ಶಿರಾ : ರಾಜ್ಯದಲ್ಲಿರುವ ಭ್ರಷ್ಟಸರ್ಕಾರವನ್ನು ಕಿತ್ತೊಗೆಯಬೇಕು, ಉತ್ತಮ ಆಡಳಿತ ನೀಡಲು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು. ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದರೆ ಹೆಣ್ಣುಮಕ್ಕಳಿಗೆ 2000 ರು. ಸಹಾಯಧನ ಉಚಿತ, 10 ಕೆಜಿ ಅಕ್ಕಿ ಖಚಿತ, 200 ವ್ಯಾಟ್ ವಿದ್ಯುತ್ ನಿಶ್ಚಿತ, ನಿರುದ್ಯೋಗಿಗಳಿಗೆ 3000 ರು. ಖಂಡಿತ ನೀಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ತಾಲೂಕಿನ ಬುಕ್ಕಾಪಟ್ಟಣ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಬಹಳ ವರ್ಷಗಳಿಂದ ಕಾಂಗ್ರೆಸ್ ಪಕ್ಷ ಗೆದ್ದಿಲ್ಲ. ಈ ಬಾರಿ ಮತದಾರರು ಬದಲಾವಣೆ ಬಯಸಿದ್ದಾರೆ. ಕಾಂಗ್ರೆಸ್ ಪಕ್ಷ ಒಳ್ಳೆಯ ಗ್ಯಾರಂಟಿ ಕಾರ್ಡುಗಳನ್ನು ಕೊಟ್ಟಿದೆ ಉತ್ತಮ ಆಡಳಿತ ನೀಡಿದ್ದೇವೆ ಎಂದ ಅವರು ಬಹಳ ದಿನಗಳಿಂದ ಕಿರಣ್ ಕುಮಾರ್ ಅವರಿಗೆ ಗಾಳ ಹಾಕುತ್ತಿದ್ದೆವು. ಈಗ ನಮ್ಮ ಗಾಳಕ್ಕೆ ಬಿದ್ದಿದ್ದಾರೆ. ಟಿಕೆಟ್ ಸಹ ನೀಡಿದ್ದೇವೆ ಗೆಲ್ಲಿಸುವ ಜವಾಬ್ದಾರಿ ನಿಮ್ಮದು. ಕಾಂಗ್ರೆಸ್ ಪಕ್ಷ ನೀಡಿರುವ ಗ್ಯಾರಂಟಿ ಕಾರ್ಡ್‌ಗಳ ಬಗ್ಗೆ ಜನರಿಗೆ ತಲುಪಿಸಿದರೆ ಗೆಲುವು ನಿಶ್ಚಿತ ಎಂದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಕೆ.ಎಸ್.ಕಿರಣ್‌ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಿಕ್ಕಣ್ಣ, ಮುಖಂಡರಾದ ಬಸವರಾಜು, ಡಾ.ಪರಮೇಶ್ವರಯ್ಯ, ಹೊಸಪಾಳ್ಯ ಲಿಂಗಪ್ಪ, ಪುಟ್ಟರಾಜು, ಸಿದ್ದಲಿಂಗಪ್ಪ, ಜಯಪ್ರಕಾಶ್, ಕರ್ನಾಟಕ ರಾಜ್ಯ ಬೀಜ ನಿಗಮದ ಮಾಜಿ ನಿರ್ದೇಶಕರು ನೇರಲಗುಡ್ಡ ಶಿವಕುಮಾರ್, ವಡ್ಡನಹಳ್ಳಿ ವಿಜಯಕುಮಾರ್, ಬುಕ್ಕಾಪಟ್ಟಣ ಪ್ರಭಾಕರ್, ಬೆಂಚೆ ಮಂಜು ಸೇರಿದಂತೆ ಹಲವರು ಹಾಜರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…