Featured

ರಾಜ್ಯದಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಚುನಾವಣೆ ಎದುರಿಸಿದ್ದರೆ ಹೆಚ್ಚು ಸ್ಥಾನ ಗಳಿಸಬಹುದಿತ್ತು : ಸಿದ್ದರಾಮಯ್ಯ -Vishwanews24

ನವದೆಹಲಿ,:,ರಾಜ್ಯದಲ್ಲಿ ಕಾಂಗ್ರೆಸ್ ಸ್ವತಂತ್ರವಾಗಿ ಚುನಾವಣೆ ಎದುರಿಸಿದ್ದರೆ ಉತ್ತಮ ಅವಕಾಶ ದೊರಕುತ್ತಿತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಹುಲ್ ಗಾಂಧಿ ಎದುರು ಹೇಳಿದ್ದಾರೆ.

ರಾಜ್ಯದಲ್ಲಿ ಜೆಡಿಎಸ್‌ ಪಕ್ಷದೊಂದಿಗೆ ಮಾಡಿಕೊಂಡಿರುವ ಚುನಾವಣಾ ಪೂರ್ವ ಮೈತ್ರಿಯಿಂದ ಕಾಂಗ್ರೆಸ್‌ಗೆ ಯಾವುದೇ ರೀತಿಯ ಲಾಭವೂ ಆಗಿಲ್ಲ ಎಂದಿರುವ ಸಿದ್ದರಾಮಯ್ಯನವರು ಮೈತ್ರಿ ಬದಲಿಗೆ ಸ್ವತಂತ್ರವಾಗಿ ಸ್ಪರ್ಧಿಸಿದ್ದರೆ ಹೆಚ್ಚು ಸ್ಥಾನ ಗಳಿಸಬಹುದಿತ್ತು ಎಂದು ಹೇಳಿದ್ದಾರೆ.

ಜೆಡಿಎಸ್‌ ಪ್ರಾಬಲ್ಯವಿರುವ ಕಡೆ ಜೆಡಿಎಸ್‌ಗೆ ನೇರ ಪೈಪೋಟಿ ಇರುವುದು ಕಾಂಗ್ರೆಸ್‌ನಿಂದ ಮಾತ್ರ. ಇಂತಹ ಕ್ಷೇತ್ರಗಳನ್ನು ಜೆಡಿಎಸ್‌ಗೆ ಬಿಟ್ಟುಕೊಟ್ಟು ಕಾಂಗ್ರೆಸ್‌ನ ತಳಮಟ್ಟದ ಸಂಘಟನೆಗೆ ಹಾನಿ ಮಾಡಿಕೊಂಡಂತಾಗಿದೆ. ದಶಕಗಳ ಕಾಲ ಕಾಂಗ್ರೆಸ್‌ ಕಾರ್ಯಕರ್ತರು ಹೋರಾಟ ನಡೆಸಿರುವ ಪಕ್ಷದ ಅಭ್ಯರ್ಥಿ ಪರವಾಗಿ ಕೆಲಸ ಮಾಡುವಂತೆ ಪಕ್ಷ ಅವರಿಗೆ ತಾಕೀತು ಮಾಡಿದೆ.

ಇದರಿಂದ ಅವರ ಸ್ವಾಭಿಮಾನಕ್ಕೆ ಧಕ್ಕೆಯಾಗಿ ಪಕ್ಷಕ್ಕೆ ನಷ್ಟಉಂಟಾಗಿದೆ. ಇಂತಹ ಕಡೆ ಬಿಜೆಪಿ ಪರ್ಯಾಯವಾಗಿ ರೂಪುಗೊಳ್ಳಲು ನಾವೇ ನೆರವು ಮಾಡಿಕೊಟ್ಟಂತಾಗಿದೆ. ಇಂತಹ ಹಲವು ಸಮಸ್ಯೆಗಳು ಮೈತ್ರಿಯಿಂದ ಸೃಷ್ಟಿಯಾಗಿವೆ ಎಂದು ಸಿದ್ದರಾಮಯ್ಯನವರು ರಾಹುಲ್ ಗಾಂಧಿ ಗಮನಕ್ಕೆ ತಂದಿದ್ದಾರೆ ಎನ್ನಲಾಗಿದೆ.

 

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

1 day ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago