ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ‘ಪುಣ್ಯಕೋಟಿ ದತ್ತು ಯೋಜನೆ’ ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ಬೊಮ್ಮಾಯಿ ಅವರು ಇಂದು (ಮಾ.04) ವಿಧಾನಸಭೆಯಲ್ಲಿ 2022–23ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಿದರು. ಈ ವೇಳೆ ಮಾತನಾಡಿದ ಅವರು, ರಾಜ್ಯದ ಗೋಶಾಲೆಗಳಲ್ಲಿರುವ ಗೋವುಗಳನ್ನು ಸಾರ್ವಜನಿಕರು ಮತ್ತು ಖಾಸಗಿ ಸಂಸ್ಥೆಗಳು ವಾರ್ಷಿಕ ₹ 11,000ಕ್ಕೆ ದತ್ತು ತೆಗೆದುಕೊಳ್ಳುವುದನ್ನು ಪ್ರೋತ್ಸಾಹಿಸುವ ಸಲುವಾಗಿ ‘ಪುಣ್ಯಕೋಟಿ ದತ್ತು ಯೋಜನೆ’ ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ಗೋವುಗಳ ರಕ್ಷಣೆಗೆ ಬಿಜೆಪಿ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ ಎಂದ ಅವರು, ರಾಜ್ಯದಲ್ಲಿ ಕಳೆದ ವರ್ಷ ಜಾರಿಗೊಳಿಸಲಾಗಿರುವ ಗೋ ಹತ್ಯಾ ನಿಷೇಧ ಅಧಿನಿಯಮ–2020ರ ಹಿನ್ನೆಲೆಯಲ್ಲಿ, ಸದ್ಯ ರಾಜ್ಯದಲ್ಲಿರುವ ಗೋಶಾಲೆಗಳ ಸಂಖ್ಯೆಯನ್ನು 31ರಿಂದ 100ಕ್ಕೆ ಹೆಚ್ಚಿಸಲಾಗುವುದು. ಈ ಉದ್ದೇಶಕ್ಕೆ ₹ 50 ಕೋಟಿ ಅನುದಾನ ನೀಡಲಾಗುವುದು ಎಂದಿದ್ದಾರೆ.
ರಾಜ್ಯದ ಗೋ ತಳಿಗಳ ಸಂರಕ್ಷಣೆಯನ್ನು ಗಮನದಲ್ಲಿರಿಸಿ, ಗೋ ಸಂತತಿಯನ್ನು ಹೆಚ್ಚಿಸುವ ಉದ್ದೇಶದಿಂದ ಕೆಎಂಎಫ್ ಮೂಲಕ 2 ಸಾವಿರ ತಳಿಗಳನ್ನು ರೈತರಿಗೆ ಹಂಚಿಕೆ ಮಾಡಲಾಗುವುದು ಎಂದೂ ಮಾಹಿತಿ ನೀಡಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…