ರಾಜ್ಯದಲ್ಲಿ ಚುನಾವಣೆ ಗೆಲ್ಲಲು ಯಾವ ತಂತ್ರವೂ ಬೇಡ, ನಾವು ಸುಮ್ಮನೆ ಇದ್ದರೂ ಗೆಲ್ಲುತ್ತೇವೆ : ಸಿದ್ದರಾಮಯ್ಯ – Vishwanews24

Featured, ರಾಜ್ಯ ನ್ಯೂಸ್

ರಾಜ್ಯದಲ್ಲಿ ಚುನಾವಣೆ ಗೆಲ್ಲಲು ಯಾವ ತಂತ್ರವೂ ಬೇಡ, ನಾವು ಸುಮ್ಮನೆ ಇದ್ದರೂ ಗೆಲ್ಲುತ್ತೇವೆ..

ಗುಜರಾತ್ ಚುನಾವಣೆಯ ಫಲಿತಾಂಶ ಕರ್ನಾಟಕದ ಚುನಾವಣೆಯ ಮೇಲೆ ಪರಿಣಾಮ ಬೀರಲ್ಲ..

ನರೇಂದ್ರ ಮೋದಿ ವಾಸ ಮಾಡುವ ದೆಹಲಿಯಲ್ಲೇ ಅವರ ಹವಾ ಇಲ್ಲ, ಇನ್ನೂ ರಾಜ್ಯದಲ್ಲಿ ಏನಿದೆ?

ಬೆಂಗಳೂರು : ರಾಜ್ಯದಲ್ಲಿ ಚುನಾವಣೆ ಗೆಲ್ಲಲು ಯಾವ ತಂತ್ರವೂ ಬೇಡ, ನಾವು ಸುಮ್ಮನೆ ಇದ್ದರೂ ಗೆಲ್ಲುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ‘ನರೇಂದ್ರ ಮೋದಿ ಹವಾ ರಾಜ್ಯದಲ್ಲಿ ಏನೂ ಇಲ್ಲ, ನರೇಂದ್ರ ಮೋದಿ ಅವರು ವಾಸ ಮಾಡುವ ದೆಹಲಿಯಲ್ಲೇ ಅವರ ಹವಾ ಇಲ್ಲ, ಇನ್ನೂ ರಾಜ್ಯದಲ್ಲಿ ಏನಿದೆ ಎಂದು ವ್ಯಂಗ್ಯವಾಡಿದ್ದಾರೆ.

ರಾಜ್ಯದಲ್ಲಿ ಚುನಾವಣೆ ಗೆಲ್ಲಲು ಯಾವ ತಂತ್ರವೂ ಬೇಡ, ನಾವು ಸುಮ್ಮನೆ ಇದ್ದರೂ ಗೆಲ್ಲುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಗುಜರಾತ್ ಚುನಾವಣೆಯ ಫಲಿತಾಂಶ ಕರ್ನಾಟಕದ ಚುನಾವಣೆಯ ಮೇಲೆ ಪರಿಣಾಮ ಬೀರಲ್ಲ. ಅಲ್ಲಿನ ವಾತವರಣವೇ ಬೇರೆ ಇಲ್ಲಿನ ವಾತವಾರಣವೇ ಬೇರೆ. ಇಲ್ಲಿನ ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ವಿರೋಧ ಪಕ್ಷವೂ ತುಂಬಾ ಸ್ಟ್ರಾಂಗ್ ಆಗಿದೆ. ಹೀಗಾಗಿ ಗುಜರಾತ್ ಚುನಾವಣೆ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರಲ್ಲ ಎಂದು ಹೇಳಿದ್ದಾರೆ.

2ನೇ ಅವಧಿಗೆ ಗುಜರಾತ್ ಮುಖ್ಯಮಂತ್ರಿಯಾಗಿ ‘ಭೂಪೇಂದ್ರ ಪಟೇಲ್ : ಡಿ.12ರಂದು ಪ್ರಮಾಣ ವಚನ ಸ್ವೀಕಾರ – Vishwanews24

Leave a Reply