ರಾಜ್ಯದಲ್ಲಿ ಕೊರೋನಾ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಯಡಿಯೂರಪ್ಪ -Vishwanews24

Featured, ರಾಜ್ಯ ನ್ಯೂಸ್

ರಾಜ್ಯದಲ್ಲಿ ಕೊರೋನಾ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಸಿಎಂ ಯಡಿಯೂರಪ್ಪ -vishwanews24

ಬೆಂಗಳೂರು : ರಾಷ್ಟ್ರವ್ಯಾಪಿ ಕೊರೋನಾ ಸೋಂಕಿನ ಲಸಿಕಾ ಅಭಿಯಾನ ಆರಂಭಗೊಂಡಿದೆ. ಇದೇ ಸಂದರ್ಭದಲ್ಲಿ ಲಸಿಕೆಯ ಬಗ್ಗೆ ಭಯ, ಆತಂಕ ಕೂಡ ಶುರುವಾಗಿದೆ. ಹೀಗಾಗಿ ರಾಜ್ಯದಲ್ಲಿ ಕೊರೋನಾ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದಂತ ಸಿಎಂ ಯಡಿಯೂರಪ್ಪ ಲಸಿಕೆ ಬಗ್ಗೆ ಯಾರೂ ಭಯ, ಆತಂಕ ಪಡಬೇಕಾಗಿಲ್ಲ ಎಂದು ಹೇಳಿದ್ದಾರೆ.

ಇಂದು ಪ್ರಧಾನಿ ನರೇಂದ್ರ ಮೋದಿ ದೇಶಾದ್ಯಂತ ಕೊರೋನಾ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ, ರಾಜ್ಯದಲ್ಲೂ ಸಿಎಂ ಯಡಿಯೂರಪ್ಪ ಹಾಗೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಚಾಲನೆ ನೀಡಿದರು. ಈ ಬಳಿಕ ಮಾತನಾಡಿದಂತ ಸಿಎಂ ಯಡಿಯೂರಪ್ಪ, ಕೊರೋನಾ ಲಸಿಕೆಯ ಬಗ್ಗೆ ಯಾರೂ ಭಯ, ಆತಂಕ ಪಡಬೇಕಾಗಿಲ್ಲ. ಇದು ಸುರಕ್ಷಿತವಾದಂತ ಲಸಿಕೆಯಾಗಿದೆ ಎಂಬುದಾಗಿ ತಿಳಿಸಿದ್ದಾರೆ.

ಅಂದಹಾಗೇ, ಕೊರೊನಾ ಲಸಿಕೆ ಅಭಿಯಾನಕ್ಕೆ ಮೋದಿ ಚಾಲನೆ ನೀಡಿದ್ದು, 3 ಕೋಟಿ ಜನರಿಗೆ ಕೊರೊನಾ ಲಸಿಕೆ ನೀಡಲಾಗುವುದು. ಪ್ರತಿ ಕೇಂದ್ರದಲ್ಲಿ 100 ಜನರಿಗೆ ಲಸಿಕೆ ನೀಡಲಿದ್ದು, ಮುಂದಿನ ದಿನಗಳಲ್ಲಿ ಇದನ್ನು ಮತ್ತಷ್ಟು ಹೆಚ್ಚು ಮಾಡುತ್ತೇವೆ. ಬಿಡದಿಯ ಮಹಿಳೆಯೊಬ್ಬರು ನಮ್ಮ ಸಮ್ಮುಖದಲ್ಲಿ ಲಸಿಕೆಯನ್ನು ಪಡೆದರು. ಕೊವಿಡ್ ತಾಂತ್ರಿಕ ಸಲಹಾ ಸಮಿತಿಯ ಅಧ್ಯಕ್ಷ ಡಾ.ಸುದರ್ಶನ್ ಬಲ್ಲಾಳ್ ಸಹ ಲಸಿಕೆಯನ್ನು ಪಡೆದಿದ್ದಾರೆ.

http://ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್ 19 ಲಸಿಕೆ ಅಭಿಯಾನ; ಪ್ರಥಮ ಲಸಿಕೆ ನೀಡುವ ಮೂಲಕ ಚಾಲನೆ -Vishwanews24