ಬೆಂಗಳೂರು: ರಾಜ್ಯದಲ್ಲಿ ಪ್ರವಾಹ ಸ್ಥಿತಿ ಇದೆ. ಇದೀಗ ನಾವು, ‘ಎಲ್ಲಿದ್ದೀಯಪ್ಪ ಯಡಿಯೂರಪ್ಪ’ ಎಂಬುದಾಗಿ ಕೇಳಬೇಕಾಗುತ್ತದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇರುವುದು ಏಕಚಕ್ರಾಧಿಪತ್ಯ. ನನ್ನ ಸರ್ಕಾರ ಈಗ ಇದ್ದಿದ್ದರೆ ಏನೇನು ಟೀಕೆ ಕೇಳಬೇಕಿತ್ತೋ ಎಂದರು.
ನಾನು ಸಿಎಂ ಆಗಿದ್ದಾಗ ರೈತರ ಸಾಲಮನ್ನಾ ಮಾಡಲು ಹಣ ತೆಗೆದಿಟ್ಟಿದ್ದೆ. ಆ ಹಣದಲ್ಲಿ ರೈತರಿಗೆ ಹಣ ಕೊಡ್ತೀನಿ ಎಂದು ಯಡಿಯೂರಪ್ಪ ಹೇಳಿದ್ದಾರೆ. ಪ್ರಧಾನಿ ಮೋದಿ ನೀಡುವ 6 ಸಾವಿರ ರೂ. ಜೊತೆ ನಾನು 4 ಸಾವಿರ ರೂ. ಕೊಡ್ತೀನಿ ಎಂದಿದ್ದಾರೆ. ನಾನು ಸಾಲಮನ್ನಾಕ್ಕಾಗಿ ಮೀಸಲಿಟ್ಟ ಹಣದಲ್ಲಿ ಉಳಿದಿರುವ ಹಣವನ್ನು ಅವರು ಘೋಷಿಸಿದ್ದಾರೆ ಎಂದು ಸರ್ಕಾರದ ವಿರುದ್ಧ ಕುಮಾರಸ್ವಾಮಿ ಕಿಡಿಕಾರಿದ್ದಾರೆ.
ಕರ್ನಾಟಕದಲ್ಲಿ ಸಮಸ್ಯೆ ಹೇಳಿಕೊಳ್ಳೋಕೆ ಮಂತ್ರಿ ಮಂಡಲವೂ ಇಲ್ಲ. ಇದೇನಾ ನಿಮ್ಮ ಜನಮೆಚ್ಚಿನ ಆಡಳಿತ ಮರ್ಯಾದಾ ಪುರುಷೋತ್ತಮರೇ ಎಂದು ಜೆಡಿಎಸ್ ಸಿಎಂ ಬಿ.ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ವಿರುದ್ಧ ಕಿಡಿಕಾರಿದೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…