Featured

ರಾಜ್ಯದಲ್ಲಿ ಕೊರೊನಾ ಹೆಚ್ಚಳ: ಸದ್ಯಕ್ಕೆ ಮಾಸ್ಕ್ ಕಡ್ಡಾಯ ಮಾಡಿಲ್ಲ ; ಎಚ್ಚರಿಕೆಯಿಂದ ಇರಲು ಸಿಎಂ ಸೂಚನೆ – vishwanews24

ರಾಜ್ಯದಲ್ಲಿ ಕೊರೊನಾ ಹೆಚ್ಚಳ: ಸದ್ಯಕ್ಕೆ ಮಾಸ್ಕ್ ಕಡ್ಡಾಯ ಮಾಡಿಲ್ಲ ;  ಎಚ್ಚರಿಕೆಯಿಂದ ಇರಲು ಸಿಎಂ ಸೂಚನೆ

ಬೆಂಗಳೂರು ರಾಜ್ಯದಲ್ಲಿ ಕೊರೊನಾ ಹೆಚ್ಚಳ ಆಗ್ತಿರೋ ಹಿನ್ನಲೆ ಮುಂಜಾಗ್ರತಾ ಕ್ರಮಗಳನ್ನ ತೆಗೆದುಕೊಳ್ಳಲು ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆಗೆ ಸೂಚನೆ ನೀಡಲಾಗಿದೆ. ಸದ್ಯಕ್ಕೆ ಮಾಸ್ಕ್ ಕಡ್ಡಾಯ ಮಾಡಿ ಅಂತ ಹೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕೊರೊನಾ ಸಂಬಂಧ ಸೋಮವಾರ ಸಭೆ ನಡೆಸಿದ ಬಗ್ಗೆ ವಿಧಾನಸೌಧದಲ್ಲಿ ಮಾಹಿತಿ ನೀಡಿದ ಅವರು, ಸೋಮವಾರ ಕೋವಿಡ್ ಸಂಬಂಧ ಸಭೆ ಮಾಡಿದ್ದೇನೆ. ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಟಾಸ್ಕ್ ಫೋರ್ಸ್ ಸಮಿತಿ ಜೊತೆ ಸಭೆ ಮಾಡಿದ್ದೇನೆ. ಕೆಲವು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಹೇಳಿದ್ದೇನೆ. ಎಲ್ಲದಕ್ಕೂ ತಯಾರಿರುವಂತೆ ಸೂಚನೆ ಕೊಟ್ಟಿದ್ದೇನೆ. ವೆಂಟಿಲೇಟರ್, ಆಕ್ಸಿಜನ್, ಪಿಪಿಇ ಕಿಟ್, ಬೆಡ್ ಯಾವುದರ ಕೊರತೆ ಇರಬಾರದು ಎಂದು ಸೂಚಿಸಿದ್ದಾನೆ ಎಂದು ತಿಳಿಸಿದರು.

ವಾರ್ಡ್ಗಳನ್ನು ಸಿದ್ಧ ಮಾಡಲು ಸೂಚನೆ ನೀಡಿದ್ದೇನೆ. ಇದು ಅಷ್ಟು ಅಪಾಯಕಾರಿ ತಳಿ ಅಲ್ಲ. ಆದರೂ ಮುನ್ನೆಚ್ಚರಿಕೆಯಿಂದ ಇರಬೇಕು. ಮಕ್ಕಳಿಗೆ ಆರೋಗ್ಯ ಸಮಸ್ಯೆ ಇದ್ದರೆ ಅವರನ್ನ ಶಾಲೆಗೆ ಕಳಿಸೋದು ಬೇಡ ಅಂತ ಹೇಳಿದ್ದೇವೆ. ವಯಸ್ಸಾದವರು, ವಿವಿಧ ಆರೋಗ್ಯ ಸಮಸ್ಯೆ ಇರೋರು ಮಾಸ್ಕ್ ಧರಿಸಬೇಕು ಎಂದು ಸಲಹೆ ನೀಡಿದರು.

ಲಸಿಕೆ ಸಿದ್ಧ ಮಾಡಿಕೊಳ್ಳಿ, ವ್ಯಾಕ್ಸಿನ್ ಖರೀದಿ ಮಾಡಿ ಇಟ್ಕೊಳ್ಳಿ ಅಂತ ಸೂಚನೆ ಕೊಟ್ಟಿದ್ದೇನೆ. ವಯಸ್ಸು ಆಗಿರೋದು, ಆರೋಗ್ಯ ಸಮಸ್ಯೆ ಇರೋರು ಮಾಸ್ಕ್ ಹಾಕಬೇಕು. ಏರ್ಪೋರ್ಟ್‌ನಲ್ಲಿ ಟೆಸ್ಟ್ ಮಾಡೋ ಬಗ್ಗೆ ನಿರ್ಧಾರ ಮಾಡಿಲ್ಲ. ಕೇಂದ್ರ ಸರ್ಕಾರದಿಂದ ಯಾವುದೇ ಸೂಚನೆ ಬಂದಿಲ್ಲ. ಆದರೂ ಎಚ್ಚರಿಕೆಯಿಂದ ಇರಲು ಹೇಳಿದ್ದೇನೆ ಎಂದರು.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

9 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago