Featured

ರಾಜ್ಯದಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದರೆ 5 ಲಕ್ಷ ಮನೆ ನಿರ್ಮಾಣ  : ಎಚ್‌.ಡಿ.ಕುಮಾರಸ್ವಾಮಿ ಭರವಸೆ – Vishwanews24

ರಾಜ್ಯದಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದರೆ 5 ಲಕ್ಷ ಮನೆ ನಿರ್ಮಾಣ ..

ವಾಸ ಮಾಡಲು ಮನೆ ಇಲ್ಲ ಎಂದು ಯಾವುದೇ ಕುಟುಂಬ ಹೇಳಬಾರದು ..

ಬೆಂಗಳೂರು : ರಾಜ್ಯದಲ್ಲಿ ಜೆಡಿಎಸ್‌ ಅಧಿಕಾರಕ್ಕೆ ಬಂದರೆ 5 ಲಕ್ಷ ಮನೆ ನಿರ್ಮಿಸಲಾಗುವುದು. ವಾಸ ಮಾಡಲು ಮನೆ ಇಲ್ಲ ಎಂದು ಯಾವುದೇ ಕುಟುಂಬ ಹೇಳಬಾರದು. ಆ ರೀತಿಯ ವಾತಾವರಣ ನಿರ್ಮಾಣ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ದಾಸರಹಳ್ಳಿ ವಿಧಾನ ಸಭಾ ಕ್ಷೇತ್ರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಪಂಚರತ್ನ ಯಾತ್ರೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಮುಂದಿನ ಐದು ವರ್ಷದಲ್ಲಿ ಮನೆ ಇಲ್ಲ ಎಂದು ಯಾರೂ ಹೇಳಬಾರದು. ಆ ರೀತಿಯ ವಾತಾವರಣ ನಿರ್ಮಿಸಿ ಬಡವರಿಗೆ ಮನೆ ವಿತರಿಸಲಾಗುವುದು. ಅಷ್ಟೇ ಅಲ್ಲ, ಪ್ರತಿ ಕುಟುಂಬಕ್ಕೆ 15 ರಿಂದ 20 ಸಾವಿರ ರು. ಆದಾಯ ಬರುವಂತಹ ಕಾರ್ಯಕ್ರಮ ರೂಪಿಸಲು ಚಾಲನೆ ನೀಡಿದ್ದೇವೆ ಎಂದು ಸ್ಪಷ್ಟಪಡಿಸಿದರು.

ನಾನು ಮುಖ್ಯಮಂತ್ರಿಯಾಗಿದ್ದಾಗ ಈ ಭಾಗದ ಅಭಿವೃದ್ಧಿಗೆ ಕೋಟ್ಯಂತರ ರು. ಬಿಡುಗಡೆ ಮಾಡಿದ್ದೆ. ಆದರೆ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಅದೆಲ್ಲವನ್ನೂ ವಾಪಸ್‌ ಪಡೆದರು. ಈ ಭಾಗದ ಮಾಜಿ ಶಾಸಕ ಮತ್ತು ಸಂಸದ ಸದಾನಂದಗೌಡ ಸೇರಿಕೊಂಡು ಅನುದಾನಕ್ಕೆ ಕೊಕ್ಕೆ ಹಾಕಿದರು. ನಗರದ ಹೊರ ಭಾಗದ ಹಳ್ಳಿಗಳನ್ನು ಸೇರಿಸಿ ಬಿಬಿಎಂಪಿ ರಚನೆ ಮಾಡಿ ಅಭಿವೃದ್ಧಿ ಮಾಡಿದ್ದು ನನ್ನ ಕಾಲದಲ್ಲಿ. ನಾವು ಆಗ ಲೂಟಿ ಮಾಡಿ ಅದರಲ್ಲಿ ಚುನಾವಣೆ ನಡೆಸಿದ್ದರೆ ಇಂದು ಬಿಜೆಪಿಯವರು ಮನೆಯಲ್ಲಿ ಇರುತ್ತಿದ್ದರು ಎಂದು ಟೀಕಿಸಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago