ರಾಜ್ಯದಲ್ಲಿ ಅಭಿವೃದ್ಧಿಯ ಹೊಸ ಪರ್ವ ಆರಂಭವಾಗಲಿದೆ : ಬಿ.ಎಸ್.ಯಡಿಯೂರಪ್ಪ ಭರವಸೆ -Vishwanews24

Featured, ರಾಜ್ಯ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಅಭಿವೃದ್ಧಿಯ ಹೊಸ ಪರ್ವ ಆರಂಭವಾಗಲಿದೆ ಎಂದು ರಾಜ್ಯದ ಜನತೆಗೆ ಭರವಸೆ ನೀಡಲು ಬಯಸುತ್ತೇನೆ’ ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಜೆಡಿಎಸ್–ಕಾಂಗ್ರೆಸ್ ಮೈತ್ರಿ ಸರ್ಕಾರ ಮಂಡಿಸಿದ್ದ ವಿಶ್ವಾಸಮತ ನಿರ್ಣಯಕ್ಕೆ ಸೋಲುಂಟಾದ ನಂತರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ರೈತಪರ ಸರ್ಕಾರ ಇನ್ನು ಮುಂದೆ ರಾಜ್ಯದಲ್ಲಿ ಆಡಳಿತ ನಡೆಸಲಿದೆ’ ಎಂದು ನುಡಿದರು.

‘ನಾಡಿಗೆ ಅನ್ನ ಕೊಡುವ ಅನ್ನದಾತ ಬರಗಾಲದಿಂದ ತತ್ತರಿಸುತ್ತಿದ್ದಾನೆ. ರೈತ ಸಮುದಾಯಕ್ಕೆ ಬದುಕಿನಲ್ಲಿ ಭರವಸೆ ಹುಟ್ಟಿಸುವ ಕೆಲಸ ಮಾಡುತ್ತೇನೆ. ಇದು ಪ್ರಜಾಪ್ರಭುತ್ವದ ವಿಜಯ. ಜನರು ಕುಮಾರಸ್ವಾಮಿ ಸರ್ಕಾರದಿಂದ ರೋಸಿ ಹೋಗಿದ್ದರು. ರಾಜ್ಯದಲ್ಲಿ ಅಭಿವೃದ್ಧಿಯ ಹೊಸ ಪರ್ವ ಇಲ್ಲಿಂದ ಆರಂಭವಾಗುತ್ತೆ ಅಂತ ಜನರಿಗೆ ಭರವಸೆ ಕೊಡುತ್ತೇನೆ’ ಎಂದು ಯಡಿಯೂರಪ್ಪ ನಗುಮೊಗದಿಂದ ಹೇಳಿದರು.