ಹಾಸನ : ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಉರುಳಿ ಬೀಳಲು ಕಾಂಗ್ರೆಸ್ ಸರ್ಕಾರ ಮಡಿಕೆನಾ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ಕಿಡಿಕಾರಿದ್ದಾರೆ.
ಹಾಸನದ ಬೇಲೂರುನಲ್ಲಿ ಅಯೋಜಿಸಿದ್ದ ಬೃಹತ್ ಕಾಂಗ್ರೆಸ್ ಸಮಾವೇಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಪರ ಮತಯಾಚನೆ ಮಾಡಿದ ವೇಳೆ ಹೆಚ್ ಡಿ ದೇವೇಗೌಡರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ಜನತೆ ನಮ್ಮನ್ನು 136 ಸೀಟು ನೀಡಿ ಆಶೀರ್ವಾದ ಮಾಡಿದ್ದಾರೆ. ತಾವು ಮನಸ್ಸು ಮಾಡಿದ್ದರೆ ಜೆಡಿಎಸ್ ಪೆಟ್ಟಿಗೆಯೆಲ್ಲ ಖಾಲಿಯಾಗೋದು, ಆದರೆ ಸಿದ್ದರಾಮಯ್ಯ ಮತ್ತು ದೆಹಲಿ ನಾಯಕರು ಸ್ವಲ್ಪ ನಿಧಾನಿಸುವಂತೆ ಹೇಳಿದ್ದಾರೆ, ಹೀಗಾಗಿ ತಡೆದುಕೊಳ್ಳಲಾಗಿದೆ ಎಂದರು.
ಇನ್ನು ರಾಜ್ಯದಲ್ಲಿ ತಾವು ಗ್ಯಾರಂಟಿ ಯೋಜನೆಗಳನ್ನು ನೀಡಿದ ಹಾಗೆಯೇ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರು ಗ್ಯಾರಂಟಿ ಯೋಜನೆಗಳನ್ನು ನೀಡಿದ್ದಾರೆ. ಮಹಾಲಕ್ಷ್ಮಿ ಯೋಜನೆಯಡಿ ಪ್ರತಿ ಮಹಿಳೆಗೆ ವರ್ಷಕ್ಕೆ 1 ಲಕ್ಷ ರೂ., ನಿರುದ್ಯೋಗಿ ಯುವಕರಿಗೂ ವಾರ್ಷಿಕ ತಲಾ 1 ಲಕ್ಷ ರೂ., 25 ಲಕ್ಷ ರೂ. ಗಳ ಆರೋಗ್ಯ ವಿಮೆ ಮತ್ತು ರೈತರಿಗೆ ಡಾ ಸ್ವಾಮಿನಾಥನ್ ಆಯೋಗ ವರದಿ ಶಿಫಾರಸ್ಸಿನ ಹಾಗೆ ಎಲ್ಲ ಬೆಳೆಗಳಿಗೆ ಬೆಂಬಲ ಬೆಲೆ ನೀಡುವ ಗ್ಯಾರಂಟಿಗಳನ್ನು ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ ಎಂದು ಹೇಳಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…