Featured

ರಾಜ್ಯದಲ್ಲಿ ಬ್ಯಾನ್ ಆಗುತ್ತಾ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ? ಇಂದು ಸರ್ಕಾರದಿಂದ ಅಧಿಕೃತ ಘೋಷಣೆ ಸಾಧ್ಯತೆ .. Vishwanews24

ರಾಜ್ಯದಲ್ಲಿ ಬ್ಯಾನ್ ಆಗುತ್ತಾ ಗೋಬಿ ಮಂಚೂರಿ, ಕಾಟನ್ ಕ್ಯಾಂಡಿ? ಇಂದು ಸರ್ಕಾರದಿಂದ ಅಧಿಕೃತ ಘೋಷಣೆ ಸಾಧ್ಯತೆ

ಬೆಂಗಳೂರು: ರಾಜ್ಯಾದ್ಯಂತ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿ ತಯಾರಿಕೆಯಲ್ಲಿ ರಾಸಾಯನಿಕ ಅಂಶಗಳ ಬಳಕೆಯ ಕುರಿತಂತೆ ಇಂದು ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ಈ ಕುರಿತು ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸುದ್ದಿಗೋಷ್ಠಿ ನಡೆಸಲಿದ್ದು, ಈಗಾಗಲೆ ಸರ್ಕಾರದ ಕೈ ಸೇರಿರುವ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿ ಪರೀಕ್ಷಾ ವರದಿಯ ಮಾಹಿತಿಯನ್ನು ಹಂಚಿಕೊಳ್ಳಲಿದ್ದಾರೆ.

ರಾಜ್ಯಾದ್ಯಂತ ಗೋಬಿ ಮಂಚೂರಿ ಹಾಗೂ ಕಾಟನ್ ಕ್ಯಾಂಡಿ ತಯಾರಿಕೆಯಲ್ಲಿ ರಾಸಾಯನಿಕ ಅಂಶಗಳನ್ನು ಬಳಸಲಾಗುತ್ತಿದ್ದು, ಇದು ಆರೋಗ್ಯಕ್ಕೆ ಮಾರಕವೆಂದು ಪತ್ತೆಯಾಗಿದೆ. ಈ ಹಿನ್ನೆಲೆ ರಾಜ್ಯದಾದ್ಯಂತ ಮಾರಾಟವಾಗುತ್ತಿರುವ ಗೋಬಿ ಮಂಚೂರಿ ಮತ್ತು ಕಾಟನ್‌ ಕ್ಯಾಂಡಿಗಳ ಮಾದರಿಗಳನ್ನು ಸಂಗ್ರಹಿಸಿ ರಾಜ್ಯ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೆ ಒಳಪಡಿಸಲಾಗಿತ್ತು. ಇದರಲ್ಲಿ ರಾಜ್ಯಾದ್ಯಂತ ಗೋಬಿ ಮಂಚೂರಿ ತಯಾರಿಕೆಯಲ್ಲಿ ಕೃತಕ ಬಣ್ಣ ಬಳಕೆ ಹಾಗೂ ಕಾಟನ್ ಕ್ಯಾಂಡಿಯಲ್ಲಿ ‘ರೋಡಮೈನ್‌–ಬಿ’ ಹಾಗೂ ನಿಗದಿತ ಪ್ರಮಾಣಕ್ಕಿಂತ ಹೆಚ್ಚಿನ ಕೃತಕ ಬಣ್ಣ ಬಳಕೆ ಮಾಡಲಾಗುತ್ತಿದೆ. ಇದು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಪತ್ತೆಯಾಗಿದೆ. ಆದ್ದರಿಂದ ಈ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರವನ್ನು ಕೈಗೊಳ್ಳುವ ಸಾಧ್ಯತೆ ಇದೆ.

ರಾಜ್ಯ ಪ್ರಯೋಗಾಲಯಗಳಲ್ಲಿ ವಿಶ್ಲೇಷಣೆಗೆ ಒಳಪಡಿಸಲಾಗಿದ್ದ 170ಕ್ಕೂ ಹೆಚ್ಚು ಕಡೆ ಗೋಬಿ ಮಂಚೂರಿ ಮಾದರಿಗಳಲ್ಲಿ 100ಕ್ಕೂ ಹೆಚ್ಚು ಕಡೆಯ ಗೋಬಿ ಮಂಚೂರಿ ಮಾದರಿಗಳು ಅಸುರಕ್ಷಿತ ಎಂದು ಪತ್ತೆಯಾಗಿದೆ. ಜೊತೆಗೆ ಕಾಟನ್ ಕ್ಯಾಂಡಿಯಲ್ಲೂ ಆರೋಗ್ಯಕ್ಕೆ ಮಾರಕವಾದ ಅಂಶ ಪತ್ತೆಯಾಗಿದೆ. ಈ ಹಿನ್ನೆಲೆ ತಜ್ಞರು ಕೂಡಾ ಈ ಆಹಾರ ಸೇವನೆ ಅಪಾಯಕಾರಿ ಎಂದು ತಿಳಿಸಿದ್ದಾರೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

1 day ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 day ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

1 day ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

1 day ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

1 day ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 day ago