ರಾಜ್ಯದಲ್ಲಿ ಪ್ರತಿ ಜಿಲ್ಲೆಗೂ ಒಂದು ಸರಕಾರಿ ವೈದ್ಯಕೀಯ ಕಾಲೇಜು : ಸಚಿವರ ಭರವಸೆ – vishwanews24
ರಾಜ್ಯದಲ್ಲಿ ಪ್ರತಿ ಜಿಲ್ಲೆಗೂ ಒಂದು ಸರಕಾರಿ ವೈದ್ಯಕೀಯ ಕಾಲೇಜು : ಸಚಿವರ ಭರವಸೆ
ಬೆಂಗಳೂರು: ರಾಜ್ಯದಲ್ಲಿ ಪ್ರತಿ ಜಿಲ್ಲೆಗೂ ಒಂದು ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸಬೇಕು ಎಂಬುದು ಸರಕಾರದ ನೀತಿಯಾಗಿದೆ. ಉಡುಪಿ ಜಿಲ್ಲೆಯಲ್ಲೂ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣಪ್ರಕಾಶ್ ಪಾಟೀಲ್ ತಿಳಿಸಿದರು.
ಬಿಜೆಪಿಯ ಯಶ್‌ಪಾಲ್ ಸುವರ್ಣ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಸ್ತುತ ರಾಜ್ಯದ 22 ಜಿಲ್ಲೆಗಳಲ್ಲಿ ಸರಕಾರಿ ವೈದ್ಯಕೀಯ ಕಾಲೇಜುಗಳಿದ್ದು, ಉಳಿದ 9 ಜಿಲ್ಲೆಗಳಲ್ಲೂ ಆರಂಭಿಸಲಾಗುವುದು. ಸರಕಾರದ ವತಿಯಿಂದ ಹೊಸ ವೈದ್ಯಕೀಯ ಕಾಲೇಜು ಸ್ಥಾಪಿಸಲು 610 ಕೋಟಿ ರೂ.ಗಳ ಅನಾವರ್ತಕ ವೆಚ್ಚದ
ಸ್ಪೀಕರ್ ಖಾದರ್‌ಕೂಡ ಆದಷ್ಟು ಬೇಗ ಮಾಡಿ ಎಂದು ಸಲಹೆ ನೀಡಿದರು.
ಇದನ್ನೂ ಓದಿ:👇
ಕಾರವಾರದಲ್ಲೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ವೈದ್ಯಕೀಯ ಕಾಲೇಜು ಇರುವುದರಿಂದ ಅಲ್ಲಿಯೇ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪಿಸ ಲಾಗುವುದು ಎಂದು ಕುಮಟಾ ಶಾಸಕರ ಪ್ರಶ್ನೆಗೆ ಸಚಿವ ಡಾ| ಶರಣ ಪ್ರಕಾಶ್ ಪಾಟೀಲ್ ಉತ್ತರಿಸಿದರು.
