ಬೆಂಗಳೂರು ರಾಜ್ಯದಲ್ಲಿ ಕೊರೊನಾ ಹೆಚ್ಚಳ ಆಗ್ತಿರೋ ಹಿನ್ನಲೆ ಮುಂಜಾಗ್ರತಾ ಕ್ರಮಗಳನ್ನ ತೆಗೆದುಕೊಳ್ಳಲು ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆಗೆ ಸೂಚನೆ ನೀಡಲಾಗಿದೆ. ಸದ್ಯಕ್ಕೆ ಮಾಸ್ಕ್ ಕಡ್ಡಾಯ ಮಾಡಿ ಅಂತ ಹೇಳಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕೊರೊನಾ ಸಂಬಂಧ ಸೋಮವಾರ ಸಭೆ ನಡೆಸಿದ ಬಗ್ಗೆ ವಿಧಾನಸೌಧದಲ್ಲಿ ಮಾಹಿತಿ ನೀಡಿದ ಅವರು, ಸೋಮವಾರ ಕೋವಿಡ್ ಸಂಬಂಧ ಸಭೆ ಮಾಡಿದ್ದೇನೆ. ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಟಾಸ್ಕ್ ಫೋರ್ಸ್ ಸಮಿತಿ ಜೊತೆ ಸಭೆ ಮಾಡಿದ್ದೇನೆ. ಕೆಲವು ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಹೇಳಿದ್ದೇನೆ. ಎಲ್ಲದಕ್ಕೂ ತಯಾರಿರುವಂತೆ ಸೂಚನೆ ಕೊಟ್ಟಿದ್ದೇನೆ. ವೆಂಟಿಲೇಟರ್, ಆಕ್ಸಿಜನ್, ಪಿಪಿಇ ಕಿಟ್, ಬೆಡ್ ಯಾವುದರ ಕೊರತೆ ಇರಬಾರದು ಎಂದು ಸೂಚಿಸಿದ್ದಾನೆ ಎಂದು ತಿಳಿಸಿದರು.
ವಾರ್ಡ್ಗಳನ್ನು ಸಿದ್ಧ ಮಾಡಲು ಸೂಚನೆ ನೀಡಿದ್ದೇನೆ. ಇದು ಅಷ್ಟು ಅಪಾಯಕಾರಿ ತಳಿ ಅಲ್ಲ. ಆದರೂ ಮುನ್ನೆಚ್ಚರಿಕೆಯಿಂದ ಇರಬೇಕು. ಮಕ್ಕಳಿಗೆ ಆರೋಗ್ಯ ಸಮಸ್ಯೆ ಇದ್ದರೆ ಅವರನ್ನ ಶಾಲೆಗೆ ಕಳಿಸೋದು ಬೇಡ ಅಂತ ಹೇಳಿದ್ದೇವೆ. ವಯಸ್ಸಾದವರು, ವಿವಿಧ ಆರೋಗ್ಯ ಸಮಸ್ಯೆ ಇರೋರು ಮಾಸ್ಕ್ ಧರಿಸಬೇಕು ಎಂದು ಸಲಹೆ ನೀಡಿದರು.
ಲಸಿಕೆ ಸಿದ್ಧ ಮಾಡಿಕೊಳ್ಳಿ, ವ್ಯಾಕ್ಸಿನ್ ಖರೀದಿ ಮಾಡಿ ಇಟ್ಕೊಳ್ಳಿ ಅಂತ ಸೂಚನೆ ಕೊಟ್ಟಿದ್ದೇನೆ. ವಯಸ್ಸು ಆಗಿರೋದು, ಆರೋಗ್ಯ ಸಮಸ್ಯೆ ಇರೋರು ಮಾಸ್ಕ್ ಹಾಕಬೇಕು. ಏರ್ಪೋರ್ಟ್‌ನಲ್ಲಿ ಟೆಸ್ಟ್ ಮಾಡೋ ಬಗ್ಗೆ ನಿರ್ಧಾರ ಮಾಡಿಲ್ಲ. ಕೇಂದ್ರ ಸರ್ಕಾರದಿಂದ ಯಾವುದೇ ಸೂಚನೆ ಬಂದಿಲ್ಲ. ಆದರೂ ಎಚ್ಚರಿಕೆಯಿಂದ ಇರಲು ಹೇಳಿದ್ದೇನೆ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…