Featured

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆಯ ಮೂಲಕ ಹಿಂದೂ ಹಬ್ಬಗಳ ಆಚರಣೆಗೆ ಅಡ್ಡಿ: ಸಂಸದ ಬ್ರಿಜೇಶ್ ಚೌಟ – vishwanews24

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪೊಲೀಸ್ ಇಲಾಖೆಯ ಮೂಲಕ ಹಬ್ಬಗಳ ಆಚರಣೆಗೆ ನಿಯಮ ಹೇರಿ ಹಿಂದೂಗಳ ಭಾವನೆಗಳಿಗೆ ಘಾಸಿಗೊಳಿಸುವ ಹುನ್ನಾರ ಮಾಡುತ್ತಿದೆ : ಸಂಸದ ಬ್ರಿಜೇಶ್ ಚೌಟ

ನವದೆಹಲಿ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಪೊಲೀಸ್ ಇಲಾಖೆಯ ಮೂಲಕ ಹಬ್ಬಗಳ ಆಚರಣೆಗೆ ಮನಸೋ-ಇಚ್ಛೆ ನಿಯಮಗಳನ್ನು ಹೇರಿ ಹಿಂದೂಗಳ ಭಾವನೆಗಳನ್ನು ಘಾಸಿಗೊಳಿಸುವ ಹುನ್ನಾರ ಮಾಡುತ್ತಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಆರೋಪಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಠಮಿ ಸೇರಿದಂತೆ ಹಲವು ಹಬ್ಬದ ಆಚರಣೆ ಸಂದರ್ಭ ಧ್ವನಿವರ್ಧಕ ಬಳಸುವುದಕ್ಕೆ ಪೊಲೀಸರು ಅವಕಾಶ ನೀಡದೆ ಷರತ್ತುಗಳನ್ನು ವಿಧಿಸಿ ತೊಂದರೆ ನೀಡುತ್ತಿರುವ ಬಗ್ಗೆ ಪ್ರತಿಕ್ರಿಯಿಸಿರುವ ಸಂಸದರು, ತುಳುನಾಡು ದೈವಾರಾಧನೆ, ಧಾರ್ಮಿಕ ಆಚರಣೆಗಳು, ಸಾಂಸ್ಕೃತಿಕ ಮುಂತಾದ ಶ್ರೀಮಂತ ಆಚರಣೆಗೆ ಹೆಸರುವಾಸಿಯಾಗಿದೆ. ಕೋಲ, ನೇಮ, ಯಕ್ಷಗಾನ, ಬ್ರಹ್ಮಕಲಶದಂಥ ಧಾರ್ಮಿಕ ಕಾರ್ಯಕ್ರಮಗಳು ನಿರಂತರವಾಗಿ ನಡೆಯುತ್ತವೆ. ಆದರೆ, ಪೊಲೀಸರು ಇತ್ತೀಚೆಗೆ ಹಲವೆಡೆ ಶ್ರೀಕೃಷ್ಣ ಜನ್ಮಾಷ್ಠಮಿ ಕಾರ್ಯಕ್ರಮದಲ್ಲಿ ಧ್ವನಿವರ್ಧಕ ಬಳಕೆ ಮಾಡಿರುವುದಕ್ಕೆ ಆಯೋಜಕರು ಹಾಗೂ ಸೌಂಡ್‌ ಸಿಸ್ಟಮ್‌ನವರ ಮೇಲೆ ಪ್ರಕರಣ ದಾಖಲಿಸಿರುವುದು ನಿಜಕ್ಕೂ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಬ್ಬ-ಹರಿದಿನಗಳನ್ನು ಸಂತೋಷ, ಭಕ್ತಿ-ಭಾವದಿಂದ ಆಚರಿಸುತ್ತಿರಬೇಕಾದರೆ, ಪೊಲೀಸರಿಗೆ ಈ ರೀತಿ ಏಕಾಏಕಿ ಹಿಂದೂಗಳ ಭಾವನೆಗಳಿಗೆ ನೋವುಂಟು ಮಾಡುವ ರೀತಿಯ ನಿಯಮಗಳನ್ನು ರೂಪಿಸುವುದಕ್ಕೆ ನಿರ್ದೇಶನಗಳನ್ನು ಕೊಟ್ಟವರು ಯಾರು? ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಸರ್ಕಾರವಿದ್ದಾಗ ಧ್ವನಿವರ್ಧಕ ಬಳಕೆಗೆ ಕೆಲವೊಂದು ಷರತ್ತುಗಳು ಇದ್ದರೂ ಹಬ್ಬಗಳ ಆಚರಣೆಗೆ ಪೊಲೀಸರು ಯಾವುದೇ ಅಡ್ಡಿ ಮಾಡುತ್ತಿರಲಿಲ್ಲ. ಹಾಗಾದರೆ, ಸಿದ್ದರಾಮಯ್ಯ ಸರ್ಕಾರವೇ ಹಿಂದೂಗಳ ಧಾರ್ಮಿಕ ಆಚರಣೆಗೆ ಪೊಲೀಸರ ಮೂಲಕ ಈ ರೀತಿಯ ನಿಯಮಗಳನ್ನು ತಂದು ಜನರಿಗೆ ತೊಂದರೆ ಮಾಡುತ್ತಿದೆಯೇ ಎನ್ನುವ ಅನುಮಾನ ಮೂಡುತ್ತದೆ ಎಂದು ಆರೋಪಿಸಿದ್ದಾರೆ.

