ಮೂಡುಬಿದಿರೆ: ರಾಜ್ಯದಲ್ಲಿ ಉಂಟಾಗಿರುವ ನೆರೆಹಾವಳಿ ಹಿನ್ನೆಲೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನವೆಂಬರ್ 15ರಿಂದ 17ರವರೆಗೆ ವಿದ್ಯಾಗಿರಿಯಲ್ಲಿ ನಡೆಯಲಿದ್ದ `ಆಳ್ವಾಸ್ ನುಡಿಸಿರಿ-ವಿರಾಸತ್’ ಸಮ್ಮೇಳನಗಳನ್ನು ಮುಂದೂಡಲಾಗಿದೆ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
26 ವರ್ಷಗಳಿಂದ ಆಳ್ಚಾಸ್ ವಿರಾಸತ್ ಮತ್ತು 15 ವರ್ಷಗಳಿಂದ ಆಳ್ವಾಸ್ ನುಡಿಸಿರಿಯನ್ನು ಸಂಸ್ಥೆ ವತಿಯಿಂದ ಆಚರಿಸಿಕೊಂಡು ಬಂದಿರುತ್ತೇವೆ. ಈ ವರ್ಷ ಆಳ್ವಾಸ್ ನುಡಿಸಿರಿ-ವಿರಾಸತ್ ಅವಳಿ ಸಮ್ಮೇಳನಗಳನ್ನು ಜಂಟಿಯಾಗಿ ನಡೆಸಲು ನಿರ್ಧರಿಸಿದ್ದು, ಸಿದ್ಧತೆಗಳು ಕೂಡ ಆರಂಭಗೊಂಡಿದೆ.
ಆದರೆ ರಾಜ್ಯದಲ್ಲಿ ಉಂಟಾದ ಭಾರಿ ನೆರೆಹಾವಳಿಯಿಂದಾಗಿ ಸಾಕಷ್ಟು ಆಸ್ತಿ ಪಾಸ್ತಿ ನಾಶವಾಗಿ ಸಾವಿರಾರು ಕುಟುಂಬಗಳ ಬದುಕು ಅತಂತ್ರ ಸ್ಥಿತಿಯಲ್ಲಿದೆ. ನಮ್ಮ ಬಂಧುಗಳು ಸಂಕಷ್ಟದ ಸ್ಥಿತಿಯಲ್ಲಿರುವಾಗ ನಾವು ಆಳ್ವಾಸ್ ನುಡಿಸಿರಿ-ವಿರಾಸತ್ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಂಭ್ರಮಿಸುವುದರಲ್ಲಿ ಅರ್ಥವಿಲ್ಲ ಎಂದು ಭಾವಿಸಿ ಈ ಎರಡೂ ಸಮ್ಮೇಳನವನ್ನು 2020ಕ್ಕೆ ಮುಂದೂಡಲಾಗಿದೆ ಹಾಗೂ ನೆರೆ ಸಂತ್ರಸ್ಥರಿಗೆ ಆರ್ಥಿಕ ಸಹಾಯ ನೀಡಿ ಅವರ ಕಷ್ಟದಲ್ಲಿ ಭಾಗಿಯಾಗಲು ನಮ್ಮ ಸಂಸ್ಥೆ ನಿರ್ಧರಿಸಿದೆ ಎಂದು ಮೋಹನ ಆಳ್ವ ತಿಳಿಸಿದರು.
ಆಳ್ವಾಸ್ ನುಡಿಸಿರಿ ಸಮಿತಿಯ ಕಾರ್ಯದರ್ಶಿ ವೇಣುಗೋಪಾಲ ಶೆಟ್ಟಿ, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಪಿಆರ್‍ಒ ಡಾ.ಪದ್ಮನಾಭ ಶೆಣೈ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…