ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಗೊಳಿಸುವುದೇ ನನ್ನ ಗುರಿ : ದಿನೇಶ್ ಗುಂಡೂರಾವ್

Featured, ರಾಜ್ಯ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಗೊಳಿಸುವುದೇ ನನ್ನ ಗುರಿ ಆ ನಿಟ್ಟಿನಲ್ಲಿ ಕಾರ್ಯ ಯೋಜನೆಗಳ ಬಗ್ಗೆ ರಾಜ್ಯದ ಹಿರಿಯ ಮತ್ತು ಹೈಕಮಾಂಡ್ ಜೊತೆ ಚರ್ಚಿಸಿ ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದು ಕೆಪಿಸಿಸಿಯ ನೂತನ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸಮ್ಮಿಶ್ರ ಸರ್ಕಾರದಲ್ಲಿ ಎರಡು ಪಕ್ಷಗಳು, ಸಮನ್ವಯದಿಂದ ಆಡಳಿತ ನಡೆಸುವುದರ ಜೊತೆಗೆ ಜನರ ಅಭಿವೃದ್ಧಿ ಕಾರ್ಯಗಳನ್ನು ಮಾಡುವುದು ಮುಖ್ಯ. ಆ ಜವಾಬ್ದಾರಿಯನ್ನು ನಾನು ಸಮರ್ಥವಾಗಿ ನಿರ್ವಹಿಸುತ್ತೇನೆ. ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ನನಗೆ ಕೆಪಿಸಿಸಿ ಅಧ್ಯಕ್ಷರ ಜವಾಬ್ದಾರಿಯನ್ನು ನೀಡಿದ್ದಾರೆ. ರಾಹುಲ್ ಗಾಂಧಿ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಿರಿಯ ನಾಯಕರಿಗೆ ಕೃತಜ್ಞತೆ ಸಲ್ಲಿಸಿದರು.