ಕೋಲಾರ: ಬಿಜೆಪಿ ಸರ್ಕಾರದ ಕರ್ಮಕಾಂಡಗಳು ನಿತ್ಯ ಬಯಲಾಗುತ್ತಿವೆ. ಈ ಸರ್ಕಾರ ಹಗರಣದಲ್ಲಿ ಮುಳುಗಿದೆ’ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.
ನಗರ ಹೊರವಲಯದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ರಾಜ್ಯದಲ್ಲಿ ಜನ ಬದಲಾವಣೆ ಬಯಸಿದ್ದು, ಜೆಡಿಎಸ್ ಗೆಲ್ಲಿಸಲು ತೀರ್ಮಾನ ಕೈಗೊಡಿದ್ದಾರೆ. ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಜನರು ಈಗಾಗಲೇ ಅಧಿಕಾರ ಕೊಟ್ಟು ನೋಡಿದ್ದಾರೆ. ಆದರೆ, ಜನಸಾಮಾನ್ಯರಿಗೆ ಒಳ್ಳೆಯದನ್ನು ಮಾಡಲು ಅಧಿಕಾರವನ್ನು ಸರಿಯಾಗಿ ಬಳಸಿಕೊಳ್ಳದೆ ವಿಫಲವಾಗಿವೆ’ ಎಂದರು.
‘ಬಜೆಟ್ ಸರಿಯಾಗಿ ಉಪಯೋಗ ಆಗಬೇಕೆಂದು ಕುಮಾರಸ್ವಾಮಿ ಪಂಚರತ್ನ ಯೋಜನೆ ರೂಪಿಸಿದ್ದಾರೆ. 77 ವಿಧಾನಸಭಾ ಕ್ಷೇತ್ರಗಳಲ್ಲಿ ಯಾತ್ರೆ ನಡೆದಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ’ ಎಂದು ತಿಳಿಸಿದರು.
‘ಅಕ್ಕಪಕ್ಕ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ಆಡಳಿತ ನಡೆಸುತ್ತಿವೆ. ಆ ರಾಜ್ಯದ ಮುಖ್ಯಮಂತ್ರಿಗಳು ಎಚ್.ಡಿ.ದೇವೇಗೌಡರ ಮೇಲೆ ವಿಶೇಷ ಗೌರವ ಇಟ್ಟುಕೊಂಡಿದ್ದಾರೆ. ಕರ್ನಾಟಕದಲ್ಲೂ ಪ್ರಾದೇಶಿಕ ಪಕ್ಷ ಅಧಿಕಾರಕ್ಕೆ ಬರಬೇಕೆಂಬ ಆಶಯ ಹೊಂದಿವೆ’ ಎಂದರು.
‘ದೇವೇಗೌಡರ ಹೆಸರು ಶಾಶ್ವತ. ಅವರ ಹೆಸರೇ ನಮಗೆ ಸ್ಫೂರ್ತಿ. ಈ ತಿಂಗಳ 26ರಂದು ಮೈಸೂರಿನಲ್ಲಿ ನಡೆಯಲಿರುವ ಸಮಾವೇಶದಲ್ಲಿ ದೇವೇಗೌಡರು ಪಾಲ್ಗೊಳ್ಳಲಿದ್ದಾರೆ. ವರ್ಚುವಲ್ ವೇದಿಕೆಗಳಲ್ಲಿಯೂ ಅವರನ್ನು ಬಳಸಿಕೊಳ್ಳುತ್ತೇವೆ. ಅವರ ಮೇಲೆ ಕನ್ನಡಿಗರು ಬಹಳ ಗೌರವ ಇಟ್ಟುಕೊಂಡಿದ್ದಾರೆ’ ಎಂದು ನುಡಿದರು.
‘ಕೋಲಾರದಲ್ಲಿ ಜೆಡಿಎಸ್ ಕಾರ್ಯಕರ್ತರು, ಅಭ್ಯರ್ಥಿಗಳು ಪ್ರಬಲವಾಗಿದ್ದಾರೆ. ಜಿಲ್ಲೆಯಲ್ಲಿ ಈ ಬಾರಿ ಚುನಾವಣೆಯಲ್ಲಿ ಹಿಡಿತ ಸಾಧಿಸಲಿದ್ದೇವೆ. ಮಾರ್ಚ್ 20ರಂದು ಕೋಲಾರ ಜಿಲ್ಲೆಯಲ್ಲಿ ಸಮಾವೇಶ ಹಮ್ಮಿಕೊಂಡಿದ್ದು, ನಾನು, ಸಿ.ಎಂ.ಇಬ್ರಾಹಿಂ ಭಾಗವಹಿಸಲಿದ್ದೇವೆ’ ಎಂದರು.
‘ಪದೇಪದೇ ಕೋಲಾರಕ್ಕೆ ಭೇಟಿ ನೀಡುವುದು ಎನ್ನುವುದಕ್ಕಿಂತ ಈ ಭಾಗದಲ್ಲಿ ಈ ಬಾರಿ ಜೆಡಿಎಸ್‌ಗೆ ಗೆಲುವಿನ ಅವಕಾಶಗಳು ಹೆಚ್ಚಿವೆ. 123 ಸ್ಥಾನಗಳ ಮಿಷನ್‌ನೊಂದಿಗೆ ಪಂಚರತ್ನ ಯಾತ್ರೆ ಕೈಗೊಂಡಿದ್ದೇವೆ’ ಎಂದು ಹೇಳಿದರು.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…