Featured

ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ ; ಕರಾವಳಿ ಜಿಲ್ಲೆಗೆ ಆರೆಂಜ್ ಅಲರ್ಟ್  ಘೋಷಣೆ – vishwanews24

ರಾಜ್ಯದಲ್ಲಿ ಏ.1ರವರೆಗೆ ಆಲಿಕಲ್ಲು ಮಳೆ ಸಾಧ್ಯತೆ ; ಕರಾವಳಿ ಜಿಲ್ಲೆಗೆ ಆರೆಂಜ್ ಅಲರ್ಟ್  ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಸುರಿಯುತ್ತಿರುವ ಆಲಿಕಲ್ಲು ಮಳೆ ಏ.1ರವರೆಗೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಳಗಾವಿ  ಜಿಲ್ಲೆಯ ಹಲವು ಭಾಗಗಳಲ್ಲಿ ಬುಧವಾರ ಅರ್ಧ ಗಂಟೆಗೂ ಹೆಚ್ಚುಕಾಲ ಧಾರಾಕಾರ ಮಳೆ ಸುರಿದಿದೆ. ಕೆಲವೆಡೆ ಗುಡುಗಿನ ಅಬ್ಬರದ ಜತೆಗೆ ಆಲಿಕಲ್ಲುಗಳೂ ಬಿದ್ದಿವೆ. ಖಾನಾಪುರ, ಬೆಳಗಾವಿ, ಹುಕ್ಕೇರಿ, ಸವದತ್ತಿ, ರಾಮದುರ್ಗ, ಯರಗಟ್ಟಿ, ಬೈಲಹೊಂಗಲ, ಮೂಡಲಗಿ ತಾಲೂಕಿನ ಹಲವು ಗ್ರಾಮಗಳಲ್ಲಿ ಸಾಧಾರಣ ಮಳೆ ಸುರಿಯಿತು.

ಇದನ್ನೂ ಓದಿ: 

ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಅಂಡಾರು, ಕಾಡುಹೊಳೆ, ಮುನಿಯಾಲು, ಮುಟ್ಲುಪಾಡಿ ಮೊದಲಾದೆಡೆ ಮಂಗಳವಾರ ರಾತ್ರಿ ಸುರಿದ ಭಾರಿ ಗಾಳಿಮಳೆಗೆ ಹಾನಿ ಸಂಭವಿಸಿದೆ. ಅಜೆಕಾರು, ಅಂಡಾರು ಪರಿಸರದಲ್ಲಿ 30ಕ್ಕೂ ಅಧಿಕ ವಿದ್ಯುತ್ ಕಂಬಗಳು ಧರೆಗುರುಳಿವೆ.

ಆರೆಂಜ್ ಅಲರ್ಟ್:
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನದಲ್ಲಿ ಮಾ.26ರಿಂದ ಏ.1ರವರೆಗೆ ಆಲಿಕಲ್ಲು ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ದಾವಣಗೆರೆ, ಶಿವಮೊಗ್ಗ, ವಿಜಯನಗರದಲ್ಲಿ ಮಾ.26ರಂದು ಬಿರುಗಾಳಿ, ಗುಡುಗು, ಮಿಂಚು ಜಾಸ್ತಿ ಕಾಣಿಸಿಕೊಳ್ಳುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ವೇಳೆ ರೈತರು, ಕುರಿಗಾಹಿಗಳು ಎಚ್ಚರಿಕೆವಹಿಸುವಂತೆ ಇಲಾಖೆ ಸಲಹೆ ಕೊಟ್ಟಿದೆ.

ಬೆಂ.ಗ್ರಾಮಾಂತರ, ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ದಾವಣಗೆರೆ, ಬಾಗಲಕೋಟೆ, ಕೊಪ್ಪಳ, ರಾಯಚೂರು ಮತ್ತು ವಿಜಯಪುರದಲ್ಲಿ ಇಂದು (ಮಾ.26) ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಇದನ್ನೂ ಓದಿ:

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago