ರಾಜ್ಯದಲ್ಲಿ ಐದು ದಿನ ಭಾರೀ ಮಳೆ ; ಕರಾವಳಿಯಲ್ಲಿ ಏ.13ರಿಂದ ಏ.16 ರವರೆಗೆ ಎಲ್ಲೋ ಅಲರ್ಟ್ ಘೋಷಣೆ -Vishwanews24
ರಾಜ್ಯದಲ್ಲಿ ಐದು ದಿನ ಭಾರೀ ಮಳೆ ; ಕರಾವಳಿಯಲ್ಲಿ ಏ.13ರಿಂದ ಏ.16 ರವರೆಗೆ ಎಲ್ಲೋ ಅಲರ್ಟ್ ಘೋಷಣೆ -Vishwanews24
ಬೆಂಗಳೂರು : ಮಧ್ಯ ಮಹಾರಾಷ್ಟ್ರದಿಂದ ತಮಿಳುನಾಡುವರೆಗೆ ತೇವಾಂಶಭರಿತ ಮೋಡಗಳು ಹಾದುಹೋಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಮುಂದಿನ 5 ದಿನ ಮಳೆಯಾಗಲಿದ್ದು ಈ ಹಿನ್ನೆಲೆ ಹವಮಾನ ಇಲಾಖೆಯು ಕರಾವಳಿಯ ದಕ್ಷಿಣ ಕನ್ನಡ ಸೇರಿ ಹಲವೆಡೆ ಏ.13ರಿಂದ ಏ.16ರವರೆಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಿದೆ.
ಹಾಸನ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ಏ.14ರಿಂದ ಮೂರು ದಿನಗಳವರೆಗೆ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದ್ದು ಈ ಹಿನ್ನೆಲೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನು ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಸಾಧಾರಣ ಮಳೆಯಾಗಲಿದೆ.
ಯುಗಾದಿ ಹಬ್ಬದ ಸಂಭ್ರಮ : ಕನ್ನಡದಲ್ಲಿ ಶುಭಾಶಯ ತಿಳಿಸಿದ ಪ್ರಧಾನಿ ಮೋದಿ -Vishwanews24
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ 72 ಗಂಟೆಗಳಲ್ಲಿ ಸಾಧಾರಣೆ ಮಳೆಯಾಗಲಿದೆ ಎಂದು ಕೂಡಾ ಇಲಾಖೆ ತಿಳಿಸಿದೆ.
ಇನ್ನು ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಕಾರಣದಿಂದಾಗಿ ತಮಿಳುನಾಡು, ಕೇರಳ, ಮಧ್ಯಪ್ರದೇಶ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ಮಧ್ಯಪ್ರದೇಶ, ವಿದರ್ಭ, ತೆಲಂಗಾಣ, ಛತ್ತೀಸ್ಗಢ, ಪಶ್ಚಿಮ ಬಂಗಾಳ ಹಾಗೂ ಒಡಿಶಾದಲ್ಲಿ ಮುಂದಿನ 5 ದಿನ ಮಳೆಯಾಗಲಿದೆ. ಜಮ್ಮು-ಕಾಶ್ಮೀರ, ಲಡಾಖ್, ಗಿಲ್ಗಿಟ್, ಬಾಲ್ತಿಸ್ತಾನ್, ಮುಜರ್ಬಾದ್, ಹಿಮಾಚಲ ಪ್ರದೇಶದಲ್ಲಿ ಏ.14ರಂದ 16ರವರೆಗೆ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಕೂಡಾ ಇಲಾಖೆ ಮಾಹಿತಿ ನೀಡಿದೆ.
ಮಂಗಳೂರು : ನೈಟ್ ಕರ್ಫ್ಯೂ ಉಲ್ಲಂಘನೆ , 2 ದಿನಗಳಲ್ಲಿ 78 ವಾಹನ ಮಾಲಕರ ವಿರುದ್ದ ಪ್ರಕರಣ ದಾಖಲು -Vishwanews24
