ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಅಬ್ಬರಿಸುತ್ತಿರುವ ವರುಣನ ಆರ್ಭಟ ಮುಂದುವರೆಯುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಬೆಂಗಳೂರಿಗೆ ಇಂದು (ಬುಧವಾರ) ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಬುಧವಾರ, ಗುರುವಾರ ಎರಡು ದಿನ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದೇ ಕಾರಣಕ್ಕೆ ಇಂದು ನಗರದ ಪ್ರಾಥಮಿಕ, ಫ್ರೌಡಶಾಲೆ, ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಿ ಬೆಂಗಳೂರು ಜಿಲ್ಲಾಧಿಕಾರಿ ಜಗದೀಶ್ ಆದೇಶ ಹೊರಡಿಸಿದ್ದಾರೆ. ಇತ್ತ ಮಳೆ ಹೆಚ್ಚಾಗಿದ್ದರ ಎಫೆಕ್ಟ್ ಐಟಿ ವಲಯಗಳಿಗೂ ತಟ್ಟಿದ್ದು, ಅಲರ್ಟ್ ಘೋಷಣೆ ಹಿನ್ನೆಲೆ ಹಲವು ಕಂಪನಿಗಳು ತಮ್ಮ ಸಿಬ್ಬಂದಿಗಳ ಹಿತ ದೃಷ್ಟಿಯಿಂದ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡಿವೆ.
ಇತ್ತ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳಲ್ಲೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದ್ದು, 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಹಾವೇರಿ, ಮೈಸೂರು, ಮಂಡ್ಯ, ರಾಮನಗರ, ಹಾಸನ, ಕೊಡಗು ತುಮಕೂರು, ಚಿತ್ರದುರ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…