ಮೂಡುಬಿದಿರೆ: ರಾಜ್ಯದಲ್ಲಿ ಕಡಿಮೆ ಜನಸಂಖ್ಯೆ ಇರುವ ಜೈನ ಸಮುದಾಯದ ಏಳಿಗೆಗಾಗಿ ಜೈನ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಸರಕಾರವನ್ನು ಒತ್ತಾಯಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಮಾಜಿ ಸಚಿವರು, ಜೈನ ಸಮುದಾಯದಲ್ಲಿ ಶ್ರೀಮಂತ ವರ್ಗದವರಿದ್ದರೂ ಬಡವರ ಸಂಖ್ಯೆಯೂ ಹೆಚ್ಚಿದೆ.
ಕೃಷ್ಣಾ ನದಿ ತೀರದಲ್ಲಿ ದೊಡ್ಡ ಸಂಖ್ಯೆಯ ಜೈನರು ಕಬ್ಬು ಬೆಳೆ, ಹೈನೋದ್ಯಮ ಅವಲಂಬಿಸಿದ್ದಾರೆ. ಈ ಬಾರಿಯ ನೆರೆಯಲ್ಲಿ ಬೆಳೆ ಹಾನಿಯಾಗಿದ್ದು, ಸಂತ್ರಸ್ತರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಬೆಳಗಾವಿ, ಬೀದರ್, ಗುಲ್ಬರ್ಗ, ಹುಬ್ಬಳ್ಳಿ, ವಿಜಯಪುರಗಳಲ್ಲಿ ಹೆಚ್ಚಿನ ಸಂಖ್ಯೆಯ ಜನರು ಕೂಲಿ ಕೆಲಸ ಮಾಡುತ್ತಿದ್ದು, ಮೂಲ ಆದಾಯಕ್ಕಿಂತಲೂ ಕಡಿಮೆ ಆದಾಯ ಹೊಂದಿದವರಾಗಿದ್ದಾರೆ. ಹೀಗಾಗಿ ತಮ್ಮ ಬೇಡಿಕೆ ನ್ಯಾಯಯುತವಾಗಿದ್ದು, ರಾಷ್ಟ್ರೀಯ ಜೈನ್ ಮಿಲನ್‌ನ ಅಧ್ಯಕ್ಷ ಧರ್ಮಸ್ಥಳ ಸುರೇಂದ್ರ ಹೆಗ್ಗಡೆ ನೇತೃತ್ವದಲ್ಲಿ ಶೀಘ್ರವೇ ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಈ ಕುರಿತು ಬೇಡಿಕೆ ಸಲ್ಲಿಸಲಾಗುವುದು ಎಂದರು.
ಸಮುದಾಯದ ಅಭಿವೃದ್ಧಿ ನಿಗಮಗಳಿಗೆ ಅನುದಾನದ ಕೊರತೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಯಾವುದೇ ನಿಗಮಗಳಿಗೆ ಅನುದಾನದ ಕೊರತೆಯಾಗಿಲ್ಲ. ಈ ಸರಕಾರವು ಅನುದಾನ ಒದಗಿಸುವ ಬದ್ಧತೆ ತೋರಬೇಕು ಎಂದರು. ಚೌಟರ ಅರಮನೆಯ ಕುಲದೀಪ ಎಂ., ಬಸದಿಗಳ ಮೊಕ್ತೇಸರ ಆನಡ್ಕ ದಿನೇಶ್ ಕುಮಾರ್, ಕೆಲ್ಲಪುತ್ತಿಗೆ ಅರಮನೆಯ ರಾಜವರ್ಮ ಬೈಲಂಗಡಿ, ಪೆರಿಂಜೆಗುತ್ತು ಜಯರಾಜ ಕಂಬ್ಳಿ, ಜೈನ್ ಮಿಲನ್ ಅಧ್ಯಕ್ಷೆ ಶ್ವೇತಾ ಜೈನ್ ಉಪಸ್ಥಿತರಿದ್ದರು
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…