Featured

ರಾಜ್ಯದಲ್ಲಿ ಈ ಬಾರಿ ಅದ್ದೂರಿ ದಸರಾ ಮಹೋತ್ಸವ ಆಚರಣೆ : ಸಿ.ಎಂ- Vishwanews24

ರಾಜ್ಯದಲ್ಲಿ ಈ ಬಾರಿಯ ದಸರಾ ಮಹೋತ್ಸವವನ್ನು ಅದ್ದೂರಿಯಿಂದ ಆಚರಿಸಲು ನಿರ್ಧರಿದ ಸರಕಾರ

ಬೆಂಗಳೂರು :  ರಾಜ್ಯದಲ್ಲಿ ಈ ಬಾರಿಯ ದಸರಾ ಮಹೋತ್ಸವವನ್ನು ಅದ್ದೂರಿಯಿಂದ ಆಚರಿಸಲು ಸರಕಾರ ನಿರ್ಧರಿಸಿದೆ. ಮೈಸೂರು ದಸರಾವನ್ನು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಿದ್ದು, ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ಮಾಡಲು ಕ್ರಮಕೈಗೊಳ್ಳಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ನಾಡಹಬ್ಬ ಮೈಸೂರು ದಸರಾ ಮಹೋತ್ಸವ- 2022ರ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಸಭೆಯ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, “ಸರ್ಕಾರದ ಎಲ್ಲಾ ಜಾಹೀರಾತು, ಪ್ರಕಟಣೆಗಳು, ವೆಬ್ ಸೈಟ್, ಸಾಮಾಜಿಕ ಮಾಧ್ಯಮಗಳಲ್ಲಿ ಮೈಸೂರು ದಸರಾ ಲಾಂಛನವನ್ನು ಪ್ರಕಟಿಸಬೇಕು. ಮುಂಬೈ, ದೆಹಲಿ ಹಾಗೂ ಚನ್ನೈ ವಿಮಾನ ನಿಲ್ದಾಣಗಳಲ್ಲಿ ಹಾಗೂ ಇತರೆ ಸಾವಾಜನಿಕ ಸ್ಥಳಗಳಲ್ಲಿ ಮೈಸೂರು ದಸರಾ ಕುರಿತು ಪ್ರಚಾರ ಮಾಡಬೇಕೆಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಿಗೆ ಸೂಚಿಸಲಾಗಿದೆ,” ಎಂದರು.

ಇನ್ನು ಈ ನಡುವೆ ಒಂದು ವಾರದೊಳಗೆ ಮೈಸೂರು ಟೂರಿಸಂ ಸರ್ಕಿಟ್ ಬಗ್ಗೆ ಸರ್ಕಾರಿ ಆದೇಶ ಹೊರಡಿಸಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದ್ದಾರೆ. ಪ್ರವಾಸೋದ್ಯಮ ಇಲಾಖೆ ಹಾಗೂ ಖಾಸಗಿ ವಲಯದ ಸಹಯೋಗದೊಂದಿಗೆ ಕಾರ್ಯಕ್ರಮ ಆಯೋಜಿಸಲು ಕ್ರಮಕೈಗೊಳ್ಳಲಾಗಿದೆ.

ನಾಡಹಬ್ಬಕ್ಕೆ ಸಂಬಂಧಿಸಿದಂತೆ ಹಿಂದೆ ಅನುಸರಿಸುತ್ತಿದ್ದ ಗಜಪಯಣ ಸೇರಿದಂತೆ ಪಾರಂಪರಿಕ ಪದ್ದತಿಗಳನ್ನು ಪುನಃ ಪ್ರಾರಂಭಿಸಲಾಗುವುದು ಎಂದರು.

 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

19 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

19 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

19 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

19 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

20 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago