ಬೆಂಗಳೂರು : ”ರಾಜ್ಯದಲ್ಲಿ ಗೋಹತ್ಯೆ ನಿಷೇಧ ಮಸೂದೆ ಜಾರಿಯಾದರೂ ಕೂಡಾ ಗೋಮಾಂಸ ಮಾರಾಟ ನಿಷೇಧವಾಗಲ್ಲ” ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.
ಸೋಮವಾರ ಸಂಪುಟ ಸಭೆಯ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ”ಹೊಸ ಕಾಯ್ದೆ ಜಾರಿಯಾದರೂ ಎಮ್ಮೆ, ಕೋಣದ ಮಾಂಸ ಮಾರಾಟಕ್ಕೆ ಯಾವುದೇ ನಿಷೇಧವಿಲ್ಲ. ಹಸುವಿನ ಮಾಂಸ ಮಾರಾಟ ಮಾತ್ರ ಸಂಪೂರ್ಣ ನಿಷೇಧವಾಗಲಿದೆ” ಎಂದು ಹೇಳಿದರು.
”ಹಾಗೆಯೇ ಚರ್ಮೋದ್ಯಮಕ್ಕೂ ಯಾವುದೇ ಸಮಸ್ಯೆ ಆಗುವುದಿಲ್ಲ” ಎಂದು ಕೂಡಾ ತಿಳಿಸಿದರು.
”1964ರ ಗೋಹತ್ಯೆ ನಿಷೇಧ ಕಾಯ್ದೆಯ ಪ್ರಕಾರವಾಗಿ 12 ವರ್ಷಕ್ಕಿಂತ ಅಧಿಕ ವಯಸ್ಸಾದ ಹಸು, ಎಮ್ಮೆ, ಕೋಣಗಳನ್ನು ಮಾಂಸಕ್ಕಾಗಿ ವಧೆ ಮಾಡಲು ಅವಕಾಶವಿತ್ತು. ಆದರೆ ಈಗಿನ ತಿದ್ದುಪಡಿ ಮಸೂದೆ ಪ್ರಕಾರ ಹಸು ಮತ್ತು ಎತ್ತುಗಳನ್ನು ಜೀವಿತಾವಧಿಯವರೆಗೂ ವಧೆ ಮಾಡುವಂತಿಲ್ಲ. ಎಮ್ಮೆ ಮತ್ತು ಕೋಣಗಳನ್ನು 13 ವರ್ಷದ ಬಳಿಕ ವಧೆ ಮಾಡಬಹುದು” ಎಂದು ಕೂಡಾ ಮಾಹಿತಿ ನೀಡಿದರು.
”ವಿಧಾನಸಭೆಯಲ್ಲಿ ಅಂಗೀಕಾರವಾಗಿ ಪರಿಷತ್‌ನಲ್ಲಿ ಅವಕಾಶ ಸಿಗದ ಕಾರಣ ಗೋಹತ್ಯೆ ನಿಷೇಧಕ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ” ಎಂದು ಸಚಿವ ಪ್ರಭು ಚೌಹಾಣ್ ಹೇಳಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…