ಬೆಂಗಳೂರು : ರಾಜ್ಯದಲ್ಲಿ ಇವತ್ತಿನವರೆಗೂ ನಿಜೆಪಿ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದೇ ಇಲ್ಲ. ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದೆ ಅಷ್ಟೇ. ಬಿಜೆಪಿ ಎಂದರೆ ಸುಳ್ಳು. ಸುಳ್ಳಿನ ಉತ್ಪಾದನೆಯಲ್ಲಿ ಬಿಜೆಪಿ ನಿಸ್ಸೀಮರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ಮೇಲೆ ನಡೆದ ಚರ್ಚೆಗೆ ಉತ್ತರಿಸಿದ ಅವರು, ಅಭಿವೃದ್ಧಿ ಮರೆತು ಸುಳ್ಳುಗಳ ಆಸರೆ ಹೋಗಿದ್ದ ಬಿಜೆಪಿಯನ್ನು ರಾಜ್ಯದ ಜನತೆ ತಿರಸ್ಕರಿಸಿದ್ದಾರೆ. ಇದು ರಾಜ್ಯದ ಜನತೆ ಕೊಟ್ಟಿರುವ ಸರ್ಟಿಫಿಕೇಟ್. ಬಿಜೆಪಿಯಿಂದ ಬಿಎಸ್ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಜಗದೀಶ್ ಶೆಟ್ಟರ್, ಡಿವಿ ಸದಾನಂದ ಗೌಡ ಮುಖ್ಯಮಂತ್ರಿ ಆದರು. ಇವರ್ಯಾರೂ ಸ್ಪಷ್ಟ ಬಹುಮತ ಪಡೆದು ಮುಖ್ಯಮಂತ್ರಿ ಆದವರಲ್ಲ. ಆಪರೇಷನ್ ಕಮಲ ಮತ್ತು ಹಿಂಬಾಗಿಲ ಮೂಲಕ ಆಮಿಷವೊಡ್ಡಿ ನಮ್ಮ ಶಾಸಕರನ್ನು ಸೆಳೆದು ಅಧಿಕಾರಕ್ಕೇರಿದರು ಎಂದರು.
ಬಿಜೆಪಿಯವರು ಕರ್ನಾಟಕದಲ್ಲಿ ಇವತ್ತಿನವರೆಗೆ ಸ್ಪಷ್ಟ ಬಹುಮತ ಪಡೆದು ಅಧಿಕಾರ ನಡೆಸಿದ ಉದಾಹರಣೆ ಇದೆಯೇ, ಇದ್ದರೆ ತೋರಿಸಿ ಎಂದು ಸವಾಲು ಹಾಕಿದ ಸಿದ್ದರಾಮಯ್ಯ, ನಾವು 2013ರಲ್ಲಿ ಹಾಗೂ 2023ರಲ್ಲಿ ಸ್ಪಷ್ಟ ಬಹುಮತದ ಮೂಲಕ ಅಧಿಕಾರಕ್ಕೆ ಬಂದಿದ್ದೇವೆ. ಜನ ನಮ್ಮನ್ನು ತಿರಸ್ಕರಿಸಿ ವಿರೋಧ ಪಕ್ಷದಲ್ಲಿ ಕೂರಿಸಿದಾಗಲೂ ತಲೆಬಾಗಿ ಜನರ ತೀರ್ಮಾನವನ್ನು ಒಪ್ಪಿಕೊಂಡು ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡಿ ಮತ್ತೆ ಅಧಿಕಾರಕ್ಕೆ ಬಂದಿದ್ದೇವೆ. ನಾವು ಸುಳ್ಳುಗಳ ಆಸರೆಗೆ ಹೋಗಲಿಲ್ಲ ಎಂದು ಬಿಜೆಪಿಗೆ ಟಾಂಗ್ ನೀಡಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…