ವಿಜಯಪುರ: ರಾಜ್ಯದಲ್ಲಿ ನಡೆಯಲಿರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಎಲ್ಲಾ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಮಾಜಿ ಸಚಿವ ಎಂಬಿ ಪಾಟೀಲ್ ವಿಶ್ವಾಸ ವ್ಯಕ್ತಪಡಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅವಳಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಹಾಲಿ ಸದಸ್ಯರಿಗೆ ಟಿಕೆಟ್ ನೀಡಲಾಗಿದೆ. ಒಬ್ಬರೇ ಅಭ್ಯರ್ಥಿಯನ್ನಾಗಿ ಘೋಷಿಸಿ, ಅವರ ಪರ ವ್ಯಾಪಕ ಪ್ರಚಾರ ಮಾಡಿದ್ದೇವೆ. ಪಕ್ಷದ ನಾಯಕರಾದ ಸಿದ್ದರಾಮಯ್ಯ, ಎಸ್ ಆರ್ ನಾಯಕ, ಶಿವಾನಂದ ಪಾಟೀಲ, ಯಶವಂತರಾಯಗೌಡ ಪಾಟೀಲ, ಆನಂದ ನ್ಯಾಮಗೌಡ, ರಾಜು ಆಲಗೂರ, ವಿಠ್ಠಲ ಕಟಕೊಂಡ ಸೇರಿದಂತೆ ಕಾಂಗ್ರೆಸ್ ನಾಯಕರು ಅವರವರ ಮತ ಕ್ಷೇತ್ರದಲ್ಲಿ ಸುನಿಲಗೌಡ ಪಾಟೀಲ ಪರ ವ್ಯಾಪಕ ಪ್ರಚಾರ ಮಾಡಿದ್ದಾರೆ. ಹೀಗಾಗಿ ಸುನೀಲಗೌಡ ಪಾಟೀಲ ಪರ ಮತದಾರರ ಒಲವು ಹೆಚ್ಚಿದೆ ಎಂದರು.
ರಾಜ್ಯದಲ್ಲಿ ಬಿಜೆಪಿ ಸರಕಾರವಿದೆ. ಆದಾಗ್ಯೂ ನಮ್ಮ ಪಕ್ಷದ ಅಭ್ಯರ್ಥಿ ಸುನೀಲ್‌ಗೌಡ 1000 ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಎಂಬಿ ಪಾಟೀಲ್, ಸುನೀಲ್‌ಗೌಡ 5 ಸಾವಿರ ಮತಗಳನ್ನು ಪಡೆಯಲಿದ್ದಾರೆ. ಎಲ್ಲರ ಪ್ರಯತ್ನದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವುದಾಗಿ ತಿಳಿಸಿದರು. ಪಂಚಾಯಿತಿ ರಾಜ್ ವ್ಯವಸ್ಥೆ ಗಾಂಧೀಜಿ ಕನಸು. ಹಳ್ಳಿಗಳ ಅಭಿವೃದ್ಧಿಯೇ ಗ್ರಾಮ ಸ್ವರಾಜ್ ಕನಸು ಎಂಬುದಾಗಿ ಅವರು ಕಂಡಿದ್ದರು. ಮುಂದೆ ಕಾಂಗ್ರೆಸ್ ಪಕ್ಷ ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತಂದು ದೀನ ದಲಿತರಿಗೆ ಅವಕಾಶ ಕಲ್ಪಿಸಿ ಶಕ್ತಿ ತುಂಬಿತು. ನಂತರ ಬೇಲೂರು ಘೋಷಣೆ ಮೂಲಕ ಸೋನಿಯಾ ಗಾಂಧಿ ಅವರು ಈ ಕಾಯ್ದೆಗೆ ಶಕ್ತಿ ತುಂಬಿದರು. ನರೇಗಾ ಯೋಜನೆ ಜಾರಿಗೆ ಬಂತು. ತನ್ಮೂಲಕ ಉದ್ಯೋಗ ಸಿಕ್ಕಿತು. ಪಕ್ಷ ಕೊಡುಗೆ ನೀಡಿದೆ. ಹೀಗಾಗಿ ಅವಳಿ ಜಿಲ್ಲೆಯ ಮತದಾರರು ಪಂಚಾಯತ್ ರಾಜ್ ವ್ಯವಸ್ಥೆ ಬಲಪಡಿಸಿದ ಕಾಂಗ್ರೆಸ್ ಪಕ್ಷ ಕೈ ಬಿಡಲ್ಲ ಎಂದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…