Featured

ರಾಜ್ಯದಲ್ಲಿ ಡ್ರಗ್ಸ್‌ ವಿರೋಧಿ ನೀತಿ ಶೀಘ್ರ ಜಾರಿಗೆ ತರಲಾಗುವುದು : ಗೃಹ ಸಚಿವ ಬಸವರಾಜ ಬೊಮ್ಮಾಯಿ -Vishwanews24

ರಾಜ್ಯದಲ್ಲಿ ಡ್ರಗ್ಸ್‌ ವಿರೋಧಿ ನೀತಿ ಶೀಘ್ರ ಜಾರಿಗೆ ತರಲಾಗುವುದು : ಗೃಹ ಸಚಿವ ಬಸವರಾಜ ಬೊಮ್ಮಾಯಿ -Vishwanews24

ಬೆಂಗಳೂರು : ರಾಜ್ಯದಲ್ಲಿ ಮಾದಕ ಪದಾರ್ಥಗಳ ದಂಧೆಗೆ ಕಡಿವಾಣ ಹಾಕಲು ಮತ್ತು ಈ ಪಿಡುಗಿನಿಂದ ಸಮಾಜವನ್ನು ಮುಕ್ತಗೊಳಿಸಲು ಸಮಗ್ರವಾದ “ಡ್ರಗ್ಸ್‌ ವಿರೋಧಿ ನೀತಿ’ ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನೀತಿ ಕರಡು ಹಂತದಲ್ಲಿದ್ದು, ಮುಂದಿನ ದಿನಗಳಲ್ಲಿ ಸದನದಲ್ಲಿ ಮಂಡಿಸಲಾಗುವುದು. ಕೇಂದ್ರ ಸರಕಾರದ “ಮಾದಕ ವಸ್ತುಗಳು ಮತ್ತು ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ’ (ಎನ್‌ಡಿಪಿಎಸ್‌)ಯ ನಿಯಮಗಳಲ್ಲಿ ಬದಲಾವಣೆ ತರಲು ರಾಜ್ಯ ಸರಕಾರಕ್ಕೆ ಅಧಿಕಾರವಿದ್ದು, ಈ ನಿಟ್ಟಿನಲ್ಲಿಯೂ ಕ್ರಮ ಕೈಗೊಳ್ಳಲಾಗುವುದು ಎಂದರು.

ಇದನ್ನೂ ಓದಿ : ಮಂಗಳೂರು : ಬಾಲಕನ ಶ್ವಾಸಕೋಶದಲ್ಲಿ ಗುಂಡುಸೂಜಿ ಪತ್ತೆ -Vishwanews24

ವಿಧಾನಪರಿಷತ್ತಿನಲ್ಲಿ ಪ್ರಶ್ನೋತ್ತರ ಅವಧಿ ವೇಳೆ ಬಿಜೆಪಿಯ ಮಹಾಂತೇಶ್‌ ಕವಟಗಿಮಠ ಪ್ರಶ್ನೆಗೆ ಬೊಮ್ಮಾಯಿ ಅವರು ಉತ್ತರಿಸಿದರು.

ರಾಜ್ಯದಲ್ಲಿ 2018ರಿಂದ 2021ರ ಮಾ. 10ರ ತನಕ 7,943 ಮಾದಕ ವಸ್ತು ಪ್ರಕರಣಗಳು ದಾಖಲಾಗಿದ್ದು, 10,566 ಆರೋಪಿಗಳನ್ನು ಬಂಧಿಸಲಾಗಿದೆ. ಈ ಪಿಡುಗನ್ನು ಸಮಾಜದಿಂದ ಕಿತ್ತು ಹಾಕಬೇಕು. ಈ ನಿಟ್ಟಿನಲ್ಲಿ ಸರಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಬೆಂಗಳೂರು ನಗರ ಸಹಿತ ಎಲ್ಲ ಜಿಲ್ಲೆಗಳಲ್ಲಿ ನಾರ್ಕೋಟಿಕ್‌ ಸೆಲ್‌ಗ‌ಳನ್ನು ಸ್ಥಾಪಿಸಲಾಗಿದೆ. ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಬೆಳಗಾವಿ, ಬೀದರ್‌, ಕಲಬುರಗಿಗಳಲ್ಲಿ ತೀವ್ರ ನಿಗಾ ಇರಿಸಲಾಗಿದೆ. ಈ ಪಿಡುಗು ನಿವಾರಣೆಗೆ ಗೃಹ ಇಲಾಖೆಯ ಜತೆಗೆ ಶಿಕ್ಷಣ ಮತ್ತು ಆರೋಗ್ಯ ಇಲಾಖೆಗಳು ಕೈಜೋಡಿಸಬೇಕು. ಈ ಕುರಿತು ಹಲವು ಸಭೆಗಳನ್ನು ನಡೆಸಲಾಗಿದೆ. ಜನರಲ್ಲಿ ಜಾಗೃತಿ ಮೂಡಿಸಲು ಮತ್ತು ಪ್ರಕರಣಗಳನ್ನು ಬೆಳಕಿಗೆ ತರಲು ಮಾಧ್ಯಮಗಳ ಪಾತ್ರವೂ ಮುಖ್ಯವಾಗಿದೆ. ಮಾಧ್ಯಮದವರ ಜತೆ ಸೇರಿ ಗೃಹ ಇಲಾಖೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ ಎಂದು ಗೃಹ ಸಚಿವರು ವಿವರಿಸಿದರು.

ಇದನ್ನೂ ಓದಿ : ದೇಶದಲ್ಲಿ ಗೋ ಮಾಂಸ ನಿಷೇಧ ಮಾಡಿ ಗೋ ಮಾಂಸ ರಫ್ತು ನಿಲ್ಲಿಸಿ : ಯು.ಟಿ. ಖಾದರ್ -Vishwanews24

ಹುಕ್ಕಾ ಪಾರ್ಲರ್‌ ನಿಷೇಧ
ಹುಕ್ಕಾ ಪಾರ್ಲರ್‌ ನಡೆಸಲು ಬಿಬಿಎಂಪಿ ಲೈಸೆನ್ಸ್‌ ಕೊಡುತ್ತದೆ. ಅಲ್ಲಿ ಮಾದಕ ಪದಾರ್ಥಗಳ ಬಳಕೆಯಾಗು ವುದು ತಿಳಿದುಬಂದರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಹುಕ್ಕಾ ಪಾರ್ಲರ್‌ಗಳ ನಿಷೇಧಕ್ಕೆ ವಿರೋಧವೂ ಇದೆ. ಆದರೆ ಇದನ್ನು ಲಕ್ಷಿಸದೆ ಹುಕ್ಕಾ ಪಾರ್ಲರ್‌ ನಿಷೇಧಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಭರವಸೆ ನೀಡಿದರು.

ಇದನ್ನೂ ಓದಿ : ಕುಂದಾಪುರ : ಪ್ರಧಾನಿ “ಪರೀಕ್ಷಾ ಪೇ ಚರ್ಚಾ’, ಚಾರಮಕ್ಕಿ ಶಾಲೆಯ ಅನುಷಾ ಆಯ್ಕೆ -Vishwanews24

 

Vishwa News 24

Recent Posts

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

46 minutes ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

57 minutes ago

ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ – vishwanews24

   ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…

59 minutes ago

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ ; ಅರ್ಜಿ ಆಹ್ವಾನ – vishwanews24

ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…

1 hour ago

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  – vishwanews24

ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’  ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…

1 hour ago

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

16 hours ago