ಮೈಸೂರು : ರಾಜ್ಯದ ನೆರೆ ಸಂತ್ರಸ್ತರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿ ನೆರೆ ಹಾವಳಿಯಿಂದ ಮನೆ ಕಳೆದುಕೊಂಡವರಿಗೆ 1 ಲಕ್ಷ ಮನೆಗಳನ್ನು ನಿರ್ಮಾಣ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ಸಂತ್ರಸ್ತರ ಪರಿಹಾರ ಕಾರ್ಯಕ್ಕಾಗಿ 1 ಸಾವಿರ ಕೋಟಿ ರೂ. ಬಿಡುಗಡೆ ಮಾಡಲಾಗುತ್ತದೆ. ಏಕಕಾಲದಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಮತ್ತೆ ಮನೆಗಳನ್ನು ಕಟ್ಟಿಕೊಡಲಾಗುತ್ತದೆ. ಈಗಾಗಲೇ 1 ಲಕ್ಷ ಮನೆಗಳನ್ನು ನಿರ್ಮಾಣ ಮಾಡಲು ಸಿಎಂ ಬಿ.ಎಸ್. ಯಡಿಯೂರಪ್ಪ ತೀರ್ಮಾನಿಸಿದ್ದಾರೆ ಎಂದರು.
ಜಿಲ್ಲಾಧಿಕಾರಿಗಳನ್ನೇ ನೋಡಲ್ ಅಧಿಕಾರಿಗಳಾಗಿ ನಿಯೋಜಿಸಲಾಗಿದೆ. ಡಿಸಿಗಳೇ ಅದರ ನೇತೃತ್ವ ವಹಿಸಿಕೊಂಡು ತ್ವರಿತವಾಗಿ ಕೆಲಸ ಮಾಡಲಿದ್ದಾರೆ. ಬೆಳಗಾವಿ, ಬಾಗಲಕೋಟೆ, ಮಡಿಕೇರಿ, ದೇವದುರ್ಗ ಸೇರಿದಂತೆ 102 ಕ್ಷೇತ್ರದಲ್ಲಿ ಹೆಚ್ಚಿನ ಮನೆ ಹಾನಿ ಉಂಟಾಗಿದೆ. ದುರಸ್ತಿಗೊಂಡ ಮನೆಗಳನ್ನು ರಿಪೇರಿ ಮಾಡಲಾಗುತ್ತದೆ. ಇದಕ್ಕಾಗಿ ರಾಜೀವ್ ಗಾಂಧಿ ನಿಗಮದಿಂದ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…