Featured

ರಾಜ್ಯದಲ್ಲಿ ಬದಲಾವಣೆಯ ಅವಶ್ಯಕತೆಯಿದ್ದು , ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಅಗತ್ಯವಿದೆ : ಮಧು ಬಂಗಾರಪ್ಪ – Vishwanews24

ರಾಜ್ಯದಲ್ಲಿ ಬದಲಾವಣೆಯ ಅವಶ್ಯಕತೆಯಿದ್ದು , ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಅಗತ್ಯವಿದೆ : ಮಧು ಬಂಗಾರಪ್ಪ – Vishwanews24

ಶಿವಮೊಗ್ಗ: ರಾಜ್ಯದಲ್ಲಿ ಬದಲಾವಣೆಯ ಅವಶ್ಯಕತೆಯಿದೆ. ಈ ವಿಧಾನ ಪರಿಷತ್ ಚುನಾವಣೆಯಲ್ಲಿ ಬದಲಾವಣೆಯ ವಾತವರಣ ಕಂಡುಬರುತ್ತಿದೆ. ಜನರಿಗೆ ಸುಳ್ಳು ಹೇಳಿ, ಬಿಜೆಪಿಯವರು ಹಾದಿ ತಪ್ಪಿಸುವ ಕೆಲಸ ಮಾಡಿದ್ದಾರೆ. ಅದರ ಪರಿಣಾಮವಾಗಿ ಹಾನಗಲ್ ಉಪ ಚುನಾವಣೆ ಫಲಿತಾಂಶ ಬಂದಿದೆ.

ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಅಗತ್ಯವಿದೆ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ಕಡೆ ಓಡಾಟ ಮಾಡುತ್ತಿದ್ದೇನೆ. ಆರ್.ಪ್ರಸನ್ನ ಕುಮಾರ್ ಮತ್ತು‌ ಭೀಮಣ್ಣ ನಾಯ್ಕ್ ಪರವಾಗಿ ಉತ್ತಮ ವಾತವರಣವಿದೆ. ಕಳೆದ ಆರು ವರ್ಷ ಅವಧಿಯಲ್ಲಿ ಪ್ರಸನ್ನ ಕುಮಾರ್ ಉತ್ತಮವಾಗಿ ಕೆಲಸ ಮಾಡಿದ್ದಾರೆ ಎಂದರು.

ಗ್ರಾಮ ಪಂಚಾಯತ್ ಸದಸ್ಯರು ನಾವು ಯಾಕದರೂ ಸದಸ್ಯರಾಗಿದ್ದೇವೆ ಎಂದು ಬೇಸತ್ತು ಹೋಗಿದ್ದಾರೆ. ಅನುದಾನ ಇಲ್ಲ, ಯಾವುದೇ ಕೆಲಸ ಇಲ್ಲ. ಜನರಿಂದ ಬಳಸಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಟ್ಟ ಮನೆಗಳಿಗೆ ಇಂದು ಸರ್ಕಾರ ಹಣವನ್ನೇ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿದರು.

ಫಲಾನುಭವಿಗಳು ಇವತ್ತು ಗ್ರಾಮ ಪಂಚಾಯತ್ ಸದಸ್ಯರನ್ನು ಕೇಳುತ್ತಿದ್ದಾರೆ. 15ನೇ ಹಣಕಾಸು ಯೋಜನೆಯಡಿ ಸರ್ಕಾರ ಕ್ರೀಯಾಯೋಜನೆ ರೂಪಿಸುವ ಕೆಲಸ ಮಾಡುತ್ತಿದೆ. ಹಾಗಾದರೆ ಗ್ರಾಮ ಪಂಚಾಯತ್ ಸದಸ್ಯರು ಗೆದ್ದು ಬಂದಿರುವುದು ಯಾವ ಕಾರಣಕ್ಕೆ.? ಬಿಜೆಪಿ ಬೆಂಬಲಿತ ಸದಸ್ಯರುಗಳೇ ಇಂದು ಬೇಸತ್ತು ಕಾಂಗ್ರೆಸ್ ಪರವಾಗಿದ್ದಾರೆ. ಜೊತೆಗೆ ಜಿಲ್ಲೆಯಲ್ಲಿನ ಜೆಡಿಎಸ್ ಬೆಂಬಲಿತ ಸದಸ್ಯರುಗಳು ನಮ್ಮ ಪರವಾಗಿಯೇ ಇದ್ದಾರೆ. ಆರ್.ಪ್ರಸನ್ನಕುಮಾರ್ ಉತ್ತಮ ಅಂತರದಲ್ಲೇ ಈ ಬಾರಿ ಗೆಲ್ಲಲಿದ್ದಾರೆ. ಜಿಲ್ಲೆಯ ಜನಪ್ರತಿನಿಧಿಗಳ ಪರವಾಗಿ ಪರಿಷತ್ ನಲ್ಲಿ ಪ್ರಸನ್ನ ಕುಮಾರ್ ಧ್ವನಿಯಾಗಲಿದ್ದಾರೆ ಎಂದ ಮಧು ಬಂಗಾರಪ್ಪ ಹೇಳಿದರು.

Vishwa News 24

Recent Posts

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

2 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

3 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

3 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

5 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

5 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

1 day ago