ಶಿವಮೊಗ್ಗ: ಮಾಜಿ ಸಚಿವ ಈಶ್ವರಪ್ಪಗೆ ಮಿಸ್ಡ್ ಕಾಲ್ ಬೆದರಿಕೆ ಹಿನ್ನೆಲೆಯಲ್ಲಿ ಶಿವಮೊಗ್ಗ ಎಸ್ಪಿಗೆ ದೂರು ನೀಡಿದ ಬಳಿಕ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.
ಈ ಸಂದರ್ಭ ಮಾತನಾಡಿದ ಮಾಜಿ ಸಚಿವರು, “ಈ ಹಿಂದೆ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಕೊಲೆ ಬೆದರಿಕೆ ಬಂದಿತ್ತು. ಆ ಬಳಿಕ ಓರ್ವ ಮುಸ್ಲಿಂ ನನ್ನು ಅರೆಸ್ಟ್ ಮಾಡಿದಾಗ ಆತನ ಬಳಿ ಸಾಕಷ್ಟು ದಾಖಲಿ ಸಿಕ್ಕಿತ್ತು.
ಆತನ ಬಳಿ ಸಿಕ್ಕ ಪಟ್ಟಿಯಲ್ಲಿ ಕೊಲೆ ಮಾಡುವವರ ಲಿಸ್ಟ್ ನಲ್ಲಿ ನನ್ನ ಹೆಸರು ಕೂಡ ಇತ್ತು. ನಾನು ಕೂಡ ದೂರು ಕೊಟ್ಟಿದ್ದೆ. ನಿನ್ನೆ ಕೂಡ ರಾತ್ರಿ ಕಜಕಿಸ್ತಾನದ ಒಂದು ನಂಬರ್ ನಿಂದ ಕರೆ ಬಂದಿದೆ. ರಾತ್ರಿ ಮತ್ತು ಬೆಳಿಗ್ಗೆ ಐದಾರು ಬಾರಿ ಕರೆ ಮಾಡಿದ್ದಾರೆ. ಈ ಸಂಬಂಧ ಎಸ್ಪಿಗೆ ತನಿಖೆ ಮಾಡಲು ದೂರು ಕೊಟ್ಟಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಷ್ಟ್ರದ್ರೋಹಿ ಚಟುವಟಿಕೆ ಆರಂಭವಾಗುವ ಲಕ್ಷಣ ಇದು. ರಾಜ್ಯ ಸರ್ಕಾರ ಈ ಬಗ್ಗೆ ತಕ್ಷಣ ಗಮನ ಹರಿಸಬೇಕು” ಎಂದಿದ್ದಾರೆ.
ಇನ್ನು ಬೆಳಗಾವಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “ಬೆಳಗಾವಿಯಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಬಗ್ಗೆ ಪೊಲೀಸ್ ದೂರು ನೀಡಿದ್ದಾರೆ. ಶಿವಮೊಗ್ಗ ನಗರದಲ್ಲಿ ಹರೀಶ್ ರಾವ್ ಎಂಬ ಆಟೋ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಬಿಜೆಪಿ ಎಂಬ ಕಾರಣಕ್ಕೆ ಹಲ್ಲೆ ನಡೆಸಿ, ಗುಂಡಾಗಿರಿ ಮಾಡಿದ್ದಾರೆ. ಇದರ ಬಗ್ಗೆ ಕ್ರಮ ಕೈಗೊಳ್ಳಲು ಎಸ್ಪಿಗೆ ದೂರು ನೀಡಿದ್ದೇನೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಮುಸಲ್ಮಾನ ಗುಂಡಾಗಳ ಕೃತ್ಯ ಜಾಸ್ತಿಯಾಗಿದೆ.
ರಾಷ್ಟ್ರದ್ರೋಹಿಗಳ ಬಗ್ಗೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಬಿಜೆಪಿ ಸರ್ಕಾರ ಇದ್ದಾಗ ರಾಷ್ಟ್ರದ್ರೋಹಿಗಳ ಮಟ್ಟ ಹಾಕುವ ಕೆಲಸ ಮಾಡಲಾಗಿತ್ತು. ಆದ್ರೆ, ಕಾಂಗ್ರೆಸ್ ಸರ್ಕಾರ ಪಿಎಫ್ಐ. ಗೂಂಡಾಗಳ 175 ಕೇಸ್ ವಾಪಸ್ ಪಡೆದಿತ್ತು. ಶಿವಮೊಗ್ಗ ನಗರದಲ್ಲಿ ಕೂಡ ಕೆಲ ಮನೆಗಳ ಮೇಲೆ ಕಲ್ಲು ತೂರಾಟ ಮಾಡಲಾಗಿದೆ. ತಕ್ಷಣವೇ ಪೊಲೀಸರು ಅಲರ್ಟ್ ಆಗಿ ಈ ಬಗ್ಗೆ ಕ್ರಮ ಕೈಗೊಳ್ಳಬೇಕು.ಹಿಂದುತ್ವದ ವಿಚಾರ, ಸಿದ್ದಾಂತ ಇಟ್ಟುಕೊಂಡು ಹೊರಟವನು ನಾನು. ರಾಜಕಾರಣ ಎಂದರೇ ಕೇವಲ ಅಧಿಕಾರ ಪಡೆಯುವ ವ್ಯವಸ್ಥೆಯಲ್ಲ. ಹಿಂದುತ್ವದ ಭಾವನೆಯಿಂದ ಹೊರಟಾಗ ಹಲವರಿಗೆ ಕಸಿವಿಸಿಯಾಗುತ್ತೇ. ಅದನ್ನು ನಾವು ಎದುರಿಸುತ್ತೇವೆ” ಎಂದು ಈಶ್ವರಪ್ಪ ಹೇಳಿದ್ದಾರೆ.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…