್ಟಿಯಿಂದ ಜನತೆ ಕಂಗಾಲು ಪಡುವಂತಾಗಿದೆ. ಅತಿವೃಷ್ಟಿಯಿಂದ ನಲುಗಿರುವ ರಾಜ್ಯದ ಜನತೆಯನ್ನು ಮತ್ತು ಜಾನುವಾರುಗಳನ್ನು ರಕ್ಷಿಸುವ ಕೆಲಸ ತತಕ್ಷಣ ಆಗಬೇಕಾಗಿದೆ ಸರ್ಕಾರ ಕೈಗೊಳ್ಳುವ ಪರಿಹಾರ ಕಾರ್ಯಕ್ಕೆ ನಾವೆಲ್ಲ ಜೊತೆ ನಿಲ್ಲುತ್ತೇವೆ. ಕೇಂದ್ರ ಸರ್ಕಾರ ಇಂತಹ ಸಂದರ್ಭದಲ್ಲಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸುವಂತೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು, ಮುಖ್ಯಮಂತ್ರಿಗಳಿಗೆ ಕೊರೋನಾ ಸೋಂಕು ತಗುಲಿ, ಆಸ್ಪತ್ರೆಯಿಂದಲೇ ಕಾರ್ಯ ನಿರ್ವಹಿಸಬೇಕಾದ ಸಂದರ್ಭ ಬಂದಿದೆ. ಬಹುತೇಕ ರಾಜ್ಯದ ಎಲ್ಲಾ ಜಿಲ್ಲೆಗಳು ಮುಂಗಾರಿನ ಅಬ್ಬರದ ಭೀತಿಯಿಂದ ನಲುಗಿದೆ ಅದರಿಂದ ಮುಖ್ಯಮಂತ್ರೀಗಳು ಮತ್ತು ಸಚಿವರುಗಳು ವಿಶೇಷ ಕಾರ್ಯಪಡೆ ರಚಿಸಿ ನೆರೆ ಪರಿಸ್ಥಿತಿಯನ್ನು ನಿಭಾಯಿಸಬೇಕಿದೆ ಎಂದಿದ್ದಾರೆ.

ಅತಿವೃಷ್ಟಿ ಯಿಂದ ಬಳಲುತ್ತಿರುವ ರಾಜ್ಯದ ಜನತೆಗೆ ಕೂಡಲೇ ಆಸರೆ ಕೇಂದ್ರಗಳನ್ನು ಸ್ಥಾಪಿಸಬೇಕಾಗಿದೆ ಬಹುತೇಕ ರಾಜ್ಯದೆಲ್ಲೆಡೆ ಬೆಳೆಗಳು ಹಾನಿಗೊಳಗಾಗಿದೆ ಜೊತೆಗೆ ಮನೆ-ಮಠ ಕಳೆದುಕೊಂಡವರಿಗೆ ತಡಮಾಡದೆ ಸರ್ಕಾರ ಕೂಡಲೇ ಪರಿಹಾರ ಒದಗಿಸುವ ಕೆಲಸ ಮಾಡಬೇಕಾಗಿದೆ. ಸತತ ನೆರೆಯಿಂದ ಸಂತ್ರಸ್ತರಾಗಿರುವ ರಾಜ್ಯದ ಜನತೆಗೆ ಕೇಂದ್ರ ಸರ್ಕಾರವು ನಮ್ಮ ರಾಜ್ಯಕ್ಕೆ ವಿಶೇಷ ಅರ್ಥಿಕ ನೆರವು ನೀಡಬೇಕೆಂದು ಮಾಧ್ಯಮಗಳ ಮುಖೇನ ಆಗ್ರಹಿಸುತ್ತಿನಿ ಈ ಸಂಬಂಧ ರಾಜ್ಯ ಸರ್ಕಾರವು ಕೂಡ ಕೇಂದ್ರ ಸರ್ಕಾರದ ಮೇಲೆ ಒತ್ತಡ ಏರಬೇಕೆಂದು ಒತ್ತಾಯಿಸಿದ್ದಾರೆ.

ಅತಿವೃಷ್ಟಿ ಯಿಂದ ಹಾನಿಗೊಳಗಾಗಿರುವ ಸ್ಥಳಗಳಲ್ಲಿ ಪರಿಹಾರ ಕಾಮಗಾರಿಗಳಿಗೆ ತಕ್ಷಣ ಹಣಕಾಸಿನ ವ್ಯವಸ್ಥೆಯನ್ನು ಮಾಡಬೇಕೆಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

13 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

13 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

13 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

13 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

13 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

13 hours ago