ಪೊಲೀಸರು ಈಗಾಗಲೇ ಕೆಲವೆಡೆ ಧ್ವನಿವರ್ಧಕ ಮಾಲೀಕರ ಮೇಲೆ ಪ್ರಕರಣ ದಾಖಲಿಸುವುದು, ಅವರ ಸೌಂಡ್‌ ಸಿಸ್ಟಮ್‌ ವಶಪಡಿಸಿಕೊಂಡಿರುವ ಹಿನ್ನಲೆಯಲ್ಲಿ ಅವರೆಲ್ಲ ರೋಸಿ ಹೋಗಿದ್ದಾರೆ. ಅಲ್ಲದೆ, ಇನ್ನುಮುಂದೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಧ್ವನಿವರ್ಧಕ ಬಳಸುವುದಿಲ್ಲ ಎಂದು ಹೇಳಿದ್ದಾರೆ. ಇದರಿಂದ ಈ ಉದ್ಯಮ ನಂಬಿಕೊಂಡಿರುವ ಜನರಿಗೂ ಆರ್ಥಿಕವಾಗಿ ಬಹಳಷ್ಟು ತೊಂದರೆಯಾಗುತ್ತದೆ. ಪರಿಸ್ಥಿತಿ ಹೀಗೆ ಮುಂದುವರಿಗೆ ಇನ್ನು ಚೌತಿ, ಹುಲಿವೇಷ, ನವರಾತ್ರಿಯಂಥ ಹಬ್ಬದ ಆಚರಣೆಗೂ ಸಾಕಷ್ಟು ತೊಂದರೆಯಾಗಲಿದೆ. ಹೀಗಿರುವಾಗ, ಸರ್ಕಾರವು ಕೂಡಲೇ ಮಧ್ಯಪ್ರವೇಶ ಮಾಡಿ ಜನರಿಗೆ ಯಾವುದೇ ಸಮಸ್ಯೆ ಆಗದ ಹಬ್ಬದ ಕಾರ್ಯಕ್ರಮಗಳನ್ನು ಆಚರಿಸುವಂತೆ ಅವಕಾಶ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಗೃಹ ಸಚಿವ ಪರಮೇಶ್ವರ್ ಅವರು ಈ ಹಿಂದೆ ಜಿಲ್ಲೆಗೆ ಬಂದಾಗಲೂ ಈ ವಿಚಾರದ ಬಗ್ಗೆ, ಇಲ್ಲಿನ ಆಚರಣೆಗಳ ಬಗ್ಗೆ ಮನವರಿಕೆ ಮಾಡಿ ಶಾಸಕರೊಡಗೂಡಿ ಈ ಬಗ್ಗೆ ಚರ್ಚೆ ನಡೆಸಿದ್ದೆವು. ಇಂದು ನಮ್ಮ ಭಾಗದ ಶಾಸಕರಾದ ಭರತ್ ವೈ. ಶೆಟ್ಟಿ, ವೇದವ್ಯಾಸ್ ಕಾಮತ್, ಹರೀಶ್ ಪೂಂಜಾ ಅವರು ಕೂಡ ಈ ಬಗ್ಗೆ ಸದನದಲ್ಲಿಯೂ ಧ್ವನಿಯೆತ್ತಿದ್ದಾರೆ. ಹಿಂದೂ ಸಮಾಜದ ಧಾರ್ಮಿಕ ಭಾವನೆಗಳನ್ನು ಗೌರವಿಸಿ, ಈ ಮೊದಲಿನಂತೆ ನಿರ್ಬಂಧಗಳಿಲ್ಲದೆ ಹಬ್ಬಗಳನ್ನು ಆಚರಿಸಲು ಅವಕಾಶ ನೀಡಬೇಕು. ಅದುಬಿಟ್ಟು, ಜನರ ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಪ್ರಯತ್ನ ಮುಂದುವರಿಸಿದರೆ ಅದರಿಂದ ಉಂಟಾಗುವ ಪರಿಣಾಮಗಳಿಗೆ ಸಿದ್ದರಾಮಯ್ಯ ಸರ್ಕಾರವೇ ನೇರ ಹೊಣೆಯಾಗಬೇಕಾಗುತ್ತದೆ ಎಂದು ಕ್ಯಾ. ಚೌಟ ಎಚ್ಚರಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago