ಬೆಂಗಳೂರು : “ನಿಫಾ ಸೋಂಕು ನಮ್ಮ ರಾಜ್ಯದಲ್ಲಿ ಕಾಣಿಸಿಕೊಂಡಿಲ್ಲ. ನಿಫಾ ಸೋಂಕಿಗೆ ಲಸಿಕೆ,, ಚಿಕಿತ್ಸೆ ಇಲ್ಲ. ರೋಗದ ಲಕ್ಷಣಗಳನ್ನು ಆಧರಿಸಿ ಚಿಕಿತ್ಸೆ ಕೊಡುತ್ತೇವೆ” ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಿಫಾ ಸೋಂಕಿಗೆ ಕೇರಳದಲ್ಲಿ ಮಗುವೊಂದು ಸಾವನ್ನಪ್ಪಿದೆ. ಸೋಂಕಿತರ ಮೇಲೆ ಅಲ್ಲಿನ ಸರ್ಕಾರ ನಿಗಾ ವಹಿಸಿದೆ. ನಿಫಾ ತಡೆಗೆ ಕೇರಳ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ನಮಗೆ ಸಮಾಧಾನವಿದೆ” ಎಂದಿದ್ದಾರೆ.
“ನಿಫಾ ಸೋಂಕು ಬಗ್ಗೆ ರಾಜ್ಯದ ಕೇರಳ ಗಡಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಗಂಭೀರ ಕ್ರಮಕ್ಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ರಾಜ್ಯದಲ್ಲಿ ನಿಫಾ ತಡೆಗೆ ಎಲ್ಲಾ ರೀತಿಯಾದ ಕ್ರಮ ಕೈಗೊಳ್ಳುತ್ತೇವೆ” ಎಂದು ತಿಳಿಸಿದ್ದಾರೆ.
1-5ನೇ ತರಗತಿಗಳ ಪ್ರಾರಂಭದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, “6-8ನೇ ತರಗತಿಗಳು ಈಗಷ್ಟೇ ಆರಂಭವಾಗಿವೆ. ಎಷ್ಟೋ ಪೋಷಕರು ಇನ್ನೂ ಮಕ್ಕಳನ್ನು ಶಾಲೆಗೆ ಕಳುಹಿಸಿಲ್ಲ. ಸ್ವಲ್ಪ ದಿನ ಕಾದು ನೋಡೋಣ” ಎಂದು ಹೇಳಿದ್ದಾರೆ.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…