ರಾಜ್ಯದಲ್ಲಿ ಪರಿಸ್ಥಿತಿ ಅಧ್ಯಯನ ಮಾಡಿ ಎರಡು ತಿಂಗಳ ಬಳಿಕ ಶಾಲೆಗಳನ್ನು ಪ್ರಾರಂಭಿಸುವುದು ಸೂಕ್ತ : ಸಿದ್ದರಾಮಯ್ಯ -Vishwanews24
ಬೆಂಗಳೂರು : ರಾಜ್ಯದಲ್ಲಿ ಎರಡು ತಿಂಗಳ ಬಳಿಕ ಪರಿಸ್ಥಿತಿಯನ್ನು ಅಧ್ಯಯನ ಮಾಡಿಕೊಂಡು ನಂತರ ಶಾಲೆಗಳನ್ನು ಪ್ರಾರಂಭಿಸುವುದು ಸೂಕ್ತ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರಾಜ್ಯ ಸರಕಾರ ಈಗಾಗಲೇ ಶಾಲೆಗಳನ್ನು ಪ್ರಾರಂಭಿಸುವ ಚಿಂತನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಸರಕಾರದ ನಿರ್ಧಾರವನ್ನು ಟೀಕಿಸಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಇಂತಹ ಸಂದರ್ಭದಲ್ಲಿ ಶಾಲೆಗಳನ್ನು ಜುಲೈ ತಿಂಗಳಿನಲ್ಲಿ ಪುನರಾರಂಭಿಸುವ ಚಿಂತನೆಯನ್ನು ಸರಕಾರ ಮಾಡಿದೆ, ಇದಕ್ಕೆ ಮಕ್ಕಳ ಪೋಷಕರು ವಿರೋಧ ವ್ಯಕ್ತಪಡಿಸಿದ್ದು ಸರಕಾರಕ್ಕೆ ಗೊತ್ತಿದೆ ಅಲ್ಲದೆ ಪೋಷಕರು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಹೇಳಿದ್ದಾರೆ.
ಬೇರೆ ದೇಶಗಳಲ್ಲಿ ಶಾಲೆಗಳನ್ನು ಪ್ರಾರಂಭಿಸಿದ ನಂತರದಲ್ಲಿ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ತಗಲಿದೆ ಹಾಗಿರುವಾಗ ರಾಜ್ಯ ಸರಕಾರ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಇನ್ನು ಎರಡು ತಿಂಗಳು ಶಾಲೆಗಳನ್ನು ಪ್ರಾರಂಭಿಸುವುದು ಸೂಕ್ತವಲ್ಲ ಎಂದು ಟ್ವೀಟ್ ಮಾಡಿದ್ದಾರೆ.
