Featured

ರಾಜ್ಯದಲ್ಲಿ ಬಿಜೆಪಿ ಇಲ್ಲದಂತೆ ಮಾಡಲು “ಆಪರೇಷನ್‌ ಜೆಡಿಎಸ್‌” ಮಾಡುತ್ತೇವೆ: ಸುರೇಶ್‌ಗೌಡ

ಮಂಡ್ಯ: ‘ಕೆಲ ಬಿಜೆಪಿ ಶಾಸಕರು ನನ್ನ ಜೊತೆ ಉತ್ತಮ ಸಂಬಂಧ ಹೊಂದಿದ್ದಾರೆ. ಅವರನ್ನು ನಮ್ಮ ಪಕ್ಷದತ್ತ ಹೇಗೆ ಸೆಳೆಯಬೇಕು ಎಂಬುದು ಚೆನ್ನಾಗಿ ಗೊತ್ತು. ನಮ್ಮ ಪಕ್ಷದ ವರಿಷ್ಠರು ಸೂಚನೆ ಕೊಟ್ಟರೆ ಆಪರೇಷನ್‌ ಜೆಡಿಎಸ್‌ ಮಾಡಿ ತೋರಿಸುತ್ತೇವೆ. ರಾಜ್ಯದಲ್ಲಿ ಬಿಜೆಪಿ ಇಲ್ಲದಂತೆ ಮಾಡುತ್ತೇವೆ’ ಎಂದು ನಾಗಮಂಗಲ ಶಾಸಕ ಸುರೇಶ್‌ಗೌಡ ಹೇಳಿದರು.

ಮದ್ದೂರು ತಾಲ್ಲೂಕು ಆಬಲವಾಡಿ ಗ್ರಾಮದಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ಬಿಜೆಪಿ ಸೇರುವಂತೆ ನನಗೂ ಕೆಲವು ಬ್ರೋಕರ್‌ಗಳು ಆಮಿಷ ತೋರಿಸಿದ್ದರು. ಆದರೆ, ನಾನು ಮಾರಾಟಕ್ಕಿಲ್ಲ ಎಂದು ಅವರಿಗೆ ಹೇಳಿದೆ. ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿ ಅಧಿಕಾರ ಸ್ವೀಕಾರ ಮಾಡಿದ ದಿನದಿಂದಲೂ ಬಿಜೆಪಿ ಮುಖಂಡರು ಜೆಡಿಎಸ್‌, ಕಾಂಗ್ರೆಸ್‌ ಶಾಸಕರಿಗೆ ಆಮಿಷ ತೋರುತ್ತಿದ್ದಾರೆ. ಎಚ್‌.ಡಿ.ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್‌ ಹಾಗೂ ಕೆಲ ಸಚಿವರನ್ನು ಹೊರತುಪಡಿಸಿ ಎಲ್ಲರಿಗೂ ಆಮಿಷ ಒಡ್ಡಿದ್ದಾರೆ’ ಎಂದು ಹೇಳಿದರು.

‘ಬ್ರೋಕರ್‌ಗಳು ಎಲ್ಲಾ ಪಕ್ಷದವರ ಜೊತೆ ಸ್ನೇಹದಿಂದ ಇರುತ್ತಾರೆ. ಸ್ನೇಹಿತರ ಸೋಗಿನಲ್ಲಿ ಬಿಜೆಪಿ ಸೇರುವಂತೆ ಒತ್ತಡ ತರುತ್ತಾರೆ. ಅದರಂತೆ ನನಗೂ ಆಹ್ವಾನ ಕೊಟ್ಟರು, ಆದರೆ ನಾನು ತಿರಸ್ಕರಿಸಿದೆ. ಆಪರೇಷನ್‌ ಮಾಡುವುದು ಕಷ್ಟವಲ್ಲ, ಆದರೆ ಮತ್ತೊಮ್ಮೆ ಗೆದ್ದು ಬರುವುದು ಕಷ್ಟ’ ಎಂದರು.

 

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

2 days ago