Featured

ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡುವ ಅಗತ್ಯವಿಲ್ಲ : ಮುಖ್ಯಮಂತ್ರಿ ಯಡಿಯೂರಪ್ಪ -Vishwanews24

ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡುವ ಅಗತ್ಯವಿಲ್ಲ : ಮುಖ್ಯಮಂತ್ರಿ ಯಡಿಯೂರಪ್ಪ -Vishwanews24

ಬೆಂಗಳೂರು: ಕೊರೋನಾದ ಹೊಸ ಮಾದರಿ ವೈರಸ್ ನಿಂದಾಗ ರಾಜ್ಯ,ದೇಶದಲ್ಲಿ ಆತಂಕ ಎದುರಾಗಿದ್ದು, ವಿದೇಶಗಳಿಂದ ಬರುವವರ ಮೇಲೆ‌ ನಿಗಾ ಇಟ್ಟು ಪರಿಶೀಲನೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಹೊಸ ಕೊರೋನಾ ಸೋಂಕು ಹಬ್ಬಲು ಬಿಡುವುದಿಲ್ಲ. ಆದರೆ ಮಹಾರಾಷ್ಟ್ರ ಮಾದರಿಯಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನಾ ರೂಪಾಂತರ ಇಡೀ ರಾಜ್ಯ ಮತ್ತು ದೇಶದ ಜನರನ್ನು ಆತಂಕಕ್ಕೀಡು ಮಾಡಿದೆ. ಈಗಾಗಲೇ ಚೆನ್ನೈಗೆ ಬಂದಿರುವ ವ್ಯಕ್ತಿಯಲ್ಲಿ ಕಾಣಿಸಿಕೊಂಡಿದೆ ಹಾಗಾಗಿ ಎಷ್ಟು ಕಟ್ಟೆಚ್ಚರ ವಹಿಸಿದರೂ ಕಡಿಮೆಯೇ. ಯಾರೇ ಹೊರಗಡೆಯಿಂದ ಬಂದರೂ ವಿಮಾನ ನಿಲ್ದಾಣದಲ್ಲಿ ನೋಡಿ ಪರಿಶೀಲಿಸಿ ತಪಾಸಣೆ ಮಾಡುತ್ತೇವೆ ಎಂದರು.

ದೇಶಾದ್ಯಂತ ಈಗಾಗಲೇ ಅಲರ್ಟ್ ಇದೆ. ಪ್ರಧಾನಿ ಕೂಡಾ ಆತಂಕಕ್ಕೊಳಗಾಗಿ ಎಚ್ಚರಿಕೆಯಿಂದ ಇರುವಂತೆ ಎಲ್ಲಾ ರಾಜ್ಯಗಳಿಗೂ, ದೇಶದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ. ಅದರಂತೆ ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ವೈರಸ್ ಹರಡದಂತೆ ಬೇಕಿರುವ ಎಚ್ಚರಿಕೆ ವಹಿಸುತ್ತೇವೆ. ಈ ವರ್ಷ ಹೊಸ ವರ್ಷ ಆಚರಣೆಯೇ ಇಲ್ಲ ಹೊಸ ವರ್ಷ ದೊಡ್ಡ ಪ್ರಮಾಣದಲ್ಲಿ ಆಚರಣೆ ಮಾಡಲು ಬಿಡಲ್ಲ ಎಂದು ಅವರು ತಿಳಿಸಿದರು.

ಮಹಾರಾಷ್ಟ್ರದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಆದರೆ ಆ ಮಾದರಿ ಇಲ್ಲ ಅಗತ್ಯವಿಲ್ಲ. ನಮ್ಮ ರಾಜ್ಯದಲ್ಲಿ ಸದ್ಯಕ್ಕೆ ನೈಟ್ ಕರ್ಫ್ಯೂ ಅಗತ್ಯವಿಲ್ಲ ಎಂದು ಹೇಳುವ ಮೂಲಕ ಎಚ್ಚರಿಕೆ ವಹಿಸುವುದನ್ನು ಬಿಟ್ಟು ಮತ್ಯಾವುದೇ ದಾರಿ ಇಲ್ಲವೆಂದು ತಿಳಿಸಿದರು.

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

7 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

7 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

8 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

8 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

8 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

9 hours ago