ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೋನಾ ಒಂದು ಕಡೆ ವ್ಯಾಪಕವಾಗಿ ಹರಡುತ್ತಿದೆ ಇದರ ಜೊತೆಗೆ ದುರದೃಷ್ಟವಷಾತ್ ರಾಜ್ಯದಲ್ಲಿ ಅತಿವಿವೃಷ್ಟಿಯಿಂದ ಜನತೆ ಕಂಗಾಲು ಪಡುವಂತಾಗಿದೆ. ಅತಿವೃಷ್ಟಿಯಿಂದ ನಲುಗಿರುವ ರಾಜ್ಯದ ಜನತೆಯನ್ನು ಮತ್ತು ಜಾನುವಾರುಗಳನ್ನು ರಕ್ಷಿಸುವ ಕೆಲಸ ತತಕ್ಷಣ ಆಗಬೇಕಾಗಿದೆ ಸರ್ಕಾರ ಕೈಗೊಳ್ಳುವ ಪರಿಹಾರ ಕಾರ್ಯಕ್ಕೆ ನಾವೆಲ್ಲ ಜೊತೆ ನಿಲ್ಲುತ್ತೇವೆ. ಕೇಂದ್ರ ಸರ್ಕಾರ ಇಂತಹ ಸಂದರ್ಭದಲ್ಲಿ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸುವಂತೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು, ಮುಖ್ಯಮಂತ್ರಿಗಳಿಗೆ ಕೊರೋನಾ ಸೋಂಕು ತಗುಲಿ, ಆಸ್ಪತ್ರೆಯಿಂದಲೇ ಕಾರ್ಯ ನಿರ್ವಹಿಸಬೇಕಾದ ಸಂದರ್ಭ ಬಂದಿದೆ. ಬಹುತೇಕ ರಾಜ್ಯದ ಎಲ್ಲಾ ಜಿಲ್ಲೆಗಳು ಮುಂಗಾರಿನ ಅಬ್ಬರದ ಭೀತಿಯಿಂದ ನಲುಗಿದೆ ಅದರಿಂದ ಮುಖ್ಯಮಂತ್ರೀಗಳು ಮತ್ತು ಸಚಿವರುಗಳು ವಿಶೇಷ ಕಾರ್ಯಪಡೆ ರಚಿಸಿ ನೆರೆ ಪರಿಸ್ಥಿತಿಯನ್ನು ನಿಭಾಯಿಸಬೇಕಿದೆ ಎಂದಿದ್ದಾರೆ.
ಅತಿವೃಷ್ಟಿ ಯಿಂದ ಬಳಲುತ್ತಿರುವ ರಾಜ್ಯದ ಜನತೆಗೆ ಕೂಡಲೇ ಆಸರೆ ಕೇಂದ್ರಗಳನ್ನು ಸ್ಥಾಪಿಸಬೇಕಾಗಿದೆ ಬಹುತೇಕ ರಾಜ್ಯದೆಲ್ಲೆಡೆ ಬೆಳೆಗಳು ಹಾನಿಗೊಳಗಾಗಿದೆ ಜೊತೆಗೆ ಮನೆ-ಮಠ ಕಳೆದುಕೊಂಡವರಿಗೆ ತಡಮಾಡದೆ ಸರ್ಕಾರ ಕೂಡಲೇ ಪರಿಹಾರ ಒದಗಿಸುವ ಕೆಲಸ ಮಾಡಬೇಕಾಗಿದೆ. ಸತತ ನೆರೆಯಿಂದ ಸಂತ್ರಸ್ತರಾಗಿರುವ ರಾಜ್ಯದ ಜನತೆಗೆ ಕೇಂದ್ರ ಸರ್ಕಾರವು ನಮ್ಮ ರಾಜ್ಯಕ್ಕೆ ವಿಶೇಷ ಅರ್ಥಿಕ ನೆರವು ನೀಡಬೇಕೆಂದು ಮಾಧ್ಯಮಗಳ ಮುಖೇನ ಆಗ್ರಹಿಸುತ್ತಿನಿ ಈ ಸಂಬಂಧ ರಾಜ್ಯ ಸರ್ಕಾರವು ಕೂಡ ಕೇಂದ್ರ ಸರ್ಕಾರದ ಮೇಲೆ ಒತ್ತಡ ಏರಬೇಕೆಂದು ಒತ್ತಾಯಿಸಿದ್ದಾರೆ.
ಅತಿವೃಷ್ಟಿ ಯಿಂದ ಹಾನಿಗೊಳಗಾಗಿರುವ ಸ್ಥಳಗಳಲ್ಲಿ ಪರಿಹಾರ ಕಾಮಗಾರಿಗಳಿಗೆ ತಕ್ಷಣ ಹಣಕಾಸಿನ ವ್ಯವಸ್ಥೆಯನ್ನು ಮಾಡಬೇಕೆಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.
ನಾಗುರಿ ದುರಂತ - ಕಳಪೆ ಕಾಮಗಾರಿಯ ಶಂಕೆ : ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಲು ಆದೇಶ ಮಂಗಳೂರು: ನಾಗುರಿಯಲ್ಲಿ ಮನೆ…
ನಕಲಿ ಪಾಸ್‌ಪೋರ್ಟ್ ಪ್ರಕರಣ: ಮಂಗಳೂರು ಟ್ರಾವೆಲ್ ಏಜೆಂಟ್ ವಿರುದ್ಧದ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ ಬೆಂಗಳೂರು: ಆಂಧ್ರಪ್ರದೇಶದ ಭಯೋತ್ಪಾದನಾ ನಿಗ್ರಹ…
ವಾಣಿಜ್ಯ LPG ಸಿಲಿಂಡರ್ ದರದಲ್ಲಿ ಭಾರೀ ಇಳಿಕೆ : ಇಂದಿನಿಂದಲೇ ಪರಿಷ್ಕೃತ ದರ ಜಾರಿ ನವದೆಹಲಿ: ವಾಣಿಜ್ಯ ಬಳಕೆಯ ಎಲ್‌ಪಿಜಿ ಪೂರೈಕೆ…
ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ 10 ರೂ. ಇಳಿಕೆ ಬೆಂಗಳೂರು: ನಿರಂತರ ಎಲ್‌ಪಿಜಿ ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ…
ರಾಮ ಮಂದಿರದ ದೇಣಿಗೆ ಹಣ ದುರುಪಯೋಗ ಆರೋಪ - ಸಿಎಂ ಯೋಗಿ ಯಾರ ತಪ್ಪನ್ನೂ ಸಹಿಸಲ್ಲ : ಸಿ.ಟಿ.ರವಿ ಬೆಂಗಳೂರು:…
ಮಂಗಳೂರು: ಬೈಕಂಪಾಡಿ ದರೋಡೆ ಪ್ರಕರಣಕ್ಕೆ ಟ್ವಿಸ್ಟ್ - ವಾಹನವನ್ನು ಬಿಟ್ಟು ಪರಾರಿಯಾದ ಆರೋಪಿಗಳು ; ಕಾರು ಪತ್ತೆ ಮಂಗಳೂರು: ಬೈಕಂಪಾಡಿ…